ಇನ್ನೂ ಬದುಕಿದ್ದೇನೆಂದು ತೋರಿಸಲು ಕುಮಾರಸ್ವಾಮಿ ವಿಡಿಯೋ ರಿಲೀಸ್ ಮಾಡಿದ್ದಾರೆ; ಕೆ.ಎಸ್. ಈಶ್ವರಪ್ಪ ಲೇವಡಿ

ಅಧಿಕಾರ ಕಳೆದುಕೊಂಡಿರುವ ಎಚ್​.ಡಿ. ಕುಮಾರಸ್ವಾಮಿ ತಾನಿನ್ನೂ ಬದುಕಿದ್ದೇನೆ ಎಂದು ತೋರಿಸಿಕೊಳ್ಳಲು ಮಂಗಳೂರು ಗಲಭೆಯ ವಿಡಿಯೋ ರಿಲೀಸ್ ಮಾಡಿದ್ದಾರೆ. ಕುಮಾರಸ್ವಾಮಿ ಎಷ್ಟೇ ವಿಡಿಯೋ ಮಾಡಿದರೂ, ಇನ್ನು 10 ಜನ್ಮ ಕಳೆದರೂ ಅವರು ಸಿಎಂ ಆಗುವುದಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

Sushma Chakre | news18-kannada
Updated:January 10, 2020, 3:16 PM IST
ಇನ್ನೂ ಬದುಕಿದ್ದೇನೆಂದು ತೋರಿಸಲು ಕುಮಾರಸ್ವಾಮಿ ವಿಡಿಯೋ ರಿಲೀಸ್ ಮಾಡಿದ್ದಾರೆ; ಕೆ.ಎಸ್. ಈಶ್ವರಪ್ಪ ಲೇವಡಿ
ಈಶ್ವರಪ್ಪ- ಕುಮಾರಸ್ವಾಮಿ
  • Share this:
ಶಿವಮೊಗ್ಗ (ಜ. 10): ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುವುದನ್ನು ವಿರೋಧಿಸಿ ಮಂಗಳೂರಿನಲ್ಲಿ ನಡೆದಿದ್ದ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಹೊಸ ವಿಡಿಯೋ ರಿಲೀಸ್ ಮಾಡಿದ್ದರು. ಘಟನೆ ವೇಳೆ ಪೊಲೀಸರು ಪ್ರತಿಭಟನಾಕಾರರ ಮೇಲೆ ದಾಳಿ ನಡೆಸಿದ 35 ದೃಶ್ಯಗಳನ್ನು ಬಿಡುಗಡೆ ಮಾಡಿದ್ದ ಎಚ್​ಡಿಕೆ ವಿರುದ್ಧ ಸಚಿವ ಕೆ.ಎಸ್. ಈಶ್ವರಪ್ಪ ಕಟು ವಾಗ್ದಾಳಿ ನಡೆಸಿದ್ದಾರೆ.

ಅಧಿಕಾರ ಕಳೆದುಕೊಂಡಿರುವ ಎಚ್​.ಡಿ. ಕುಮಾರಸ್ವಾಮಿ ತಾನಿನ್ನೂ ಬದುಕಿದ್ದೇನೆ ಎಂದು ಜಗತ್ತಿಗೆ ತೋರಿಸಿಕೊಳ್ಳಲು ಈ ವಿಡಿಯೋ ರಿಲೀಸ್ ಮಾಡಿದ್ದಾರೆ. ಕುಮಾರಸ್ವಾಮಿ ಇನ್ನು ಎಂದೂ ಸಿಎಂ ಆಗುವುದಿಲ್ಲ. ಎಷ್ಟೇ ವಿಡಿಯೋ ಮಾಡಿದರೂ, ಇನ್ನು 10 ಜನ್ಮ ಕಳೆದರೂ ಅವರು ಸಿಎಂ ಆಗುವುದಿಲ್ಲ ಎಂದು ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ಜೆಡಿಎಸ್​ ಶಾಸಕರು ಸದ್ಯದಲ್ಲೇ ಬಿಜೆಪಿಗೆ ಬರಲಿದ್ದಾರೆ. ಅವರ ಪಕ್ಷ ಜೀವಂತವಾಗಿದೆ ಎಂದು ತೋರಿಸಿಕೊಳ್ಳಲು ವಿಡಿಯೋ ರಿಲೀಸ್ ಮಾಡಿದ್ದಾರೆ. ವಿನಾಕಾರಣ ಬಿಜೆಪಿ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ. ಗೂಂಡಾಗಳು ಮಂಗಳೂರಿನಲ್ಲಿ ಸಂಚು ನಡೆಸಿ ಗಲಭೆ ನಡೆಸಿದರು ಎಂಬುದನ್ನು ಎಲ್ಲ ಮಾಧ್ಯಮಗಳು ವರದಿ ಮಾಡಿವೆ. ಟಿವಿಗಳಲ್ಲಿ, ಪತ್ರಿಕೆಗಳಲ್ಲಿ ಬಂದಿದ್ದನ್ನು ಕುಮಾರಸ್ವಾಮಿ ನಂಬುತ್ತಾರೋ ಇಲ್ಲವೋ ಗೊತ್ತಿಲ್ಲ. ಆದರೆ, ವ್ಯವಸ್ಥಿತ ಸಂಚು ನಡೆಸಿ ಗಲಭೆ ನಡೆಸಿದ ಕುತಂತ್ರಿಗಳ ಬಗ್ಗೆ ಈ ರಾಜ್ಯದ ಜನ ಮಾತನಾಡುತ್ತಿದ್ದಾರೆ. ಕುತಂತ್ರ ರಾಜಕಾರಣವನ್ನು ರಾಜ್ಯದ ಜನ ನಂಬುವುದಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸರನ್ನು ತಪ್ಪಿತಸ್ಥರು ಮಾಡುವುದು ತಪ್ಪು: ಎಚ್​​.ಡಿ ಕುಮಾರಸ್ವಾಮಿ ವಿರುದ್ಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಿಡಿ

ರಾಜ್ಯ ಸರ್ಕಾರದ ವಿರುದ್ಧ ಎಷ್ಟೇ ಆರೋಪ ಮಾಡಿದರೂ ನಾವು ಒಪ್ಪುವುದಿಲ್ಲ. ಗಲಭೆಯಲ್ಲಿ ವ್ಯವಸ್ಥಿತ ಸಂಚು ನಡೆದಿರುವ ಬಗ್ಗೆ ನ್ಯಾಯಾಂಗ ತನಿಖೆ ನಡೆದ ನಂತರ ಸತ್ಯವೇನೆಂಬುದು ತಿಳಿಯಲಿದೆ. ಆಗ, ಗಲಭೆಯಲ್ಲಿ ಇನ್ನು ಯಾರೆಲ್ಲ ಇದ್ದಾರೆ ಎಂಬುದು ಬಹಿರಂಗಗೊಳ್ಳಲಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಇಂದು ಮಂಗಳೂರು ಗಲಭೆಗೆ ಸಂಬಂಧಿಸಿದಂತೆ ವಿಡಿಯೋ ರಿಲೀಸ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ, ಮಂಗಳೂರು ಗಲಭೆ ಕುರಿತು ಸರ್ಕಾರ ಬಿಡುಗಡೆ ಮಾಡಿದ್ದ ವಿಡಿಯೋ ಎಷ್ಟು ನಿಜ ಎಂಬುದು ಬಹಿರಂಗವಾಗಬೇಕು. ಪೊಲೀಸರ ದೌರ್ಜನ್ಯ ಮುಚ್ಚಿಕೊಳ್ಳಲು ಸರ್ಕಾರ ಅವರ ಪರ ವಹಿಸಿದೆ. ಗೋಲಿಬಾರ್ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ಹರ್ಷ ನಡೆ ಅನುಮಾನಾಸ್ಪದವಾಗಿದೆ. ಹಿಂಸಾಚಾರಕ್ಕೆ ಪೊಲೀಸರೇ ಪ್ರಚೋದನೆ ನೀಡಿದ್ದಾರೆ. ಈ ಕೂಡಲೇ ಜಿಲ್ಲಾ ಪೊಲೀಸ್​ ಅಧಿಕಾರಿ ಹರ್ಷ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ: ಮಂಗಳೂರು ಗೋಲಿಬಾರ್; ಪೊಲೀಸರು ಬಿಡುಗಡೆ ಮಾಡಿದ ವಿಡಿಯೋ ಬಗ್ಗೆ ಎಚ್​.ಡಿ. ಕುಮಾರಸ್ವಾಮಿ ಪ್ರಶ್ನೆಗಳ ಸುರಿಮಳೆಏನಿದು ಘಟನೆ?:

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಪ್ರತಿಭಟನೆಗಳು ಹೆಚ್ಚಾದ ಕಾರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಇದರ ನಡುವೆಯೂ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಿದಾಗ ಡಿ. 19ರಂದು ಪೊಲೀಸರು ಗೋಲಿಬಾರ್ ನಡೆಸಿದ್ದರು. ಈ ಘಟನೆಯಲ್ಲಿ ಗುಂಡೇಟಿನಿಂದ ಜಲೀಲ್ ಮತ್ತು ನೌಶಿನ್ ಎಂಬಾತ ಸಾವನ್ನಪ್ಪಿದ್ದರು. ಪೊಲೀಸರ ಗೋಲಿಬಾರ್​ಗೆ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿತ್ತು. ನಂತರ ಗಲಭೆ ನಡೆಯುವಾಗ ಪ್ರತಿಭಟನಾಕಾರರಿಗೆ ಆಟೋಗಳಲ್ಲಿ ಕಲ್ಲುಗಳನ್ನು ತಂದುಕೊಡುತ್ತಿದ್ದ ದೃಶ್ಯ, ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ ದೃಶ್ಯಗಳ ತುಣುಕುಗಳನ್ನು ಮಂಗಳೂರು ಪೊಲೀಸರು ಬಿಡುಗಡೆ ಮಾಡಿದ್ದರು.

(ವರದಿ: ನಾಗರಾಜು)

 
Published by: Sushma Chakre
First published: January 10, 2020, 3:16 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading