ಬೆಂಗಳೂರು: ಸಿಡಿ ವಿಷಯವಾಗಿ ಇಂದು ಬೆಳಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದ ಸಚಿವ ಡಾ.ಕೆ. ಸುಧಾಕರ್ ಅವರು, ರಾಜ್ಯದ ಎಲ್ಲ ಶಾಸಕರ ಮೇಲೂ ತನಿಖೆಯಾಗಲಿ. ಯಾರ್ಯಾರ ಸತ್ಯಹರಿಶ್ಚಂದ್ರರು, ಶ್ರೀರಾಮರು ಇದ್ದಾರೆ ಎನ್ನುವುದು ಗೊತ್ತಾಗುತ್ತದೆ ಎಂದು ಹೇಳಿದ್ದರು. ಆದರೆ, ಈ ಹೇಳಿಕೆಗೆ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾದ ಬಳಿಕ ಎಚ್ಚೆತ್ತುಕೊಂಡ ಸಚಿವ ಸುಧಾಕರ್ ಅವರು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸುಧಾಕರ್ ಅವರು, ಕೆಲ ನಾಯಕರ ಏಕಪಕ್ಷೀಯ, ಪೂರ್ವಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲಾ ಮಾನ್ಯ ಶಾಸಕ ಮಿತ್ರರ ಬಗ್ಗೆ ನನಗೆ ಅಪಾರವಾದ ಗೌರವ ಇಟ್ಟುಕೊಂಡಿದ್ದೇನೆ. ಹೀಗಾಗಿ ಯಾರಿಗಾದರೂ ನನ್ನ ಹೇಳಿಕೆಯಿಂದ ನೋವಾಗಿದ್ದಲ್ಲಿ ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ನಮ್ಮ ಹದಿನೇಳು ಜನರ ವಿರುದ್ದ ತೇಜೋವಧೆ ಯತ್ನ ನಡೆಸಿದ್ದ ಕೆಲ ನಾಯಕರ ವಿರುದ್ಧ ಮಾತ್ರವೇ ನಾನು ಹೇಳಿಕೆ ನೀಡುವ ಯತ್ನ ಮಾಡಿದ್ದೇನೆಯೇ ಹೊರತು ಎಲ್ಲಾ ಶಾಸಕರಿಗೆ ನೋವು ಉಂಟು ಮಾಡುವ ಉದ್ದೇಶ ನನಗಿಲ್ಲ, ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಹೀಗಾಗಿ ಯಾರಿಗಾದರೂ ನನ್ನ ಹೇಳಿಕೆಯಿಂದ ನೋವಾಗಿದ್ದಲ್ಲಿ ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ನಮ್ಮ ಹದಿನೇಳು ಜನರ ವಿರುದ್ದ ತೇಜೋವಧೆ ಯತ್ನ ನಡೆಸಿದ್ದ ಕೆಲ ನಾಯಕರ ವಿರುದ್ಧ ಮಾತ್ರವೇ ನಾನು ಹೇಳಿಕೆ ನೀಡುವ ಯತ್ನ ಮಾಡಿದ್ದೇನೆಯೇ ಹೊರತು ಎಲ್ಲಾ ಶಾಸಕರಿಗೆ ನೋವು ಉಂಟು ಮಾಡುವ ಉದ್ದೇಶ ನನಗಿಲ್ಲ.(2/2)
— Dr Sudhakar K (@mla_sudhakar) March 24, 2021
ಕೆಲ ನಾಯಕರ ಏಕಪಕ್ಷೀಯ, ಪೂರ್ವಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲಾ ಮಾನ್ಯ ಶಾಸಕ ಮಿತ್ರರ ಬಗ್ಗೆ ನನಗೆ ಅಪಾರವಾದ ಗೌರವ ಇಟ್ಟುಕೊಂಡಿದ್ದೇನೆ.(1/2)
— Dr Sudhakar K (@mla_sudhakar) March 24, 2021
ಇದನ್ನು ಓದಿ: ಎಲ್ಲಾ 224 ಶಾಸಕರದ್ದೂ ತನಿಖೆಯಾಗಲಿ, ಯಾರಿಗೆಲ್ಲಾ ಅನೈತಿಕ ಸಂಬಂಧ ಇದೆ ಗೊತ್ತಾಗಲಿ: ಡಾ. ಸುಧಾಕರ್
ಸುಧಾಕರ್ ಹೇಳಿಕೆಗೆ ಕಾಂಗ್ರೆಸ್ ತೀಕ್ಷ್ಣವಾಗಿ ತಿರುಗೇಟು ನೀಡಿತ್ತು. ಸ್ಪೀಕರ್ ಅವರನ್ನೂ ಸೇರಿದಂತೆ ಸದನದ ಮಹಿಳಾ ಸದಸ್ಯರನ್ನೂ ಸೇರಿಸಿ ಎಲ್ಲಾ 224 ಸದಸ್ಯರ ಮೇಲೆ ವ್ಯಭಿಚಾರದ ಆರೋಪ ಹೊರಿಸಿದ ಸಚಿವ ಸುಧಾಕರ್ ಕ್ಷಮೆ ಕೇಳಬೇಕು. ಉಳಿದ 5 ಸಚಿವರು ಸೇರಿದಂತೆ ತಡೆಯಾಜ್ಞೆ ತಂದಿರುವ ಸುಧಾಕರ್ ಅವರೇ ಕಳಂಕಿತರು, ಮೊದಲು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಆಗ್ರಹಿಸಿತ್ತು.
ಸ್ಪೀಕರ್ ಅವರನ್ನೂ ಸೇರಿದಂತೆ ಸದನದ ಮಹಿಳಾ ಸದಸ್ಯರನ್ನೂ ಸೇರಿಸಿ ಎಲ್ಲಾ 224 ಸದಸ್ಯರ ಮೇಲೆ ವ್ಯಭಿಚಾರದ ಆರೋಪ ಹೊರಿಸಿದ ಸಚಿವ @mla_sudhakar ಅವರು ಕ್ಷಮೆ ಕೇಳಬೇಕು,
ಉಳಿದ 5 ಸಚಿವರು ಸೇರಿದಂತೆ
ತಡೆಯಾಜ್ಞೆ ತಂದಿರುವ ಸುಧಾಕರ್ ಅವರೇ ಕಳಂಕಿತರು, ಮೊದಲು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು.
— Karnataka Congress (@INCKarnataka) March 24, 2021
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ