Anand Singh| ಅಸಮಾಧಾನ ಕೈಬಿಟ್ಟ ಆನಂದ್ ಸಿಂಗ್; ಇಂದು ಪರಿಸರ ಇಲಾಖೆ ಅಧಿಕಾರಿಗಳ ಜೊತೆ ಸಭೆ!
ಮಾಲಿನ್ಯದ ವಿರುದ್ಧ ಸಮರಸಾರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ, ಗಣೇಶ ಹಬ್ಬ ಆಚರಣೆಗೆ ವಿನೂತನ ಪ್ರಯತ್ನ ನಡೆಸಲು ಮುಂದಾಗಿದ್ದು, 10 ಲಕ್ಷ ಅರಿಶಿನ ಗಣೇಶ ಮೂರ್ತಿ ರಚನೆಗೆ ಅನುಮತಿ ನೀಡಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು (ಆಗಸ್ಟ್ 25); ಖಾತೆ ವಿಚಾರಕ್ಕೆ ಮುನಿಸಿಕೊಂಡಿದ್ದ ಸಚಿವ ಆನಂದ್ ಸಿಂಗ್ ಇತ್ತೀಚೆಗೆ ದೆಹಲಿಗೆ ತೆರಳಿ ಪ್ರಬಲ ಖಾತೆಯನ್ನು ಪಡೆಯಲು ಲಾಭಿ ನಡೆಸಿದ್ದರು. ಆದರೆ, ಇದು ಸಾಧ್ಯವಾಗದಿದ್ದಾಗ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಮಾತುಗಳು ರಾಜ್ಯ ರಾಜಕಾರಣದಲ್ಲಿ ಕೇಳಿ ಬರುತ್ತಿದ್ದವು. ಆದರೆ ಈ ಮುನಿಸು ಸದ್ಯಕ್ಕೆ ಶಮನವಾಗಿದೆ ಎನ್ನಲಾಗಿದ್ದು, ಆನಂದ್ ಸಿಂಗ್ ಕೊನೆಗೂ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಲ್ಲದೆ, ಇಂದು ಮೊದಲ ಬಾರಿಗೆ ಪರಿಸರ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಲಿ ಅಧಿಕಾರಿಗಳ ಸಭೆ ನಡೆಸಿದ್ದು, ಮಾಲಿನ್ಯ ನಿಯಂತ್ರಣದ ಬಗ್ಗೆ ಹಲವು ಸೂಚನೆಗಳನ್ನು ನೀಡಿದ್ದಾರೆ ಎಂದು ಹೇಳಲಾಗಿದೆ.
ಇಂದು ಪರಿಸರ ಇಲಾಖೆ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ಸಚಿವ ಆನಂದ್ ಸಿಂಗ್, "ಮಾಲಿನ್ಯದ ವಿರುದ್ಧ ಸಮರಸಾರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೆ, ಗಣೇಶ ಹಬ್ಬ ಆಚರಣೆಗೆ ವಿನೂತನ ಪ್ರಯತ್ನ ನಡೆಸಲು ಮುಂದಾಗಿದ್ದು, 10 ಲಕ್ಷ ಅರಿಶಿನ ಗಣೇಶ ಮೂರ್ತಿ ರಚನೆಗೆ ಅನುಮತಿ ನೀಡಲಾಗಿದೆ. ಅರಿಶಿನ ಆರೋಗ್ಯ ಒಳ್ಳೆಯದೆಂಬ ಹಿನ್ನೆಲೆ ಅನುಮತಿ ನೀಡಲಾಗಿದೆ.
ಆರಿಶಿನ ಗಣಪತಿ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದ್ದು, ಜೊತೆಗೆ ನೀರಿಗೆ ರಾಸಾಯನಿಕ ಸೇರಿಸುವವರಿಗೆ ಎಚ್ಚರಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ. ಒಂದು ವೇಳೆ ರಸಾಯನಿಕ ಸೇರಿಸಿದರೆ ಕೇಸ್ ದಾಖಲಿಸುವಂತೆಯೂ ಸಚಿವ ಆನಂದ್ ಸಿಂಗ್ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ" ಎಂದು ತಿಳಿದುಬಂದಿದೆ.
ಇದಲ್ಲದೆ, ನೀರಿನಲ್ಲಿ ವಿಷ ಬೆರೆಸುವ ವಿಚಾರದ ಬಗ್ಗೆಯೂ ಮಾತನಾಡಿರುವ ಸಚಿವ ಆನಂದ್ ಸಿಂಗ್, "ಈ ಬಗ್ಗೆ ವಿಶೇಷ ಕಾನೂನು ತರುವ ಬಗ್ಗೆಯೂ ಚರ್ಚೆ ನಡೆಸಲಾಗಿದ್ದು, ಈ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಅಲ್ಲದೆ ನೀರಿಗೆ ವಿಷ ಬೆರೆಸುವವರ ವಿರುದ್ಧ ಮರ್ಡರ್ ಕೇಸ್ ಹಾಕುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ" ಎಂದು ಅವರು ತಿಳಿಸಿದ್ದಾರೆ.
ಸಚಿವ ಆನಂದ್ ಸಿಂಗ್ ಅವರು ತಮ್ಮ ರಾಜೀನಾಮೆ ನಿರ್ಧಾರ ತಿಳಿಸಲು ನಿನ್ನೆಯೇ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಲು ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ್ದರು. ಸಿಂಗ್ ಜೊತೆಗೆ ರಾಜೂಗೌಡ ಕೂಡ ಬಂದಿದ್ದರು. ಸಿಎಂ ಬೊಮ್ಮಾಯಿ ಆನಂದ್ ಸಿಂಗ್ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ದುಡುಕಿನ ನಿರ್ಧಾರ ಕೈಗೊಳ್ಳಬೇಡಿ, ಇರುವ ಖಾತೆಯಲ್ಲೇ ಮುಂದುವರೆಯಿರಿ.
ನಾಳೆ ನಾನು ದೆಹಲಿಗೆ ಹೋಗುತ್ತಿದ್ದೇನೆ. ನಿಮ್ಮ ಖಾತೆ ಬದಲಾವಣೆ ಸಂಬಂಧ ವರಿಷ್ಠರ ಜೊತೆ ಚರ್ಚೆ ಮಾಡುತ್ತೇನೆ. ಅಲ್ಲಿ ತನಕ ಸ್ವಲ್ಪ ತಾಳ್ಮೆಯಿಂದ ಇರಿ ಎಂದು ಬೊಮ್ಮಾಯಿ ಸಿಂಗ್ಗೆ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಇದಕ್ಕೆ ಒಪ್ಪಿದ್ದರಿಂದಲೇ ಆನಂದ್ ಸಿಂಗ್ ತಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿ ನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ