HOME » NEWS » State » MIDDAY WORKERS TO LAUNCH STIR DEMANDING STAFF SALARY HIKE IN BENGALURU GNR

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಬೆಂಗಳೂರಿನಲ್ಲಿ ಬಿಸಿಯೂಟ ಕಾರ್ಯಕರ್ತೆಯರು; ಅಹೋರಾತ್ರಿ ಧರಣಿಗೆ ನಿರ್ಧಾರ

ಇನ್ನು, ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಹಿಂತೆಗೆದುಕೊಳ್ಳುವ ಮಾತೇ ಇಲ್ಲ. ಪೊಲೀಸರು ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಹಕ್ಕಿಗಾಗಿ ಪ್ರತಿಭಟಿಸುವುದೇ ತಪ್ಪೇ ಎಂದು ಪ್ರತಿಭಟನಾನಿರತ ಬಿಸಿಯೂಟ ಕಾರ್ಯಕರ್ತರು ಪ್ರಶ್ನಿಸಿದರು.

news18-kannada
Updated:February 3, 2020, 4:27 PM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ಬೆಂಗಳೂರಿನಲ್ಲಿ ಬಿಸಿಯೂಟ ಕಾರ್ಯಕರ್ತೆಯರು; ಅಹೋರಾತ್ರಿ ಧರಣಿಗೆ ನಿರ್ಧಾರ
ಬಿಸಿಯೂಟ ಕಾರ್ಯಕರ್ತರು
  • Share this:
ಬೆಂಗಳೂರು(ಫೆ.03): ಇಂದು ಕನಿಷ್ಠ ವೇತನ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಎಂಬುವರ ನೇತೃತ್ವದಲ್ಲಿ ಬಿಸಿಯೂಟ ಕಾರ್ಯಕರ್ತರು ಬೃಹತ್​​ ಪ್ರತಿಭಟನೆ ನಡೆಸಿದರು. ಪೊಲೀಸ್​​ ಅನುಮತಿ ನಿರಕಾರಣೆ ನಡುವೆಯೂ ಬಿಸಿಯೂಟ ಕಾರ್ಯಕರ್ತರು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿಯೇ ಪ್ರತಿಭಟನೆಗೆ ಮುಂದಾದರು. ಇಲ್ಲಿನ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್‍ವರೆಗೂ ಪಾದಯಾತ್ರೆಗೆ ಯತ್ನಿಸಿದಾದ ಪ್ರತಿಭಟನೆ ನೇತೃತ್ವವಹಿಸಿದ್ದ ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ಧಾರೆ.

ತಮಗೆ ಸೇವಾ ಭದ್ರತೆಗೆ ಕಲ್ಪಿಸಬೇಕು. ಹಾಗೆಯೇ ಖಾಸಗಿ ಸಂಸ್ಥೆಗಳಿಗೆ ಬಿಸಿಯೂಟ ನಿರ್ವಹಣೆ ವಹಿಸುವ ಕೆಲಸ ಮಾಡಬಾರದು. ಬಿಸಿಯೂಟ ಕಾರ್ಯಕರ್ತರನ್ನು ಕಾರ್ಮಿಕರನ್ನು ಎಂದು ಪರಿಗಣಿಸಬೇಕು. ಜತೆಗೆ ರಾಜ್ಯ ಕಾರ್ಮಿಕ ಕಾಯ್ದೆಯಡಿ ನಮಗೆ ಸಿಗಬಹುದಾದ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಸಿಯೂಟ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿಗೆ ಪ್ರತಿಭಟನೆಗೆ ಬಿಸಿಯೂಟ ಕಾರ್ಯಕರ್ತರು ಆಗಮಿಸಿದ್ದರು. ದಾವಣಗೆರೆ, ಹಾವೇರಿ, ಗದಗ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ರಾಮನಗರ, ತುಮಕೂರು, ಬೀದರ್, ಯಾದಗಿರಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಬಿಸಿಯೂಟ ಕಾರ್ಯಕರ್ತೆಯರು ಈಗ ಪ್ರತಿಭಟನೆ ಮುಂದುವರೆಸಿದ್ಧಾರೆ. ಪೊಲೀಸರು ಪ್ರತಿಭಟನೆಗೆ ಅವಕಾಶ ನೀಡದ ಕಾರಣ ಅಹೋರಾತ್ರಿ ಧರಣಿಗೆ ಮುಂದಾಗಿದ್ಧಾರೆ.

ಇದನ್ನೂ ಓದಿ: ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ; ಸಿಐಟಿಯು ರಾಜ್ಯಾಧ್ಯಕ್ಷೆ ಪೊಲೀಸರ ವಶಕ್ಕೆ

ಈಗಾಗಲೇ ಮುಂಜಾಗೃತ ಕ್ರಮವಾಗಿ ರಾಜ್ಯ ಅಕ್ಷರ ದಾಸೋಹ ಗೌರವ ಅಧ್ಯಕ್ಷೆ ವರಲಕ್ಷ್ಮಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ಧಾರೆ. ಪೊಲೀಸರು ವಶಕ್ಕೆ ಪಡೆಯುವ ಮುನ್ನಾ ಸುದ್ದಿಗಾರರೊಂದಿಗೆ ಮಾತಾಡಿದ ಹೋರಾಟಗಾರ್ತಿ ವರಲಕ್ಷ್ಮಿ, ಮುಖ್ಯ ಅಡುಗೆಯವರಿಗೆ 2,700 ರೂ. ಸಹಾಯಕ ಅಡುಗೆಯವರಿಗೆ 2,600 ರೂ. ನೀಡಲಾಗುತ್ತಿದೆ. ರಾಜ್ಯ ಸರ್ಕಾರ ಶೇ.75ರಷ್ಟು , ಕೇಂದ್ರ ಶೇ.25ರಷ್ಟು ಹಣ ಪಾವತಿ ಮಾಡುತ್ತಿದೆ. ಈ ಕೂಡಲೇ ಬಿಸಿಯೂಟ ಕಾರ್ಯಕರ್ತರ ವೇತನ ಹೆಚ್ಚಳ ಮಾಡಬೇಕೆಂದರು.

ಇನ್ನು, ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಹಿಂತೆಗೆದುಕೊಳ್ಳುವ ಮಾತೇ ಇಲ್ಲ. ಪೊಲೀಸರು ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಹಕ್ಕಿಗಾಗಿ ಪ್ರತಿಭಟಿಸುವುದೇ ತಪ್ಪೇ ಎಂದು ಪ್ರತಿಭಟನಾನಿರತ ಬಿಸಿಯೂಟ ಕಾರ್ಯಕರ್ತರು ಪ್ರಶ್ನಿಸಿದರು.

ರಾಜ್ಯದ ಹಲವು ಪ್ರತಿಭಟನೆಗೆ ಹೊರಟ ಕಾರ್ಯಕರ್ತರನ್ನು ತಡೆಯುವ ಕೆಲಸ ಪೊಲೀಸರು ಮಾಡುತ್ತಿದ್ಧಾರೆ. ನಮ್ಮ ಬೇಡಿಕೆ ಈಡೇರುವವರೆಗೆ ನಾವು ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ. ಕೇವಲ 2,700 ರೂ.ಗಳಲ್ಲಿ ಜೀವನ ಮಾಡುವುದು ಹೇಗೆ? ಸರ್ಕಾರ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಹಲವಾರು ಬಾರಿ ಹೋರಾಟ ಮಾಡಿದ್ದೇವೆ. ಸರ್ಕಾರ ನಮ್ಮ ಹೋರಾಟಕ್ಕೆ ಸ್ಪಂದಿಸಿಲ್ಲ. ಹೀಗಾಗಿ ಅಹೋರಾತ್ರಿ ಧರಣಿಗೆ ನಿರ್ಧರಿಸಿದ್ದೇವೆ ಎಂದರು ಸಂಘಟಕರು.
Youtube Video
First published: February 3, 2020, 4:04 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories