HOME » NEWS » State » MINISTER K SUDHAKAR TALK AGAINST EX CM KUMARASWAMY MAK

ಯಾವ ನಾಯಕರಿಗೆ ಏನು ಸೇವೆ ಮಾಡಿ 15 ವರ್ಷದಲ್ಲಿ ಎರಡು ಬಾರಿ ಸಿಎಂ ಆದಿರಿ?; ಕುಮಾರಸ್ವಾಮಿಯನ್ನು ಕುಟುಕಿದ ಸುಧಾಕರ್‌

ನಾನು ಯಾವ ಮುಂಬೈಗೂ ಹೋಗಿಲ್ಲ. ಡ್ರಗ್ ಮಾಫಿಯಾ ಹಣದಿಂದ ಈ ಸರ್ಕಾರ ಬಂದಿದ್ದರೆ, ಅದು ಖಂಡಿತ ಇರಬಾರದು. ಮಾಜಿ ಮುಖ್ಯಮಂತ್ರಿಗಳಾಗಿ ಇಂಥ ಗಂಭೀರ ಆರೋಪಗಳಿಗೆ ಪುರಾವೆಯನ್ನೂ ನೀಡಲೇಬೇಕಾಗುತ್ತದೆ. ಇದನ್ನು ತಾವು ಸಾಬೀತು ಮಾಡಿದರೆ ನಾನು ರಾಜೀನಾಮೆ ಕೊಡ್ತೇನಿ ಆಗದಿದ್ದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವಿರಾ? ಎಂದು ಕುಮಾರಸ್ವಾಮಿಗೆ ಸುಧಾಕರ್‌ ಸವಾಲು ಹಾಕಿದ್ದಾರೆ.

news18-kannada
Updated:August 31, 2020, 10:38 PM IST
ಯಾವ ನಾಯಕರಿಗೆ ಏನು ಸೇವೆ ಮಾಡಿ 15 ವರ್ಷದಲ್ಲಿ ಎರಡು ಬಾರಿ ಸಿಎಂ ಆದಿರಿ?; ಕುಮಾರಸ್ವಾಮಿಯನ್ನು ಕುಟುಕಿದ ಸುಧಾಕರ್‌
ಸಚಿವ ಡಾ.ಕೆ.ಸುಧಾಕರ್
  • Share this:
ಬೆಂಗಳೂರು (ಆಗಸ್ಟ್‌ 31); ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿ ಹಾಗೂ ಸಚಿವ ಡಾ|ಕೆ. ಸುಧಾಕರ್‌ ಅವರ ಆರೋಪ ಪ್ರತ್ಯಾರೋಪಗಳು ಇದೀಗ ವ್ಯಯಕ್ತಿಕ ಮಟ್ಟಕ್ಕೆ ತಲುಪಿದೆ. ಕುಮಾರಸ್ವಾಮಿ ಆರೋಪಗಳಿಗೆ ಟ್ವೀಟ್‌ ಮೂಲಕವೇ ಕಟುವಾಗಿ ಉತ್ತರ ನೀಡಿರುವ ಸಚಿವ ಡಾ|ಕೆ. ಸುಧಾಕರ್‌, "ತಾವು 15 ವರ್ಷದಲ್ಲಿ ಎರಡು ಬಾರಿ ಸಿಎಂ ಆಗಿದ್ದೀರಲ್ಲ. ಹಾಗಾದರೆ ನೀವು ಯಾವ ನಾಯಕರಿಗೆ ಏನು ಸೇವೆ ಮಾಡಿ ಈ ಸ್ಥಾನಕ್ಕೆ ಏರಿದ್ದೀರಿ ಎಂದು ಒಮ್ಮೆ ತಮ್ಮನ್ನು ಕೇಳಬಹುದೇ?" ಎಂದು ಕುಮಾರಸ್ವಾಮಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.News18 ...........................................

ಈ ಹಿಂದೆ ಟ್ವೀಟ್ ಮೂಲಕ ಡಾ| ಸುಧಾಕರ್ ವಿರುದ್ಧ ವ್ಯಯಕ್ತಿಕ ದಾಳಿ‌‌ ಮಾಡಿದ್ದ ಕುಮಾರಸ್ವಾಮಿ, "ಕಳೆದ ಎರಡು ದಶಕಗಳಿಂದ ಸುಧಾಕರ್ ಅವರು ಯಾವ್ಯಾವ ನಾಯಕರಿಗೆ ಎಂತೆಂಥ ಸೇವೆಗಳನ್ನು ಮಾಡಿದ್ದಾರೆ ಎಂಬ ಹಿನ್ನೆಲೆ ಬಗೆಗೆ ನಾನು ಮಾತನಾಡಲಾರೆ. ಅವರು ರಾಜಕೀಯ ನೆಲೆ ಬದಲಿಸಿ ರಾತ್ರೋರಾತ್ರಿ ವಿಮಾನವೇರಿದ ಮುಂಬೈವೀರ" ಎಂದು ಸುಧಾಕರ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಕುಮಾರಸ್ವಾಮಿ ಅವರ ವಾಗ್ದಾಳಿಗೆ ಅಷ್ಟೇ ಖಾರವಾಗಿ ಸರಣಿ ಟ್ವೀಟ್‌ ಮೂಲಕ ತಿರುಗೇಟು ನೀಡಿರುವ ಸಚಿವ ಸುಧಾಕರ್‌, "ಯಾವ್ಯಾವ ನಾಯಕರಿಗೆ, ಏನೇನೂ ಸೇವೆ ಮಾಡಿ 15 ವರ್ಷದಲ್ಲಿ 2 ಬಾರಿ ಮುಖ್ಯಮಂತ್ರಿಗಳಾದಿರಿ ಎಂಬ ಬಗ್ಗೆಯೂ ಒಮ್ಮೆ ತಮ್ಮನ್ನು ಕೇಳಬಹುದೇ? ಪಕ್ಕದಲ್ಲಿ ಧರಮ್ ಸಿಂಗ್ ಅವರನ್ನು ಇಟ್ಟುಕೊಂಡು, ಕೆಲವು ಸ್ನೇಹಿತರೊಂದಿಗೆ ರಾತ್ರೋರಾತ್ರಿ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದ ಹಿನ್ನಲೆ ಬಗ್ಗೆ ಜನರೇ ಮಾತನಾಡುತ್ತಿದ್ದಾರೆ. ಒಮ್ಮೆ ಕೇಳಿಸಿಕೊಳ್ಳಿ!" ಎಂದು ಇತಿಹಾಸವನ್ನು ಉಲ್ಲೇಖಿಸುವ ಮೂಲಕ ಕಾಲೆಳೆದಿದ್ದಾರೆ.


ಇನ್ನೂ ಕುಮಾರಸ್ವಾಮಿ ಅವರ ಆರೋಪಗಳಿಗೂ ಉತ್ತರ ನೀಡಿರುವ ಸುಧಾಕರ್‌, "ಸರ್ಕಾರದ ವಿರುದ್ಧ ತಮ್ಮ ಆರೋಪಗಳಿಗೆ ಪುರಾವೆ ನೀಡಿ. ಸರ್ಕಾರದಲ್ಲಿ ಸಚಿವನಾಗಿ ಸರ್ಕಾರದ ವಿರುದ್ಧ ಆಧಾರರಹಿತ ಆರೋಪ ಮಾಡಿದರೆ ಅದಕ್ಕೆ ಪುರಾವೆ ಕೇಳುವುದು ಹೆಗಲು ಮುಟ್ಟಿಕೊಳ್ಳುವ ಪ್ರಮೇಯ ಹೇಗಾದೀತು?ತಮ್ಮ ಆರೋಪಗಳ ಹಿನ್ನಲೆ ಆಧಾರಗಳ ಬಗ್ಗೆ ಕೇಳಿದ್ದೇನೆ. ನಾನು ಮಾಜಿ ಮುಖ್ಯಮಂತ್ರಿ ಮಾಜಿ ಪ್ರಧಾನಮಂತ್ರಿಯ ಮಗನಲ್ಲ, ಒಬ್ಬ ಸಾಮಾನ್ಯ ಶಾಲಾ ಶಿಕ್ಷಕನ ಮಗನಾಗಿ ಸ್ವಸಾಮರ್ಥ್ಯದಿಂದ, ಜನರ ಆಶೀರ್ವಾದದಿಂದ ರಾಜಕೀಯದಲ್ಲಿ ಸಕ್ರಿಯನಾಗಿದ್ದೇನೆ. ನಾನೆಂದೂ ಯಾರ ಹೆಸರಿನಲ್ಲೂ ರಾಜಕೀಯ ಮಾಡಿಲ್ಲ. ಎಲ್ಲರ ಹಿನ್ನಲೆಗಳನ್ನೂ ರಾಜ್ಯದ ಜನರು ಗ್ರಹಿಸಿದ್ದಾರೆನಾನು ಯಾವ ಮುಂಬೈಗೂ ಹೋಗಿಲ್ಲ. ಡ್ರಗ್ ಮಾಫಿಯಾ ಹಣದಿಂದ ಈ ಸರ್ಕಾರ ಬಂದಿದ್ದರೆ, ಅದು ಖಂಡಿತ ಇರಬಾರದು. ಮಾಜಿ ಮುಖ್ಯಮಂತ್ರಿಗಳಾಗಿ ಇಂಥ ಗಂಭೀರ ಆರೋಪಗಳಿಗೆ ಪುರಾವೆಯನ್ನೂ ನೀಡಲೇಬೇಕಾಗುತ್ತದೆ. ಇದನ್ನು ತಾವು ಸಾಬೀತು ಮಾಡಿದರೆ ನಾನು ರಾಜೀನಾಮೆ ಕೊಡ್ತೇನಿ ಆಗದಿದ್ದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುವಿರಾ?" ಎಂದು ಸುಧಾಕರ್‌ ಕುಮಾರಸ್ವಾಮಿಗೆ ಸವಾಲು ಹಾಕಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, "ಬಿಜೆಪಿ ಕಾರ್ಯಕರ್ತರ ಪರವಾಗಿ ಮಾತನಾಡಲು ನಮಲ್ಲಿ ಅರ್ಹ ವಕ್ತಾರರು ಇದ್ದಾರೆ. ಪಕ್ಷದ ಸಿದ್ದಾಂತದ ಬಗ್ಗೆ, ಅಥವಾ ನನ್ನ ಅರ್ಹತೆ ಬಗ್ಗೆ ನಮ್ಮ ಪಕ್ಷದ ಕಾರ್ಯಕರ್ತರು ನಿರ್ಣಯಿಸುತ್ತಾರೆ ಬಿಡಿ! ತಾವು ತಲೆಕೆಡಿಸಿಕೊಳ್ಳುವ ಅಗತ್ಯವೇನಿದೆ?

ಇದನ್ನೂ ಓದಿ : ರಾಜಕೀಯ ನೆಲೆ ಬದಲಿಸಿ ರಾತ್ರೋರಾತ್ರಿ ವಿಮಾನವೇರಿದ ಮುಂಬೈವೀರ ಸುಧಾಕರ್‌; ಕುಮಾರಸ್ವಾಮಿ ವಾಗ್ದಾಳಿ

ನಾನು ಕೇಳಿದ್ದು ಡ್ರಗ್ ಮಾಫಿಯಾ ಆರೋಪದ ಹಿನ್ನಲೆಗಳ ಬಗ್ಗೆ, ಮಾಜಿ ಮುಖ್ಯಮಂತ್ರಿಗಳಾಗಿ, ಡ್ರಗ್ ಮಾಫಿಯಾ ಹಣದಿಂದ ಸರ್ಕಾರ ಬಂದಿದೆ ಎಂದು ಚುನಾಯಿತ ಸರ್ಕಾರದ ಮೇಲಿನ ಬೇಜಾವಾಬ್ದಾರಿ ಹೇಳಿಕೆಯ ಹಿನ್ನಲೆ ಬಗ್ಗೆ! ಬಿಜೆಪಿ ಅನೈತಿಕ ಕೆಲಸವನ್ನು ಎಂದೂ ಮಾಡಿಲ್ಲ, ಮಾಡುವುದಿಲ್ಲ. ಅದಕ್ಕೆ 2ಸ್ಥಾನದಿಂದ 303 ಸ್ಥಾನಗಳನ್ನು ಜನ ಆಶೀರ್ವದಿಸಿದ್ದಾರೆ" ಎಂದು ಉತ್ತರಿಸಿದ್ದಾರೆ.
Published by: MAshok Kumar
First published: August 31, 2020, 10:38 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories