ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧ ; ಸಚಿವ ಕೆ.ಎಸ್.ಈಶ್ವರಪ್ಪ

ವರ್ಗಾವಣೆಯಲ್ಲಿನ ಸಮಸ್ಯೆಗಳನ್ನು ನಿವಾರಿಸುವಲ್ಲಿ ಹಾಗೂ ವರ್ಗಾವಣೆ ಪ್ರಕ್ರಿಯೆ ಸರಳಗೊಳಿಸುವಲ್ಲಿ ಸರ್ಕಾರದ ವತಿಯಿಂದ ಪ್ರಯತ್ನಗಳು ಪ್ರಗತಿಯಲ್ಲಿವೆ. ರಾಜ್ಯದ ಎಲ್ಲಾ ಶಿಕ್ಷಕರಿಗೂ ಅನುಕೂಲವಾಗುವಂತೆ ವರ್ಗಾವಣೆ ನೀತಿ-ನಿಯಮಗಳನ್ನು ಅನುಷ್ಠಾನಕ್ಕೆ ತರುವ ಅಗತ್ಯವಿದೆ

G Hareeshkumar | news18
Updated:September 6, 2019, 9:43 AM IST
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧ ; ಸಚಿವ ಕೆ.ಎಸ್.ಈಶ್ವರಪ್ಪ
ಸಚಿವ ಕೆ.ಎಸ್​. ಈಶ್ವರಪ್ಪ
  • News18
  • Last Updated: September 6, 2019, 9:43 AM IST
  • Share this:
ಶಿವಮೊಗ್ಗ(ಸೆ.05) : ಸಮಾಜವನ್ನು ಸರಿದಾರಿಗೆ ಕೊಂಡೊಯ್ಯುವ ಹಾಗೂ ಮಾರ್ಗದರ್ಶನ ನೀಡುವ ಶಿಕ್ಷಕರ ಎಲ್ಲಾ ಸಮಸ್ಯೆಗಳ ನಿವಾರಿಸಲು ಸರ್ಕಾರ ಬದ್ಧವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಶಿಕ್ಷಕರು ಎದೆಗುಂದುವ ಅಗತ್ಯವಿಲ್ಲ. ಅವರ ಎಲ್ಲಾ ಸಮಸ್ಯೆಗಳನ್ನು ಸಮಾಧಾನ ಚಿತ್ತದಿಂದ ಆಲಿಸಿ, ಇಲಾಖಾ ಮುಖ್ಯಸ್ಥರೊಂದಿಗೆ ಸಮಾಲೋಚನೆ ನಡೆಸಿ ನಂತರ ಶಿಕ್ಷಣ ಸಚಿವರೊಂದಿಗೆ ಚರ್ಚಿಸಲು ಯತ್ನಿಸುವುದಾಗಿ ಸಚಿವರು ತಿಳಿಸಿದರು.

ವರ್ಗಾವಣೆಯಲ್ಲಿನ ಸಮಸ್ಯೆಗಳನ್ನು ನಿವಾರಿಸುವಲ್ಲಿ ಹಾಗೂ ವರ್ಗಾವಣೆ ಪ್ರಕ್ರಿಯೆ ಸರಳಗೊಳಿಸುವಲ್ಲಿ ಸರ್ಕಾರದ ವತಿಯಿಂದ ಪ್ರಯತ್ನಗಳು ಪ್ರಗತಿಯಲ್ಲಿವೆ. ರಾಜ್ಯದ ಎಲ್ಲಾ ಶಿಕ್ಷಕರಿಗೂ ಅನುಕೂಲವಾಗುವಂತೆ ವರ್ಗಾವಣೆ ನೀತಿ-ನಿಯಮಗಳನ್ನು ಅನುಷ್ಠಾನಕ್ಕೆ ತರುವ ಅಗತ್ಯವಿದೆ. ಅದಕ್ಕಾಗಿ ತಜ್ಞರ, ಬುದ್ದಿಜೀವಿಗಳ ಸಲಹೆ-ಸೂಚನೆಗಳನ್ನು ಮುಕ್ತವಾಗಿ ಸ್ವಾಗತಿಸುವುದಾಗಿ ಅವರು ತಿಳಿಸಿದರು.

ಇದನ್ನೂ ಓದಿ : ನಾನು ಸಿಎಂ ಆಗೋಕೆ ರಾಜಪ್ಪ ಮೇಷ್ಟ್ರು ಕಾರಣ: ಶಿಕ್ಷಕರ ದಿನಾಚರಣೆಯಂದು ಗುರುಗಳ ನೆನದ ಸಿದ್ದರಾಮಯ್ಯ

ಪ್ರಸ್ತುತ ಎದುರಾಗಿರುವ ಶಿಕ್ಷಕರ ವರ್ಗಾವಣೆ ಸಮಸ್ಯೆ ಪ್ರಸಕ್ತ ಸಾಲಿನಲ್ಲಿಯೇ ಪೂರ್ಣಗೊಳ್ಳುವಂತಾಗಬೇಕು. ಮುಂದಿನ ವರ್ಷಗಳಿಂದ ಶಿಕ್ಷಕ ಸ್ನೇಹಿ ವರ್ಗಾವಣೆಗಳು ನಡೆಯುವಂತಾಗಬೇಕು ಎಂದ ಅವರು ದೇಶದ ಸರ್ವಾಂಗೀಣ ವಿಕಾಸಕ್ಕೆ ನಿವೃತ್ತ ಶಿಕ್ಷಕರ ಸೇವೆ ಸ್ಮರಣೀಯವಾದುದು ಎಂದವರು ನುಡಿದರು.

ದ್ವೇಷದ ರಾಜಕಾರಣ ಆಡಳಿತ ಪಕ್ಷದ ಮೇಲೆ ಬರುವುದು ಸಹಜ

ಬಿಜೆಪಿ ನಾಯಕರ ಮೇಲೆ ಸೇಡಿನ ರಾಜಕಾರಣದ ಆರೋಪ ವಿಚಾರ ಮತನಾಡಿದ ಅವರು,  ಇವೆಲ್ಲವೂ ರಾಜಕಾರಣದಲ್ಲಿ ಇದ್ದದ್ದೆ. ನಾವು ಕೂಡ ಬಹಳಷ್ಠು ಈ ಹಿಂದೆ ಅನುಭವಿಸಿದ್ದೇವೆ. ದ್ವೇಷದ ರಾಜಕಾರಣ ಆರೋಪ ಆಡಳಿತ ಪಕ್ಷದ ಮೇಲೆ ಬರುವುದು ಸಹಜ. ಕಾಂಗ್ರೆಸ್ ಜೆಡಿಎಸ್ ಸರ್ಕಾರ ಅಧಿಕಾರದಲ್ಲಿದ್ದಾಗ ನಾವೂ ಕೂಡ ಅನುಭವಿಸಿದ್ದೇವೆ. ಯಾವುದು ನ್ಯಾಯ, ಯಾವುದು ಅನ್ಯಾಯ ಎಂಬುದು ನ್ಯಾಯಾಲಯ ತೀರ್ಮಾನ ಮಾಡಲಿದೆ ಎಂದರು.ಮಾಜಿ ಸಚಿವ ಡಿ ಕೆ ಶಿವಕುಮಾರ್​​. ಅವರ ತಾಯಿ ಕಣ್ಣೀರು ಹಾಕಿದ್ದನ್ನು ನಾನು ನೋಡಿದ್ದೇನೆ. ಈ ಪರಿಸ್ಥಿತಿ ಯಾರಿಗೂ ಬರಬಾರದು. ನಮ್ಮಲ್ಲಿ ಸಂವಿಧಾನ ಇರುವುದರಿಂದ ಯಾರು ತಪ್ಪಿತಸ್ಥರಲ್ಲ ಅವರಿಗೆ, ನ್ಯಾಯ ಸಿಕ್ಕೆ ಸಿಗುತ್ತೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.

ರಾಜ್ಯಕ್ಕೆ  ನಾಳೆ  ಪ್ರಧಾನಿ ಆಗಮನ

ನೆರೆ ನಿಭಾಯಿಸುವಲ್ಲಿ ನಮ್ಮ ಸರ್ಕಾರ ಶಕ್ತಿ ಮೀರಿ ಪ್ರಯತ್ನಿಸುತ್ತಿದೆ. ರಾಜ್ಯದಲ್ಲಿ ಅತಿ ಹೆಚ್ಚು ಪ್ರವಾಹ ಬಂದಿದೆ. ಇದನ್ನು ಸರ್ವಶಕ್ತರಾಗಿ ನಿಭಾಯಿಸಲು ನಮ್ಮ ಅಧಿಕಾರಿಗಳು ಸಂಪೂರ್ಣವಾಗಿ ತಯಾರಾಗಿದ್ದಾರೆ. ಜನರು ಕೂಡ ಸವಾಲು ಎದುರಿಸಲು ತಯಾರಾಗಿದ್ದಾರೆ. ನಾಳೆ ಪ್ರಧಾನಿ ಮೋದಿಯವರು ರಾಜ್ಯಕ್ಕೆ ಆಗಮಿಸಲಿದ್ದಾರೆ. ಕೇಂದ್ರದಿಂದ ಪರಿಹಾರ ಸಿಗುವ ಭರವಸೆ ಇದೆ. ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾದರೆ ಅನಿವಾರ್ಯವಾಗಿ ಕರ್ನಾಟಕದಲ್ಲಿ ಪ್ರವಾಹ ಬರುತ್ತದೆ. ಪ್ರವಾಹವನ್ನು ನಾವು ಸಮರ್ಥವಾಗಿ ಎದುರಿಸಬೇಕಾಗಿದೆ ಎಂದರು.

ಇದನ್ನೂ ಓದಿ : ವಿಧಾನಸೌಧದಲ್ಲಿ ವಿಡಿಯೋ ನೋಡಿದ್ದು ತಪ್ಪಾದರೂ ದೇಶದ್ರೋಹದ ಕೆಲಸವಲ್ಲ, ಅದೊಂದು ಆಕಸ್ಮಿಕ: ಲಕ್ಷ್ಮಣ ಸವದಿ ಪರ ಸಚಿವ ಮಾಧುಸ್ವಾಮಿ ಬ್ಯಾಟಿಂಗ್

First published: September 5, 2019, 5:49 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading