ಯೇಸು ಪ್ರತಿಮೆ ನಿರ್ಮಾಣ ವಿರೋಧಿಸಿ ಕನಕಪುರ ಚಲೋ; ಬೇಸರ ಹೊರಹಾಕಿದ ಸಚಿವ ಎಚ್.ನಾಗೇಶ್

ಕನಕಪುರದಲ್ಲಿ ಕ್ರೈಸ್ತರ ಸಂಖ್ಯೆ ಕಡಿಮೆ ಇದೆ. ಹಾಗಾಗಿ ಹಿಂದೂಗಳು ಯೇಸು ಪ್ರತಿಮೆ ನಿರ್ಮಾಣ ಮಾಡುತ್ತಿರುವುದಕ್ಕೆ ವಿರೋಧಿಸುತ್ತಿದ್ದಾರೆ. ಆರ್​ಎಸ್​ಎಸ್​ ಮುಖ್ಯಸ್ಥ ಕಲ್ಲಡ್ಕ ಪ್ರಭಾಕರ್ ಭಟ್​ ಇಂದು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಮುಂದೆ ಏನಾಗುತ್ತೋ ಕಾದು ನೋಡಬೇಕಿದೆ

news18-kannada
Updated:January 13, 2020, 3:10 PM IST
ಯೇಸು ಪ್ರತಿಮೆ ನಿರ್ಮಾಣ ವಿರೋಧಿಸಿ ಕನಕಪುರ ಚಲೋ; ಬೇಸರ ಹೊರಹಾಕಿದ ಸಚಿವ ಎಚ್.ನಾಗೇಶ್
ಸಚಿವ ಎಚ್.​ ನಾಗೇಶ್​
  • Share this:
ಕೋಲಾರ(ಜ.13):  ಕನಕಪುರದ ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ವಿರೋಧಿಸಿ ಹಿಂದೂ ಜಾಗರಣ ವೇದಿಕೆ ಹಮ್ಮಿಕೊಂಡಿರುವ ಪ್ರತಿಭಟನೆ ಬಗ್ಗೆ ಅಬಕಾರಿ ಮತ್ತು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಎಚ್​. ನಾಗೇಶ್​  ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ.

ಮುಳಬಾಗಿಲು ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಪಾಲ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ಮಾಡಲು ಹಿಂದೂಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಡಿಕೆ ಶಿವಕುಮಾರ್ ಯೇಸು ಪ್ರತಿಮೆ ನಿರ್ಮಾಣ ಮಾಡಲು ಮುಂದಾಗಿರುವ​ ನಡೆಯನ್ನು ಹಿಂದೂಗಳು ಸಹಿಸುತ್ತಿಲ್ಲ. ತಮಗೆ ಇಷ್ಟ ಬಂದ ರೀತಿಯಲ್ಲಿ ಏನೇನೋ ಮಾಡುತ್ತಿದ್ದಾರೆ", ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೈಸೂರು ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್​ ಜೊತೆಗೆ ಮೈತ್ರಿ; ಮಾಜಿ ಸಚಿವ ಸಾರಾ ಮಹೇಶ್​ ಸ್ಪಷ್ಟನೆ

"ಕನಕಪುರದಲ್ಲಿ ಕ್ರೈಸ್ತರ ಸಂಖ್ಯೆ ಕಡಿಮೆ ಇದೆ. ಹಾಗಾಗಿ ಹಿಂದೂಗಳು ಯೇಸು ಪ್ರತಿಮೆ ನಿರ್ಮಾಣ ಮಾಡುತ್ತಿರುವುದಕ್ಕೆ ವಿರೋಧಿಸುತ್ತಿದ್ದಾರೆ. ಆರ್​ಎಸ್​ಎಸ್​ ಮುಖ್ಯಸ್ಥ ಕಲ್ಲಡ್ಕ ಪ್ರಭಾಕರ್ ಭಟ್​ ಇಂದು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಮುಂದೆ ಏನಾಗುತ್ತೋ ಕಾದು ನೋಡಬೇಕಿದೆ,' ಎಂದರು.

ಇನ್ನು ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ನಾಗೇಶ್, ಸಿಎಂ ಯಡಿಯೂರಪ್ಪ ಎಲ್ಲವನ್ನೂ ನಿಭಾಯಿಸಲಿದ್ದಾರೆ. ಇದರಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಹೇಳಿದರು.

ಇದಕ್ಕೂ ಮುನ್ನ ಎಚ್ ನಾಗೇಶ್ ಸ್ವ ಕ್ಷೇತ್ರ ಮುಳಬಾಗಿಲು ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ಜನಸಂಪರ್ಕ ಸಭೆ ನಡೆಸಿದರು. ಗ್ರಾಮದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ತಹಶಿಲ್ದಾರ್, ಸಿಇಒ, ತಾಲೂಕು ಪಂಚಾಯ್ತಿ ಅಧ್ಯಕ್ಷ್ಯ ಶ್ರೀನಿವಾಸ್, ಜಿಲ್ಲಾ ಪಂಚಾಯ್ತಿ ಸದಸ್ಯ ಅರವಿಂದ್ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಭಾಗಿಯಾಗಿದ್ದರು.  ಸಚಿವ ನಾಗೇಶ್  ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಿದರು. ಸ್ಥಳದಲ್ಲಿಯೇ ಕೆಲ ಸಮಸ್ಯೆಗಳ ಇತ್ಯರ್ಥಕ್ಕೆ ಅಧಿಕಾರಿಗಳಿಗೆ ಸೂಚಿಸಿದರು  ಜನಸಂಪರ್ಕ ಸಭೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು,  ಜನರು ಸರತಿ ಸಾಲಲ್ಲಿ ನಿಂತು ತಮ್ಮ ತಮ್ಮ ಮನವಿಗಳನ್ನು ಸಲ್ಲಿಸಿದರು.

ಇದು ಬೇಜವಾಬ್ದಾರಿ: ಪ್ರತಿಭಟನಾಕಾರರನ್ನು ನಾಯಿಗಳಂತೆ ಹೊಡೆದೆವೆಂದಿದ್ದ ಬಿಜೆಪಿ ನಾಯಕನ ಹೇಳಿಕೆಗೆ ಕೇಂದ್ರ ಸಚಿವ ಸುಪ್ರಿಯೋ ಬೇಸರ
First published:January 13, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ