ಹುಬ್ಬಳ್ಳಿ- ಧಾರವಾಡ ಭಾಗದ ರಸ್ತೆಗಳು ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಪ್ರಗತಿಯ ಕುರಿತು‌ ವಿಡಿಯೋ ಸಂವಾದ

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಮಾತನಾಡಿ, ಕಾಮಗಾರಿ ಪ್ರಾರಂಭದ ನಂತರ ಯಾವುದೇ ಅಡೆತಡೆಗಳು ಬಾರದ ರೀತಿಯಲ್ಲಿ ಸಂಬಂಧಪಟ್ಟ ಎಲ್ಲಾ ಕಡೆಗಳಿಂದ ಅಗತ್ಯ ಒಡಂಬಡಿಕೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ರು.

ವಿಡಿಯೋ ಸಂವಾದದಲ್ಲಿ ಸಚಿವ ಜಗದೀಶ್ ಶೆಟ್ಟರ್

ವಿಡಿಯೋ ಸಂವಾದದಲ್ಲಿ ಸಚಿವ ಜಗದೀಶ್ ಶೆಟ್ಟರ್

  • Share this:
ಹುಬ್ಬಳ್ಳಿ(ಆ.05): ಹುಬ್ಬಳ್ಳಿ -ಧಾರವಾಡ ಭಾಗದ ಕೆ.ಆರ್.ಡಿ.ಸಿ.ಎಲ್ ರಾಷ್ಟ್ರೀಯ ಹೆದ್ದಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಅಡಿ ಅನುಷ್ಠಾನ‌ ಗೊಳಿಸುತ್ತಿರುವ ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ವಿಡಿಯೋ ಸಂವಾದದ ಮೂಲಕ ನಡೆಸಲಾಯಿತು.

ಈ ವೇಳೆ ನೈಸ್ ಕಂಪನಿಯ ಪ್ರತಿನಿಧಿಗಳ ಜೊತೆ ನಡೆಸಿರುವ ಸಭೆಯ ಅಂಶಗಳನ್ನು ಒಳಗೊಂಡ ಪರಿಷ್ಕೃತ ಪ್ರಸ್ತಾವನೆಯನ್ನು ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾದ ಕೇಂದ್ರ ಕಚೇರಿಗೆ ಶುಕ್ರವಾರದ ಒಳಗಾಗಿ ಕಳುಹಿಸಿಕೊಡುವಂತೆ ಜಗದೀಶ್ ಶೆಟ್ಟರ್ ಮತ್ತು ಪ್ರಲ್ಹಾದ್ ಜೋಶಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಡಿಯೋ ಸಂವಾದದಲ್ಲಿ ಮಾತನಾಡಿದ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಜುಲೈ 24 ರಂದು ವಿಧಾನ ಸೌಧದಲ್ಲಿ ನಡೆದ ಸಭೆಯ ನಂತರ ಆಗಿರುವ ಬೆಳವಣಿಗೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ನೈಸ್ ಕಂಪನಿಯ ಪ್ರತಿನಿಧಿಗಳ ಜೊತೆಯಲ್ಲಿ ನಡೆಸಿದ ಸಭೆಯ ಮಾಹಿತಿಗಳನ್ನು ಅಧಿಕಾರಿಗಳಿಂದ ಅವರು ಪಡೆದುಕೊಂಡರು.

ವಿಜಯಪುರದಲ್ಲಿ ದೂರವಾಗುತ್ತಿದೆ ಕೊರೋನಾ ಭಯ; ವೈರಸ್​​ನೊಂದಿಗೆ ಬದುಕುತ್ತಿದ್ದಾರೆ ಜಿಲ್ಲೆಯ ಜನ

ಇದೇ ಸಂದರ್ಭದಲ್ಲಿ ಅಧಿಕಾರಿಗಳು ಈ ಕಾಮಗಾರಿಯ ಸಂಬಂಧ ಬೆಂಗಳೂರಿನಲ್ಲಿ ಅಗತ್ಯ ವಿರುವ ಎಲ್ಲಾ ಅಗತ್ಯ ಕಾರ್ಯಗಳನ್ನು ಪೂರೈಸಲಾಗಿದೆ ಎಂದು ಮಾಹಿತಿ ನೀಡಿದರು. ನಂತರ, ಕೇಂದ್ರ ಸಚಿವರು ಸಭೆಯ ಅಂಶಗಳನ್ನು ಒಳಗೊಂಡಿರುವ ಹುಬ್ಬಳ್ಳಿ -ಧಾರವಾಡ ಬೈಪಾಸ್ ರಸ್ತೆಯ ಪರಿಷ್ಕೃತ ಪ್ರಸ್ತಾವನೆಯನ್ನು ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾದ ಕೇಂದ್ರ ಕಚೇರಿಗೆ ಕಳುಹಿಸಿ ಕೊಡುವಂತೆ ಸೂಚನೆ ನೀಡಿದ್ರು. ತಾವು ದೆಹಲಿಯಲ್ಲಿ ಕೇಂದ್ರ ಸಚಿವರಾದ ನಿತೀನ್ ಗಡ್ಕರಿ ಅವರೊಂದಿಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಮಾತನಾಡಿ, ಕಾಮಗಾರಿ ಪ್ರಾರಂಭದ ನಂತರ ಯಾವುದೇ ಅಡೆತಡೆಗಳು ಬಾರದ ರೀತಿಯಲ್ಲಿ ಸಂಬಂಧಪಟ್ಟ ಎಲ್ಲಾ ಕಡೆಗಳಿಂದ ಅಗತ್ಯ ಒಡಂಬಡಿಕೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ರು. ಈ ಪ್ರಸ್ತಾಪದ ಆರ್ಥಿಕ ಅನುಮೋದನೆಯ ನಂತರ ಯೋಜನೆಯಲ್ಲಿ ಅಳವಡಿಸಿ ಕೊಳ್ಳಬೇಕಾದ ಸರ್ವೀಸ್ ರೋಡ್, ಅಂಡರ್ ಪಾಸ್ ನಂತಹ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸುವಂತೆ ತಿಳಿಸಿದರು.

ಇದೇ ವೇಳೆ, ಹುಬ್ಬಳ್ಳಿ –ಬಿಜಯಪುರ ರಸ್ತೆಯ ಕಾಮಗಾರಿಯ ಬಗ್ಗೆ ಪ್ರಸ್ತಾಪಿಸಿದ ಅವರು, 218 ನೇ ನ್ಯಾಷನಲ್ ಹೈವೇ ಕಾಮಗಾರಿ ಸಮರ್ಪಕವಾಗಿ ಮುಗಿದಿಲ್ಲ. ಆದರೂ ಹೆಬಸೂರು ಬಳಿ ಟೋಲ್ ಸಂಗ್ರಹಕ್ಕೆ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ. ಕಾಮಗಾರಿ ಮುಗಿಯದೆ ಟೋಲ್ ಸಂಗ್ರಹ ಸರಿಯಲ್ಲ ಎಂದು ಹೇಳಿದ್ರು. ಈ ಕಾಮಗಾರಿಯನ್ನು ಚುರುಕುಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಪ ಮುಖ್ಯಮಂತ್ರಿ, ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಸಚಿವರಾದ ಗೋವಿಂದ ಕಾರಜೋಳ, ಶಾಸಕರಾದ ಅರವಿಂದ್ ಬೆಲ್ಲದ್, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಲೋಕೋಪಯೋಗಿ ಇಲಾಖೆ, ಕೆ ಆರ್ ಡಿ ಸಿ ಎಲ್ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಪ್ರಮುಖ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ  ಪಾಲ್ಗೊಂಡಿದ್ದರು.
Published by:Latha CG
First published: