BC Patil: ಕೊರೋನಾ ಸಂಕಷ್ಟದಲ್ಲಿ ಕ್ಷೇತ್ರದ ಬಡವರಿಗೆ ನೆರವಿನ ಹಸ್ತ ಚಾಚಿದ ಸಚಿವ ಬಿ.ಸಿ.ಪಾಟೀಲ್

ತಮ್ಮ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಿರೇಕೆರೂರು, ರಟ್ಟಿಹಳ್ಳಿ ತಾಲೂಕಿನಲ್ಲಿ ಬರುವ ಬಿಪಿಎಲ್ ಕಾರ್ಡ್ ಹೊಂದಿರುವವರು ಹಾವೇರಿ ಜಿಲ್ಲೆಯ ಯಾವುದೇ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಅವರ ಸಂಪೂರ್ಣ ವೆಚ್ಚವನ್ನು ವೈಯಕ್ತಿಕವಾಗಿ ಭರಿಸಲಿದ್ದಾರೆ.

ಸಚಿವ ಬಿ.ಸಿ.ಪಾಟೀಲ್

ಸಚಿವ ಬಿ.ಸಿ.ಪಾಟೀಲ್

 • Share this:
  ಹಾವೇರಿ(ಏ.30): ಕಳೆದ ವರ್ಷ ಜಗತ್ತನ್ನೇ ತಲ್ಲಣಗೊಳಿಸಿದ್ದ  ಕೊರೋನಾ ಈ ವರ್ಷ ಮತ್ತೆ ಭಾರತಕ್ಕೆ ಬೇತಾಳನಂತೆ ಕಾಡುತ್ತಿದೆ. ದೇಶದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ವೇಗವಾಗಿ ಹರಡುತ್ತಿದೆ. ಸೋಂಕಿತರ ಸಂಖ್ಯೆ ಜೊತೆಗೆ ಸಾವಿನ ಸಂಖ್ಯೆ ಕೂಡ ಹೆಚ್ಚುತ್ತಿದೆ. ಇನ್ನು ರಾಜ್ಯದ ವಿಚಾರಕ್ಕೆ ಬಂದ್ರೆ, ರಾಜಧಾನಿ ಬೆಂಗಳೂರು ಅಕ್ಷರಶಃ ಬೆಚ್ಚಿಬಿದ್ದಿದೆ. ಅಲ್ಲದೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಏರುತ್ತಿದೆ. ಹಲವು ಜಿಲ್ಲೆಗಳಲ್ಲಿ ಬೆಡ್, ಆಕ್ಸಿಜನ್ ಗೆ ಕೊರತೆ ಉಂಟಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳೆಲ್ಲ ಸೋಂಕಿತರಿಂದ ತುಂಬಿತುಳುಕುತ್ತಿವೆ. ಪರಿಸ್ಥಿತಿ ಹೀಗಿರುವಾಗ ಬಡತನ ರೇಖೆಗಿಂತ ಕೆಳಗಿರುವ ಬಡವರು ಕೊರೊನಾ ಸೋಂಕಿಗೆ ತುತ್ತಾದರೆ ಚಿಕಿತ್ಸೆ ಸಿಗೋದು ಕನಸಿನ ಮಾತೆ ಸರಿ ಎನ್ನುವ ವಾತಾವರಣ ಸೃಷ್ಟಿಯಾಗಿದೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ತಮ್ಮ ಮತಕ್ಷೇತ್ರದ ಜನರ ನೆರವಿಗೆ ಬರೋದಕ್ಕೆ ಹಿರೇಕೆರೂರು ಶಾಸಕ, ರಾಜ್ಯದ ಕೃಷಿ ಸಚಿವ ಬಿ.ಸಿ.ಪಾಟೀಲ ನಿರ್ಧಾರ ಮಾಡಿದ್ದಾರೆ. ಆ ಮೂಲಕ ಇತರೆ ಶಾಸಕರು, ಸಚಿವರುಗಳಿಗೆ ಮಾದರಿಯಾಗಿದ್ದಾರೆ.

  ಹೌದು, ಹಾವೇರಿ ಜಿಲ್ಲೆಯ ಹಿರೇಕೆರೂರು ಮತಕ್ಷೇತ್ರದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಬಡವರು ಕೊರೋನಾ ಸೋಂಕಿಗೆ ತುತ್ತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ಅವರಿಗೆ ಆರ್ಥಿಕ ನೆರವು ನೀಡಿ, ಸಂಪೂರ್ಣ ಕೊರೊನಾ ಚಿಕಿತ್ಸಾ ವೆಚ್ಚವನ್ನ ವೈಯಕ್ತಿಕವಾಗಿ ಭರಿಸಲು ನಿರ್ಧಾರ ಮಾಡಿರೋದಾಗಿ ಸಚಿವ ಬಿ. ಸಿ ಪಾಟೀಲ್ ತಿಳಿಸಿದ್ದಾರೆ.
  ಬಿಪಿಎಲ್ ಕಾರ್ಡುದಾರರಿಗೆ ಕೊರೊನಾ ಸೋಂಕು ತಗುಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರೆ ಆಸ್ಪತ್ರೆಯ ಸಂಪೂರ್ಣ ವೆಚ್ಚವನ್ನು ಬಿ. ಸಿ ಪಾಟೀಲ ಭರಿಸಲಿದ್ದಾರೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ, ಸೂಕ್ತ ಚಿಕಿತ್ಸೆ ಸಿಗದೆ ಜನರು ಪರದಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ತಮ್ಮ ಮತಕ್ಷೇತ್ರದ ಬಡವರಿಗೆ ನೆರವು ನೀಡಲು ಮುಂದಾಗಿರುವುದು ಕ್ಷೇತ್ರದ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

  2021ರ ಹಣಕಾಸು ವರ್ಷದಲ್ಲಿ ಅತೀ ಹೆಚ್ಚು ಕಾರು ಮಾರಾಟವಾದ ಭಾರತದ ಟಾಪ್‌ 3 ನಗರಗಳ ಪಟ್ಟಿಯಲ್ಲಿ ಬೆಂಗಳೂರಿಗೆ ಸ್ಥಾನ

  ತಮ್ಮ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಿರೇಕೆರೂರು, ರಟ್ಟಿಹಳ್ಳಿ ತಾಲೂಕಿನಲ್ಲಿ ಬರುವ ಬಿಪಿಎಲ್ ಕಾರ್ಡ್ ಹೊಂದಿರುವವರು ಹಾವೇರಿ ಜಿಲ್ಲೆಯ ಯಾವುದೇ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದರೂ ಅವರ ಸಂಪೂರ್ಣ ವೆಚ್ಚವನ್ನು ವೈಯಕ್ತಿಕವಾಗಿ ಭರಿಸಲಿದ್ದಾರೆ. ಚಿಕಿತ್ಸೆ ಪಡೆದವರು ತಮ್ಮ ಗುರುತಿನ ಚೀಟಿ, ಬಿಪಿಎಲ್ ಕಾರ್ಡ್ ಹಾಗೂ ಆಸ್ಪತ್ರೆ ಬಿಲ್ ನೊಂದಿಗೆ ಸಂಪರ್ಕಿಸಬಹುದು ಎಂದಿದ್ದಾರೆ.

  ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಹಿರೇಕೆರೂರು ನಿವಾಸದಲ್ಲಿ ಮಾತನಾಡಿದ ಸಚಿವ ಬಿ.ಸಿ ಪಾಟೀಲ್, ಕೊರೋನಾ ನಿಯಂತ್ರಿಸಲು ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಂಡಿದೆ. ನಾನು ಹಿರೇಕೆರೂರು ಶಾಸಕನಾಗಿ ಕೃಷಿ ಸಚಿವನಾಗಿ, ಹಿರೇಕೆರೂರು ಕ್ಷೇತ್ರದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಕಾರ್ಡ್ ಹೊಂದಿರುವ ಬಡವರು ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆ ಪಡೆದರೆ ಅವರ ಚಿಕಿತ್ಸಾ ವೆಚ್ಚವನ್ನು ಭರಿಸುತ್ತೇನೆ. ಕ್ಷೇತ್ರದ ಬಡವರು ಸೋಂಕಿಗೆ ತುತ್ತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ಅಂತವರು ಗುರುತಿನ ಚೀಟಿ, ಬಿಪಿಎಲ್ ಕಾರ್ಡ್ ಹಾಗೂ ಆಸ್ಪತ್ರೆ ಬಿಲ್ ನೀಡಿದರೆ ವೆಚ್ಚ ಭರಿಸುತ್ತೇನೆ ಎಂದಿದ್ದಾರೆ.

  ಒಟ್ಟಿನಲ್ಲಿ ರಾಜ್ಯದ ಎಲ್ಲ ಶಾಸಕರು ಇದೇ ರೀತಿ ತಮ್ಮತಮ್ಮ ಮತಕ್ಷೇತ್ರದ ಜನರ ನೆರವಿಗೆ ಬಂದರೆ ಬಡಜೀವಿಗಳು ನಿಟ್ಟುಸಿರು ಬಿಡುವಂತಾಗುತ್ತದೆ.

  • ವರದಿ: ಮಂಜುನಾಥ ತಳವಾರ

  Published by:Latha CG
  First published: