HOME » NEWS » State » MINING MINISTER MURUGESH NIRANI REACTION ABOUT CHIKKABALLAPUR GELATIN BLAST DBDEL LG

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಪೋಟ ಘಟನೆ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ ಗಣಿ ಸಚಿವ ಮುರುಗೇಶ್ ನಿರಾಣಿ

ಘಟನೆ ನಡೆದ ನಂತರ ಕೆಲವರು ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ. ಪೊಲೀಸರು ತಕ್ಷಣವೇ ಅವರನ್ನು ಬಂಧಿಸುವ ವಿಶ್ವಾಸವಿದೆ. ಘಟನೆಗೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು.

news18-kannada
Updated:February 23, 2021, 2:27 PM IST
ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಪೋಟ ಘಟನೆ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ ಗಣಿ ಸಚಿವ ಮುರುಗೇಶ್ ನಿರಾಣಿ
ಮುರುಗೇಶ್ ನಿರಾಣಿ.
  • Share this:
ನವದೆಹಲಿ (ಫೆ.23): ಚಿಕ್ಕಬಳ್ಳಾಪುರ ಜಿಲ್ಲೆ ಗುಂಡಿಬಂಡೆ ತಾಲ್ಲೂಕಿನ ಹಿರೇನಾಗವಲ್ಲಿಯಲ್ಲಿ ಜೆಲಿಟಿನ್ ಕಡ್ಡಿ ಸೋಟಿಸಿ ಆರು ಮಂದಿ ಸಾವನ್ನಪ್ಪಿರುವ ಘಟನೆಗೆ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್. ಆರ್. ನಿರಾಣಿ ದಿಗ್ಬ್ರಾಂತಿ ವ್ಯಕ್ತಪಡಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಅವರು, ಮೃತರ ಕುಟುಂಬ ಸದಸ್ಯರಿಗೆ ಮತ್ತು ಗಾಯಾಳುಗಳಿಗೆ ಎಲ್ಲಾ ನೆರವು ನೀಡುವ ಭರವಸೆ ನೀಡಿದ್ದಾರೆ.

ಶಿವಮೊಗ್ಗ ಸೋಟದ ನಂತರ ಮತ್ತೊಂದು ದುರಂತ  ನಡೆದಿರುವುದು, ಸ್ಪೋಟದಲ್ಲಿ ಆರು ಜನರು ಪ್ರಾಣ ಕಳೆದುಕೊಂಡಿರುವುದು ತುಂಬಾ ನೋವು ತಂದಿದೆ. ಇದು ಅತ್ಯಂತ ದುರದೃಷ್ಟಕರ ಘಟನೆ. ಸಂತ್ರಸ್ತರ ಕುಟುಂಬಗಳಿಗೆ ನನ್ನ ಸಂತಾಪ ವ್ಯಕ್ತಪಡಿಸುತ್ತೇನೆ. ಗಾಯಾಳುಗಳ ಶೀಘ್ರ ಚೇತರಿಕೆಗಾಗಿ  ದೇವರಲ್ಲಿ ಪ್ರಾರ್ಥಿಸುತ್ತೇನೆ. ಸಂತ್ರಸ್ತರ ಕುಟುಂಬಗಳಿಗೆ ಮತ್ತು ಗಾಯಗೊಂಡ ವ್ಯಕ್ತಿಗೆ ಸರ್ಕಾರ ಎಲ್ಲಾ ಸಹಾಯವನ್ನು ನೀಡಲಿದೆ. ಘಟನೆಗೆ ಕಾರಣರಾದ ಆರೋಪಿಗಳ ವಿರುದ್ಧ ಕಠಿಣ ಕಾನೂನು ತೆಗೆದುಕೊಳ್ಳಲಾಗುವುದು. ಭವಿಷ್ಯದಲ್ಲಿ ಇಂಥ ದುರಂತಗಳು ಮರುಕಳಿಸದಂತೆ ಎಚ್ಚರವಹಿಸಲು ನುರಿತ ಕೆಲಸಗಾರರಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು.

ಶಿವಮೊಗ್ಗ ಸೋಟಕ್ಕೆ ಮೊದಲೇ ಸೋಟಕಗಳನ್ನು ಸಂಗ್ರಹಿಸಿಡಲಾಗಿತ್ತೇ?  ಎಂಬ ಬಗ್ಗೆ ನಾನು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಯಾರು ಎಷ್ಟೇ ಪ್ರಭಾವ ಬೀರಿದರೂ ಆರೋಪಿಗಳನ್ನು ರಕ್ಷಣೆ ಮಾಡಲು ಬಿಡುವುದಿಲ್ಲ. ಘಟನೆ ನಡೆದ ನಂತರ ಕೆಲವರು ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ಬಂದಿದೆ. ಪೊಲೀಸರು ತಕ್ಷಣವೇ ಅವರನ್ನು ಬಂಧಿಸುವ ವಿಶ್ವಾಸವಿದೆ. ಘಟನೆಗೆ ಕಾರಣರಾದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು.

ಕೆಲವು ಅಧಿಕೃತ ಕೆಲಸಗಳಿಂದಾಗಿ ದೆಹಲಿಯಲ್ಲಿದ್ದೇನೆ. ಸಂಜೆ ಬೆಂಗಳೂರಿಗೆ ಬಂದಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡುತ್ತೇನೆ. ಸಚಿವರಾದ ಬಸವರಾಜ್ ಬೊಮ್ಮಾಯಿ, ಡಾ. ಸುಧಾಕರ್, ಡಿಸಿ, ಎಸ್ಪಿ ಮತ್ತು ನಮ್ಮ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ ಎಂದರು.

ಚಿಕ್ಕಬಳ್ಳಾಪುರ ಜಿಲೆಟಿನ್​ ಸ್ಪೋಟ ಪ್ರಕರಣ; ಹೈಕೋರ್ಟ್​​ ನ್ಯಾಯಾಧೀಶರಿಂದ ತನಿಖೆಗೆ ಸಿದ್ದರಾಮಯ್ಯ ಆಗ್ರಹ

ಇನ್ನು ಮುಂದೆ ಕಲ್ಲು ಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಸರ್ಕಾರದಿಂದ ಅನುಮತಿ ಪಡೆದವರು ಮಾತ್ರ ಸೋಟಕ ವಸ್ತುಗಳನ್ನು ಬಳಸಲು ಹೊಸ ಕಾನೂನು ಜಾರಿ ಮಾಡುತ್ತೇವೆ. ಕೆಲವರು ಕಾನೂನು ಬಾಹಿರವಾಗಿ  ಕಲ್ಲು ಕ್ವಾರಿ ಮತ್ತು ಗಣಿ ಪ್ರದೇಶಗಳಲ್ಲಿ ಸ್ಪೋಟಕ ವಸ್ತುಗಳನ್ನು ಬಳಕೆ  ಮಾಡುತ್ತಿರುವುದರಿಂದಲೇ ಇಂಥ ಘಟನೆಗಳು ನಡೆಯುತ್ತವೆ ಎಂದು ಹೇಳಿದರು.

ಇದನ್ನು ತಡೆಯಲು ಸದ್ಯದಲ್ಲೇ ಹೊಸ ಕಾನೂನು ಜಾರಿ ಮಾಡಲಾಗುವುದು. ಸರ್ಕಾರದಿಂದ  ಲೈಸೆನ್ಸ್ ಪಡೆದವರು ಮಾತ್ರ ಸ್ಪೋಟಕ ವಸ್ತುಗಳನ್ನು ಬಳಸುವ ಕಾನೂನು  ಜಾರಿ ಮಾಡಲಾಗುವುದು. ಕೆಲವು ಕಡೆ ಕಾನೂನು ಬಾಹಿರವಾಗಿ  ಕಲ್ಲುಗಣಿಗಾರಿಕೆ ಚಟುವಟಿಕೆಗಳು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈಗಾಗಲೇ ಇದನ್ನು ತಡೆಗಟ್ಟಲು ಇಲಾಖಾ ಮಟ್ಟದಲ್ಲಿ ಹಲವಾರು ಬಿಗಿಯಾದ ಕ್ರಮಗಳನ್ನು ಕೈಗೊಂಡಿದ್ದೇವೆ.  ಒಂದು ವೇಳೆ ನಮ್ಮ ಅಧಿಕಾರಿಗಳು ಇಂಥಹುದರಲ್ಲಿ ಭಾಗಿಯಾಗಿರುವುದು ಕಂಡುಬಂದರೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಸಿದರು.

ಈ ಘಟನೆಗಳು ನುರಿತ ಕೆಲಸಗಾರರಿಗೆ ತರಬೇತಿ ಮತ್ತು ಗಣಿಗಾರಿಕೆ ಶಾಲೆಯ ಸ್ಥಾಪನೆಯ ಮಹತ್ವವನ್ನು ನಮಗೆ ನೆನಪಿಸುತ್ತವೆ. ಗಣಿಗಾರಿಕೆ ಚಟುವಟಿಕೆಗಳಲ್ಲಿ ತೊಡಗಿರುವ ಜನರಿಗೆ ಗಣಿಗಾರಿಕೆ ಸ್ಥಳಗಳಲ್ಲಿ ಜಿಲಿಟಿನ್ ಕಡ್ಡಿಗಳು ಸೋಟಕಗಳು ಮತ್ತು ಇತರ ಸೋಟಕ ವಸ್ತುಗಳನ್ನು ಎಚ್ಚರಿಕೆಯಿಂದ ನಿರ್ವಹಿಸುವ ಬಗ್ಗೆ ತರಬೇತಿ ನೀಡುವ ಅಗತ್ಯವಿದೆ. ಆದುದರಿಂದ ರಾಜ್ಯದಲ್ಲಿ ಗಣಿಗಾರಿಕೆ ಶಾಲೆಯನ್ನು ಸ್ಥಾಪಿಸಲು ತೀರ್ಮಾನಿಸಿದ್ದೇವೆ. ಜೊತೆಗೆ  ಗಣಿಗಾರಿಕೆ ಪ್ರದೇಶಗಳಲ್ಲಿನ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ ಎಂದು  ಹೇಳಿದರು.
Published by: Latha CG
First published: February 23, 2021, 2:26 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories