ಉಪಚುನಾವಣೆ ಮುಗಿದ ಬೆನ್ನಲ್ಲೇ ಕುತೂಹಲ ಮೂಡಿಸಿದ ಡಿಕೆಶಿ ದೆಹಲಿ ಭೇಟಿ

zahir | news18
Updated:November 4, 2018, 12:02 PM IST
ಉಪಚುನಾವಣೆ ಮುಗಿದ ಬೆನ್ನಲ್ಲೇ ಕುತೂಹಲ ಮೂಡಿಸಿದ ಡಿಕೆಶಿ  ದೆಹಲಿ ಭೇಟಿ
ಸಚಿವ ಡಿ.ಕೆ..ಶಿವಕುಮಾರ್
  • News18
  • Last Updated: November 4, 2018, 12:02 PM IST
  • Share this:
-ನ್ಯೂಸ್ 18 ಕನ್ನಡ

ಮೂರು ಲೋಕಸಭಾ ಹಾಗೂ ಎರಡು ವಿಧಾನಸಭೆ ಉಪಚುನಾವಣೆಯ ಮತದಾನ ಶನಿವಾರ ಮುಗಿದಿದೆ. ಇದರ ಬೆನ್ನಲ್ಲೇ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಇಂದು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್​ರನ್ನು ಭೇಟಿಯಾಗಲಿರುವ ಡಿಕೆಶಿ ಮುಂದಿನ ಚುನಾವಣೆಯ ಕುರಿತು ಚರ್ಚಿಸಲಿದ್ದಾರೆ. ಅಲ್ಲದೆ ನಿನ್ನೆ ನಡೆದ ಉಪ ಚುನಾವಣೆಯಲ್ಲಿ ಬಳ್ಳಾರಿ, ಶಿವಮೊಗ್ಗ, ಮಂಡ್ಯ ಲೋಕಸಭೆ ಹಾಗೂ ರಾಮನಗರ, ಜಮಖಂಡಿ ವಿಧಾನ ಸಭೆಗಳ ಸ್ಥಿತಿಗಳ ಬಗ್ಗೆ ಹೈಕಮಾಂಡ್​ಗೆ ಮಾಹಿತಿ ನೀಡಲಿದ್ದಾರೆ.

ಮುಖ್ಯವಾಗಿ ರಾಮನಗರ, ಬಳ್ಳಾರಿ ಲೋಕಸಭೆಗಳಲ್ಲಿ ಡಿಕೆಶಿ ರೂಪಿಸಿರುವ ರಣತಂತ್ರಗಳು, ಅದರ ಫಲವಾಗಿ ಪಕ್ಷಕ್ಕೆ ಆಗುತ್ತಿರುವ ಲಾಭಗಳ ಸಂಪೂರ್ಣ ಮಾಹಿತಿ ಒದಗಿಸಲಿದ್ದಾರೆ. ಹಾಗೆಯೇ ಒಟ್ಟಾಗಿ ಚುನಾವಣೆ ಎದುರಿಸಿರುವ ಮೈತ್ರಿ ಸರ್ಕಾರಕ್ಕೆ ಆಗಿರುವ ಅನುಕೂಲಗಳ ಬಗ್ಗೆ ಕೂಡ ಕಾಂಗ್ರೆಸ್ ಹೈಕಮಾಂಡ್​ಗೆ ವಿಷಯ ತಿಳಿಸಲಿದ್ದಾರೆ ಎನ್ನಲಾಗಿದೆ.

ಬಳ್ಳಾರಿ ಉಸ್ತುವಾರಿ ಹೊತ್ತಿರುವ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್ ಉಗ್ರಪ್ಪನವರ ಗೆಲುವಿಗಾಗಿ ಹಗಲಿರುಳು ಪ್ರಚಾರ ನಡೆಸಿದ್ದರು. ಹಾಗೆಯೇ ರಾಮನಗರ ಬಿಜೆಪಿ ಅಭ್ಯರ್ಥಿ ಎಲ್​.ಚಂದ್ರಶೇಖರ್ ಕಣದಿಂದ ಹಿಂದೆ ಸರಿಯುವಂತೆ  ಡಿಕೆ ಸಹೋದರರ  ಮಾಸ್ಟರ್ ಪ್ಲಾನ್ ಮಾಡಿದ್ದರು ಎನ್ನಲಾಗಿದೆ.

ಒಟ್ಟಿನಲ್ಲಿ ಉಪಚುನಾವಣೆ ಮುಗಿಯುತ್ತಿದ್ದಂತೆ ಕಾಂಗ್ರೆಸ್ ಪವರ್ ನಾಯಕ ದೆಹಲಿಗೆ ದೌಡಾಯಿಸಿರುವುದು ಹೊಸ ರಾಜಕೀಯ ಬೆಳವಣಿಗೆ ಕಾರಣವಾಗಲಿದೆಯಾ ಎಂಬ ಪ್ರಶ್ನೆಯನ್ನು ರಾಜ್ಯ ರಾಜಕೀಯದಲ್ಲಿ ಹುಟ್ಟು ಹಾಕಿದೆ.

First published: November 4, 2018, 11:54 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading