ಗದಗ್​​ನಲ್ಲಿ ಕಪ್ಪತ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಸಿ.ಸಿ.ಪಾಟೀಲ್

ಕಪ್ಪತಗುಡ್ಡದ ಔಷಧೀಯ ಸಸ್ಯಗಳ ಪ್ರಬೇಧ ಹಾಗೂ ಅವುಗಳ ಉಪಯೋಗದ ಕುರಿತು ಅರಣ್ಯ ಅಧಿಕಾರಿಗಳು ಹೊರತಂದಿರುವ ಕಪ್ಪತಗುಡ್ಡ ಪುಸ್ತಕವನ್ನು ಆಂಗ್ಲ ಭಾಷೆಯಿಂದ ಕನ್ನಡ ಭಾಷೆಗೆ ತಜುರ್ಮೆಗೊಳಿಸುವದರಿಂದ ಸಾರ್ವಜನಿಕರಲ್ಲಿ ಕಪ್ಪತಗುಡ್ಡದ ಮಹತ್ವ ತಿಳಿದುಕೊಳ್ಳಬಹುದಾಗಿದೆ. ಈ ಪ್ರಕ್ರಿಯೆಗೆ ಅಗತ್ಯದ ಅನುದಾನವನ್ನು ಒದಗಿಸಲಾಗುವುದು ಎಂದು ಸಚಿವ ಸಿ.ಸಿ.ಪಾಟೀಲ್ ತಿಳಿಸಿದರು.

ಕಪ್ಪತ ಉತ್ಸವ ಕಾರ್ಯಕ್ರಮ

ಕಪ್ಪತ ಉತ್ಸವ ಕಾರ್ಯಕ್ರಮ

  • Share this:
ಗದಗ(ಜ.24): ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದು ಖ್ಯಾತಿ ಪಡೆದ ಕಪ್ಪತಗುಡ್ಡ ತನ್ನ ಒಡಲಿನಲ್ಲಿ ಅನೇಕ ಔಷಧೀಯ ಸಸ್ಯ ಸಂಪತ್ತನ್ನು ಹೊಂದಿದ್ದು ರಕ್ಷಣೆಗೆ ಸರಕಾರ ಬದ್ಧವಾಗಿದ್ದು ಇದರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಸಣ್ಣ ಕೈಗಾರಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ನುಡಿದರು. ನಗರದ ಅಂಬೇಡ್ಕರ್ ಭವನದಲ್ಲಿ ಜರುಗಿದ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಲಾದ ಕಪ್ಪತ ಉತ್ಸವ-2021 ಉದ್ಘಾಟಿಸಿ ಸಚಿವರು ಮಾತನಾಡಿದರು. ಪರಿಸರ ಸಂಕ್ಷಣೆ ಕುರಿತು ಪ್ರತಿಯೊಬ್ಬರು ತಮ್ಮ ಜವಾಬ್ದಾರಿಗಳನ್ನು ಅರಿತು ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದರು.

ಅರಣ್ಯ ಸಂಪತ್ತು ಅಭಿವೃದ್ಧಿಯಲ್ಲಿ ಸಾರ್ವಜನಿಕರ ಸಹಭಾಗಿತ್ವ ಅಗತ್ಯವಾಗಿದೆ. ಅದರೊಂದಿಗೆ ಮಕ್ಕಳಿಗೆ ಶಾಲೆ ಹಾಗೂ ಮನೆಯ ಆವರಣದಲ್ಲಿ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಹವ್ಯಾಸವನ್ನು ಈಗಿನಿಂದಲೇ ರೂಡಿಸಿಕೊಳ್ಳಲು ಜಾಗೃತಿ ಮೂಡಿಸುವ ಕಾರ್ಯವಾಗಬೇಕಾಗಿದೆ. ಜಿಲ್ಲೆಯ ಸಸ್ಯಕಾಶಿ ಕಪ್ಪತಗುಡ್ಡವನ್ನು ಅಭಿವೃದ್ಧಿ ಪಡಿಸಿ ಜಿಲ್ಲೆಯನ್ನು ಹಸಿರು ಕ್ರಾಂತಿ ಜಿಲ್ಲೆ ಯಾಗಿಸಲು ಪ್ರತಿಯೊಬ್ಬರು ಪಣತೊಡಲು ಮುಂದಾಗಬೇಕು ಎಂದರು. ಕಪ್ಪತಗುಡ್ಡದ ಔಷಧೀಯ ಸಸ್ಯಗಳ ಪ್ರಬೇಧ ಹಾಗೂ ಅವುಗಳ ಉಪಯೋಗದ ಕುರಿತು ಅರಣ್ಯ ಅಧಿಕಾರಿಗಳು ಹೊರತಂದಿರುವ ಕಪ್ಪತಗುಡ್ಡ ಪುಸ್ತಕವನ್ನು ಆಂಗ್ಲ ಭಾಷೆಯಿಂದ ಕನ್ನಡ ಭಾಷೆಗೆ ತಜುರ್ಮೆಗೊಳಿಸುವದರಿಂದ ಸಾರ್ವಜನಿಕರಲ್ಲಿ ಕಪ್ಪತಗುಡ್ಡದ ಮಹತ್ವ ತಿಳಿದುಕೊಳ್ಳಬಹುದಾಗಿದೆ. ಈ ಪ್ರಕ್ರಿಯೆಗೆ ಅಗತ್ಯದ ಅನುದಾನವನ್ನು ಒದಗಿಸಲಾಗುವುದು ಎಂದು ಸಚಿವ ಸಿ.ಸಿ.ಪಾಟೀಲ್ ತಿಳಿಸಿದರು.

ನಾನು ಸಾಯೋದ್ರೊಳಗೆ ಯಡಿಯೂರಪ್ಪನೇ ಹಾಸನ ವಿಮಾನ ನಿಲ್ದಾಣ ಓಪನ್ ಮಾಡಲಿ; ಹೆಚ್​.ಡಿ ದೇವೇಗೌಡ

ಪ್ರಥಮ ಬಾರಿಗೆ ಯಡಿಯೂರಪ್ಪ ಸರಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜವಾಬ್ದಾರಿ ವಹಿಸಲಾಗಿತ್ತು. ಆ ಸಂದರ್ಭದಲ್ಲಿ  ಬಾಲ ಸಂಜೀವಿನಿ, ಭಾಗ್ಯ ಲಕ್ಷ್ಮೀ ಯೋಜನೆಗಳನ್ನು ಜಾರಿಗೊಳಿಸಲಾಯಿತು ಅತ್ಯಂತ ಜನಪರ ಈ ಯೋಜನೆಗಳನ್ನು ಅಳಿಸಿ ಹಾಕಲು ಸಾಧ್ಯವಿಲ್ಲ ಎಂದರು. ಈ ಬಾರಿ ಸರಕಾರದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಜವಾಬ್ದಾರಿ ವಹಿಸಲಾಗಿತ್ತು. ಅವ್ಯವಸ್ಥೆ ಹಾಗೂ ಅಕ್ರಮ ಗಣಿಗಾರಿಕೆ ಚಟುವಟಿಕೆ ತಡೆಯಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗಿದೆ. ಗಣಿ ಮತ್ತು ಅರಣ್ಯ ಇಲಾಖೆ ಎರಡು ಸಹ ಎಣ್ಣೆ ಹಾಗೂ ಸಿಗೇಕಾಯಿ ಸಂಬಂಧ ಹೊಂದಿದ್ದು ರಾಜ್ಯದ ಅಭಿವೃದ್ಧಿಗೆ ಗಣಿಗಾರಿಕೆ ಅಗತ್ಯ ಅದರಂತೆ ನಾಳಿನ ಉತ್ತಮ ಪರಿಸರಕ್ಕೆ ಅರಣ್ಯ ಬೇಕು ಈ ಎರಡು ಇಲಾಖೆಗಳನ್ನು ಸಮರ್ಥವಾಗಿ ನಿಭಾಯಿಸಿದ ತೃಪ್ತಿ ನನಗಿದೆ.

ಖಾತೆ ಬದಲಾವಣೆ ಮುಖ್ಯಮಂತ್ರಿಗಳ ಪರಮಾಧಿಕಾರ ಈಗ ನೀಡಿರುವ ಕೈಗಾರಿಕಾ ಇಲಾಖೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ರಾಜ್ಯದಲ್ಲಿ ಔದ್ಯೋಗಿಕ ಕ್ರಾಂತಿಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗುವುದು. ಅಲ್ಲದೇ  ಯಾವಾಗಲು ಮುಖ್ಯಮಂತ್ರಿಯವರ ಬಳಿ ಇರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜವಾಬ್ದಾರಿಯನ್ನು ನನ್ನ ಮೇಲೆ ವಿಶಾಸ್ವವಿಟ್ಟು ಖಾತೆ ಜವಾಬ್ದಾರಿಯನ್ನು ವಹಿಸಿದ್ದು ಇದಕ್ಕಾಗಿ ಮುಖ್ಯಮಂತ್ರಿಗಳಿಗೆ ಆಭಾರಿಯಾಗಿದ್ದೇನೆಂದು ಸಚಿವ ಸಿ.ಸಿ. ಪಾಟೀಲ ಹೇಳಿದ್ದಾರೆ.

ಧಾರವಾಡ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ ಮಾತನಾಡಿ ಪ್ರಕೃತಿಯಿಂದ ನಾವುಗಳು ಬಹಳಷ್ಟು ವಿಷಯಗಳನ್ನು ಕಲಿಯಬೇಕಾಗಿದೆ. ಪರಿಸರ ನೈಸರ್ಗಿಕ ಸಂಪನ್ಮೂಲಗಳನ್ನು ಉಳಿಸಿಕೊಳ್ಳುವದರೊಂದಿಗೆ ಬೆಳೆಸುವ ಕಾರ್ಯದಲ್ಲಿ ತೊಡಗಬೇಕಾಗಿದೆ. ಇಂದು ನಾವೆಲ್ಲರೂ ಸಸ್ಯ ಸಂಕುಲವನ್ನು ಉಳಿಸಿದರೆ ಮುಂದಿನ ಜೀವ ಸಂಕುಲ ನೆಮ್ಮದಿ ಜೀವನ ಸಾಗಿಸಲು ಸಾಧ್ಯವಾಗಲಿದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಅಧ್ಯಕ್ಷ ಈರಪ್ಪ ನಾಡಗೌಡರ, ತಾ.ಪಂ. ಅಧ್ಯಕ್ಷ ವಿದ್ಯಾಧರ ದೊಡ್ಡಮನಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶ ದುಂದೂರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯತೀಶ್ ಎನ್​​. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಿಮಳ ವಿ.ಎಚ್, ಸೇರಿದಂತೆ ಪರಿಸರ ಪ್ರೇಮಿಗಳು, ಅರಣ್ಯ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
Published by:Latha CG
First published: