NEP-2020| ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಕೇಸರೀಕರಣವೆಂಬ ವಾದದಲ್ಲಿ ಹುರುಳಿಲ್ಲ; ಸಚಿವ ಅಶ್ವಥ್​ ನಾರಾಯಣ್

ಎನ್ಇಪಿ-2020ಯನ್ನು ಅನುಷ್ಠಾನ ಮಾಡಲು ಯೋಜನೆ ರೂಪಿಸಲಾಗಿದೆ, ಆತುರದಲ್ಲಿ ಶಿಕ್ಷಣ ನೀತಿ ಅನುಷ್ಠಾನಗೊಳಿಸಲಾಗಿಲ್ಲ. ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಕ್ರಮ‌ಕೈಗೊಳ್ಳಲಾಗುತ್ತಿದೆ. ಶಿಕ್ಷಣ ಕ್ಷೇತ್ರದ ಮೂಲತತ್ವಗಳಲ್ಲಿ ಸುಧಾರಣೆ ಮಾಡಲಾಗುತ್ತಿದೆ ಎಂದು ಸಚಿವ ಅಶ್ವಥ್​ ನಾರಾಯಣ್ ತಿಳಿಸಿದ್ದಾರೆ.

ಡಾ. ಅಶ್ವಥ್ ನಾರಾಯಣ್

ಡಾ. ಅಶ್ವಥ್ ನಾರಾಯಣ್

 • Share this:
  ಮಂಗಳೂರು (ಆಗಸ್ಟ್​ 30); ಹಲವು ಅಡೆತಡೆ ಮತ್ತು ವಿರೋಧ ಪಕ್ಷಗಳ ವ್ಯಾಪಕ ವಿರೋಧದ ನಡುವೆಯೂ ರಾಜ್ಯ ಸರ್ಕಾರ ತನ್ನ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ನು ಜಾರಿಗೆ ತಂದಿದೆ. ಈ ಶಿಕ್ಷಣ ನೀತಿ ಕೇಸರೀಕರಣಕ್ಕೆ ಒತ್ತು ನೀಡುತ್ತದೆ, ಕೇಸರೀಕರಣಕ್ಕಾಗಿಯೇ ರಾಜ್ಯ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ಜಾರಿಗೆ ತರುತ್ತಿದೆ ಎಂದು ವಿರೋಧ ಪಕ್ಷಗಳು ವ್ಯಾಪಕವಾಗಿ ಖಂಡಿಸುತ್ತಿದೆ. ಆದರೆ, ಈ ಬಗ್ಗೆ ಇಂದು ಮಂಗಳೂರಿನಲ್ಲಿ NEP-2020 ನೀತಿಯ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಅಶ್ವಥ್​ ನಾರಾಯಣ್, "ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಆತುರದಲ್ಲಿ ಮಾಡಲು ಹೊರಟಿದ್ದಾರೆ ಅಂತ ಕೆಲವರು ಹೇಳ್ತಿದಾರೆ. ಆದ್ರೆ ಈ ಮಾತು ಸರಿಯಲ್ಲ, ಈ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ. ಆ ಚರ್ಚೆಯ ಮೇಲೆಯೇ ಈ ನೀತಿಯನ್ನು ಜಾರಿಗೆ ತರಲಾಗಿದೆ" ಎಂದು ಅವರು ತಿಳಿಸಿದ್ದಾರೆ.

  ರಾಷ್ಟ್ರೀಯ ಶಿಕ್ಷಣ ನೀತಿ-2020 ಬಗೆಗಿನ ವಿರೋಧದ ಬಗ್ಗೆ ಮಾತನಾಡಿರುವ ಸಚಿವ ಅಶ್ವಥ್ ನಾರಾಯಣ್, "ಈ ನೀತಿ ಕೇಸರೀಕರಣ ಅನ್ನೋದು ಸುಮ್ನನೆ, ಈ ವಾದದಲ್ಲಿ ಹುರುಳಿಲ್ಲ. ಇದರಲ್ಲಿ ವಿದ್ಯಾರ್ಥಿಗಳಿಗೆ ವಿರುದ್ಧವಾದ ಅಂಶಗಳಿದ್ರೆ ತೋರಿಸಿ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಲ್ಲಿ ಈಗಿನ ವಿಷಯಗಳನ್ನೇ ಬಳಸುತ್ತೇವೆ. ಆದರೆ, ವಿದ್ಯಾರ್ಥಿಗಳ ಆಯ್ಕೆಗೆ ಪ್ರತ್ಯೇಕವಾದ ಅವಕಾಶವಿದೆ.

  ಎನ್ಇಪಿ-2020 ಯನ್ನು ಅನುಷ್ಠಾನ ಮಾಡಲು ಯೋಜನೆ ರೂಪಿಸಲಾಗಿದೆ, ಆತುರದಲ್ಲಿ ಶಿಕ್ಷಣ ನೀತಿ ಅನುಷ್ಠಾನಗೊಳಿಸಲಾಗಿಲ್ಲ. ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಕ್ರಮ‌ಕೈಗೊಳ್ಳಲಾಗುತ್ತಿದೆ. ಶಿಕ್ಷಣ ಕ್ಷೇತ್ರದ ಮೂಲತತ್ವಗಳಲ್ಲಿ ಸುಧಾರಣೆ ಮಾಡಲಾಗುತ್ತಿದೆ. ಕಲಾ ವಿದ್ಯಾರ್ಥಿಗಳಿಗೆ ಹೆಚ್ಚಿನ ಆಯ್ಕೆಗಳನ್ನು ನೀಡಲಾಗಿದೆ. ಅಂತರ್ ಶಿಸ್ತು ಪಾಲನೆಗೆ ಆದ್ಯತೆ ನೀಡಲಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಇಲ್ಲಾಂದ್ರೆ ನಿಂತ ನೀರಾಗುತ್ತದೆ. ನಮ್ಮ ವಿದ್ಯಾರ್ಥಿಗಳು ವಿಶ್ವಮಟ್ಟದಲ್ಲಿ ಸ್ಪರ್ಧೆ ಮಾಡಬೇಕಿದೆ.

  ನರ್ಸರಿಯಿಂದ ಉನ್ನತ ಶಿಕ್ಷಣದವರೆಗೆ ಎನ್ಇಪಿಯಲ್ಲಿ ಸುಧಾರಣೆಯಾಗಲಿದೆ. ಈ ಸುಧಾರಣೆ ವಿಶ್ವ ವ್ಯಾಪ್ತಿಯಲ್ಲಿ ಸಾಬೀತಾಗಿರುವಂತಹದ್ದು. ಯಾವುದೇ ವಿದ್ಯಾರ್ಥಿಗಳ ವಿರುದ್ಧವಾಗಿರುವಂತಹದ್ದು ಏನೂ ಇಲ್ಲ. ಶಿಕ್ಷಣ ಕ್ಷೇತ್ರದಲ್ಲಿ ಮುಂದಿನ ವರ್ಷಗಳಲ್ಲಿ ಆಡಳಿತಾತ್ಮಕ ಸುಧಾರಣೆ ಕ್ರಮಗಳಾಗಲಿವೆ" ಎಂದು ಸಚಿವ ಅಶ್ವಥ್​ ನಾರಾಯಣ್ ತಿಳಿಸಿದ್ದಾರೆ.

  ಇದನ್ನೂ ಓದಿ: Explained| ನಟ ಲಿಯೋನಾರ್ಡೋ ಡಿಕಾಪ್ರಿಯೋಗೂ ತಾಲಿಬಾನ್​ಗೂ ಸಂಬಂಧವೇನು? ಈಗ ಆಫ್ಘನ್ ಕ್ಷೌರಿಕರು ಹೆದರುತ್ತಿರುವುದು ಏಕೆ?

  ಆದರೆ, ರಾಷ್ಟ್ರೀಯ ಶಿಕ್ಷಣ ನೀತಿ-2020 ರ ಕುರಿತಾದ ಆದೇಶವನ್ನು ಈ ಕ್ಷಣವೇ ಹಿಂಪಡೆದು ವಿಸ್ತೃತ ಚರ್ಚೆ ನಡೆಸಿದ ನಂತರ ಅನುಷ್ಠಾನಗೊಳಿಸುವ ಕುರಿತು ತೀರ್ಮಾನಿಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಕಳೆದ ವಾರವೇ ಸರ್ಕಾರವನ್ನು ಒತ್ತಾಯಿಸಿದ್ದರು. ಈ ಕುರಿತು ಪತ್ರಿಕಾ ಹೇಳಿಕೆಯನ್ನೂ ಬಿಡುಗಡೆ ಮಾಡಿದ್ದ ಅವರು, ಯಾವುದೇ ಚರ್ಚೆ ನಡೆಸದೆ ಆದೇಶ ಹೊರಡಿಸಿರುವುದು ಸರ್ವಾಧಿಕಾರಿ ನಿಲುವು, ದೇಶದ ಒಕ್ಕೂಟ ತತ್ವಕ್ಕೆ ಮಾಡಿರುವ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

  "ಈ ನಾಡಿನ ಶಿಕ್ಷಣ ತಜ್ಞರು, ಉಪನ್ಯಾಸಕರು, ಹಿರಿಯರು ಮತ್ತು ವಿರೋಧ ಪಕ್ಷಗಳ ಮುಖಂಡರು ಈ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತರಾತುರಿಯಲ್ಲಿ ರಾಜ್ಯದ ಮೇಲೆ ಹೇರಬೇಡಿ, ಸಂಬಂಧಿಸಿದ ವಲಯಗಳ ಜನರ ಜೊತೆಗೆ ವಿಸ್ತೃತ ಚರ್ಚೆ ನಡೆಸಿ, ಸಾಧಕ ಬಾಧಕಗಳನ್ನು ಪರಿಶೀಲಿಸಿದ ನಂತರ ತೀರ್ಮಾನಿಸಿ. ಹಾಗೆ ಮಾಡದೆ ಈ ಅನಾಹುತಕಾರಿ ನೀತಿಯನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದಲೆ ಜಾರಿಗೊಳಿಸಲು ಆದೇಶ ಹೊರಡಿಸಲಾಗಿದೆ.

  ಇದನ್ನೂ ಓದಿ: Rajnath Singh| ಅಫ್ಘನ್​ ಬಿಕ್ಕಟ್ಟು ಭಾರತದ ಎದುರು ಹೊಸ ಭದ್ರತಾ ಪ್ರಶ್ನೆಗಳನ್ನು ಹುಟ್ಟುಹಾಕಿದೆ; ಸಚಿವ ರಾಜನಾಥ್ ಸಿಂಗ್

  ಈ ಆದೇಶದಲ್ಲಿ ಹಲವಾರು ಅಪಾಯಕಾರಿಯಾದ ಅಂಶಗಳಿವೆ; ಬಡವರ, ಮಧ್ಯಮ ವರ್ಗದವರ ಗುಣಮಟ್ಟದ ಉನ್ನತ ಶಿಕ್ಷಣ ಪಡೆಯುವ ಕನಸಿಗೆ ನೇರವಾಗಿ ಬೆಂಕಿ ಇಡುವ ಪ್ರಕ್ರಿಯೆಯ ಭಾಗವಾಗಿ ಈ ಶಿಕ್ಷಣ ನೀತಿಯನ್ನು ಜಾರಿಗೊಳಿಸಲು ಹೊರಡಲಾಗಿದೆ" ಎಂದು ಅವರು ಟೀಕಿಸಿದ್ದರು.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: