Covid19: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್​ಡೌನ್​ ಇಲ್ಲ; ಸಚಿವ ಸುಧಾಕರ್​ ಸ್ಪಷ್ಟನೆ

ಕೊರೋನಾ ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಜನರ ಮಿತಿಯನ್ನು ಪಾಲಿಸಬೇಕು. ಸಾಮಾಜಿಕ ಅಂತರ ಕಡ್ಡಾಯ

ಸಚಿವ ಕೆ. ಸುಧಾಕರ್.

ಸಚಿವ ಕೆ. ಸುಧಾಕರ್.

 • Share this:
  ಬೆಂಗಳೂರು (ಮಾ. 22): ಕೊರೋನಾ ಸೋಂಕಿನ ಪ್ರಕರಣಗಳು ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆ ಮತ್ತೊಂದು ಸುತ್ತಿನ ಲಾಕ್​ಡೌನ್​ ಅನ್ನು ರಾಜ್ಯದಲ್ಲಿ ಘೋಷಣೆ ಮಾಡಲಾಗುತ್ತದೆ ಎಂಬ ಮಾತು ಕೇಳಿಬರುತ್ತಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ಕೆ ಸುಧಾಕರ್​, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಲಾಕ್ ಡೌನ್, ಸೆಮಿಲಾಕ್ ಡೌನ್​ ಮಾಡುವುದಿಲ್ಲ. ಲಾಕ್​ಡೌನ್​ ಮಾಡುವ ಪ್ರಶ್ನೆಯೇ ಇಲ್ಲ. ಆದರೂ ರಾಜ್ಯದಲ್ಲಿ ಒಂದು ವಾರ ಕಾಲ ಕಾದು ನೋಡುತ್ತೇವೆ. ಪರಿಸ್ಥಿತಿ ಗಮನಿಸಿ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಮಾರ್ಗಸೂಚಿ ಬದಲಾವಣೆ ಮಾಡುವ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ತಿಳಿಸಿದರು.

  ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆರಂಭಗೊಂಡಿದ್ದು, ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಲಾಗಿದೆ. ಮಾಸ್ಕ್​ ಬಳಕೆ ಕಡ್ಡಾಯವಾಗಿದೆ. ಮಾಸ್ಕ್​ ಹಾದಿದ್ದರೇ 250 ರೂ ದಂಡ ಹಾಕಲಾಗುತ್ತದೆ ಎಂದರು. ಇದೇ ವೇಳೆ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಲಾಕ್​ಡೌನ್​ ಬಗ್ಗೆಗಿನ ಸುಳ್ಳು ಸುದ್ದಿಗೆ ಕಿವಿಗೊಡಬಾರದು. ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮಕ್ಕೆ ಮುಂದಾಗಲಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು.  ಕೊರೋನಾ ಕುರಿತು ಜಾಗೃತಿ ಮೂಡಿಸಲು ವಿವಿಧ ಕಾರ್ಯಕ್ರಮ ನಡೆಸಲಾಗುತ್ತಿದೆ. ಲಸಿಕೆ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಕೊರೋನಾ ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಜನರ ಮಿತಿಯನ್ನು ಪಾಲಿಸಬೇಕು. ಸಾಮಾಜಿಕ ಅಂತರ ಕಡ್ಡಾಯ ಎಂದರು

  ಕೋವಿಡ್​ ಲಸಿಕೆ ವಿತರಣೆ ನಡೆಯುತ್ತಿದ್ದು, ರಾಜ್ಯದಲ್ಲಿ ವ್ಯಾಕ್ಸಿನ್ ವೇಸ್ಟ್ ಆಗುತ್ತಿಲ್ಲ. ಅದಕ್ಕೆ ಅವಕಾಶವೂ ಇಲ್ಲ.ಖಾಸಗಿಯವರೂ ಹಿರಿಯ ನಾಗರಿಕರಿಗೆ ಉಚಿತವಾಗಿ ವ್ಯಾಕ್ಸಿನ್ ಕೊಡುವ ವಿಷಯದಲ್ಲಿ ಅವರೊಂದಿಗೆ ಚರ್ಚಿಸಲಾಗುತ್ತದೆ ಎಂದರು.

  ರಾಜ್ಯದಲ್ಲಿ ಕೋವಿಡ್ ಸಂಖ್ಯೆ ‌ಹೆಚ್ಚಳವಾಗುತ್ತಿದೆ. ತಜ್ಞರು ಕೊರೋನಾ ಎರಡನೇ ಅಲೆಯ ಸೂಚನೆ ಅಂತ ಹೇಳಿದ್ದಾರೆ. ಜನರಿಗೆ ಕೋವಿಡ್ ನಿಯಮಗಳನ್ನು ಪಾಲಿಸಿ ಎಂದು ಹೇಳುತ್ತಿದ್ದೇವೆ. ಕೋವಿಡ್ ನಿಯಮಗಳನ್ನು ಪಾಲಿಸದೇ ರಾಜ್ಯ ಸರ್ಕಾರ ಕಠಿಣ ನಿರ್ಧಾರಗಳನ್ನ ಕೈಗೊಳ್ಳುವಂತೆ ಮಾಡಬೇಡಿ ಎಂದು ಸಿಎಂ ಈಗಾಗಲೇ ರಾಜ್ಯದ ಜನರಿಗೆ ಮನವಿ ಮಾಡಿದ್ದಾರೆ.

  ಸದ್ಯ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕರ್ನಾಟಕದ ಅಕ್ಕಪಕ್ಕದ ರಾಜ್ಯಗಳಾದ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಸೋಂಕಿನ ಸಂಖ್ಯೆ ವಿಪರೀತವಾಗಿ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಕಳೆದೊಂದು ವಾರದಿಂದ ದಿನಕ್ಕೆ ಸಾವಿರ ಪ್ರಕರಣಗಳು ದಾಖಲಾಗುತ್ತಿದೆ. ಈ ಹಿನ್ನಲೆ ಜನರೇ ಸ್ವಯಂ ಪ್ರೇರಿತವಾಗಿ ಕೋವಿಡ್​ ನಿಯಮ ಪಾಲನೆ ಮುಂದಾಗಬೇಕು. ಮತ್ತೊಂದು ಲಾಕ್​ಡೌನ್​ ಮಾಡಿದರೆ, ಜನರು ಹಾಗೂ ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಲಿದೆ.
  Published by:Seema R
  First published: