ನೋಟು ಯಂತ್ರ ಇಟ್ಕೊಂಡೋನು, ಪತ್ರಕರ್ತೆಗೆ ಪೆಕರನಂತೆ ಪ್ರಶ್ನಿಸಿದವನು ನಾನಲ್ಲ; ಈಶ್ವರಪ್ಪನಿಗೆ ಎಚ್​ಡಿಕೆ ತಿರುಗೇಟು

ನನ್ನ ಕ್ಷೇತ್ರದಲ್ಲಿ 55 ರಿಂದ 60 ಸಾವಿರ ಮುಸ್ಲಿಂರ ವೋಟ್ ಗಳಿವೆ. ಇದೂವರೆಗೂ ಒಬ್ಬ ಮುಸ್ಲಿಂ ಸಮುದಾಯದ ಒಬ್ಬರಿಗೂ ನಮಸ್ಕಾರ ಹೊಡೆದು ವೋಟ್ ಕೇಳಿಲ್ಲ. ಆದರೂ 47ಸಾವಿರ ಮತಗಳ ಅಂತರದಿಂದ ಗೆದ್ದಿದ್ದೇನೆ

ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸಚಿವ ಕೆ ಎಸ್ ಈಶ್ವರಪ್ಪ

ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸಚಿವ ಕೆ ಎಸ್ ಈಶ್ವರಪ್ಪ

  • Share this:
ಬೆಂಗಳೂರು(ಜ.18) :  ಮನೆಯಲ್ಲಿ ನೋಟು ಎಣಿಸುವ ಯಂತ್ರ ಇಟ್ಟುಕೊಂಡವನು ನಾನಲ್ಲ. ನಿಮ್ಮ ಮೇಲೆ ಅತ್ಯಾಚಾರ ನಡೆದರೆ ಸರ್ಕಾರ ಏನು ಮಾಡೋಕಾಗುತ್ತೆ ಎಂದು ವರದಿಗಾರ್ತಿಗೆ ಪೆಕರನಂತೆ ಪ್ರಶ್ನಿಸಿದವನು ನಾನಲ್ಲ ಎಂದು ಸಚಿವ ಈಶ್ವರಪ್ಪ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ. 

ಉಪ ಮುಖ್ಯಮಂತ್ರಿ ಹುದ್ದೆ ಯಾರಿಗೆ ಇಷ್ಟವಿಲ್ಲ? ವಯಸ್ಸಿಗೆ ಬಂದವರಿಗೆಲ್ಲರಿಗೂ ನಟಿ ಐಶ್ವರ್ಯ ರೈ ಬೇಕೆಂದು ಬಯಸುತ್ತಾರೆ. ಇರುವುದು ಒಬ್ಬಳೇ ಐಶ್ವರ್ಯ ರೈ ತಾನೇ? ಎಂದು ಡಿಸಿಎಂ ಹುದ್ದೆಯ ಬಗ್ಗೆ ಕೀಳು ಅಭಿರುಚಿ ಮಾತನಾಡಿದವನು ನಾನಲ್ಲ ಎಂದರು ಎಂದು ಹೇಳಿದ್ದ ಈಶ್ವರಪ್ಪ ಹೇಳಿಕೆಗೆ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನ್ನ ಕ್ಷೇತ್ರದಲ್ಲಿ 55 ರಿಂದ 60 ಸಾವಿರ ಮುಸ್ಲಿಂರ ವೋಟ್ ಗಳಿವೆ. ಇದೂವರೆಗೂ ಒಬ್ಬ ಮುಸ್ಲಿಂ ಸಮುದಾಯದ ಒಬ್ಬರಿಗೂ ನಮಸ್ಕಾರ ಹೊಡೆದು ವೋಟ್ ಕೇಳಿಲ್ಲ. ಆದರೂ 47ಸಾವಿರ ಮತಗಳ ಅಂತರದಿಂದ ಗೆದ್ದಿದ್ದೇನೆ.ಕುಂದಗೋಳ ವಿಧಾನಸಭೆ ಉಪಚುನಾವಣೆ ಪ್ರಚಾರದ ಸಂದರ್ಭದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ,ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವಾಗಿತ್ತು, ಈ ಬಗ್ಗೆ ಸಿದ್ದರಾಮಯ್ಯ ನಾನು ಏನು ಮಾಡಬೇಕು ಎಂದಿದ್ದರು. ಒಂದು ವೇಳೆ ಸಿದ್ದರಾಮಯ್ಯ ಅವರ ಮೊಮ್ಮಗಳ ಮೇಲೆ ಅತ್ಯಾಚಾರ ನಡೆದರೆ ಏನು ಮಾಡುತ್ತಾರೆ ಎಂಬ ಕೀಳು ಮಟ್ಟದ ಹೇಳಿಕೆ ನೀಡಿದವನು ನಾನಲ್ಲ ಎಂದು ತಿಳಿಸಿದ್ದಾರೆ.ಎಂತೆಂತಹ ಅದ್ಭುತವಾದ ಅಣಿಮುತ್ತುಗಳನ್ನು ಉದುರಿಸಿದ ತಮ್ಮಿಂದ ಯುಗಪುರುಷ ಎಂಬ ಸರ್ಟಿಫಿಕೇಟ್ ಪಡೆಯುವ "ಮೂರ್ಖ ಪುರುಷ" ನಾನಲ್ಲ ದಿಢೀರ್ ನಿದ್ದೆಯಿಂದ ಎದ್ದಂತೆ ಹಳೆಯ ಹೇಳಿಕೆಗೆ ಟ್ವೀಟ್ ಮಾಡುವವನು ನಾನಲ್ಲ. ಎಂದು ಟ್ವೀಟ್ ಮಾಡಿ ಸಚಿವ ಈಶ್ವರಪ್ಪ ಅವರಿಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.ಜೆಡಿಎಸ್​ ಶಾಸಕರು ಸದ್ಯದಲ್ಲೇ ಬಿಜೆಪಿಗೆ ಬರಲಿದ್ದಾರೆ. ಅವರ ಪಕ್ಷ ಜೀವಂತವಾಗಿದೆ ಎಂದು ತೋರಿಸಿಕೊಳ್ಳಲು ವಿಡಿಯೋ ರಿಲೀಸ್ ಮಾಡಿದ್ದಾರೆ. ವಿನಾಕಾರಣ ಬಿಜೆಪಿ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ. ಗೂಂಡಾಗಳು ಮಂಗಳೂರಿನಲ್ಲಿ ಸಂಚು ನಡೆಸಿ ಗಲಭೆ ನಡೆಸಿದರು ಎಂಬುದನ್ನು ಎಲ್ಲ ಮಾಧ್ಯಮಗಳು ವರದಿ ಮಾಡಿವೆ. ಟಿವಿಗಳಲ್ಲಿ, ಪತ್ರಿಕೆಗಳಲ್ಲಿ ಬಂದಿದ್ದನ್ನು ಕುಮಾರಸ್ವಾಮಿ ನಂಬುತ್ತಾರೋ ಇಲ್ಲವೋ ಗೊತ್ತಿಲ್ಲ

ಇದನ್ನೂ ಓದಿ :  ಸಿಎಎಗೆ ವಿರಾಮ ನೀಡಿ, ಬದುಕು ಕಳೆದುಕೊಂಡಿರುವ ಸಂತ್ರಸ್ತರ ಕಡೆ ಗಮನಕೊಡಿ; ಸಿದ್ದರಾಮಯ್ಯ

ಅಧಿಕಾರ ಕಳೆದುಕೊಂಡಿರುವ ಎಚ್​.ಡಿ. ಕುಮಾರಸ್ವಾಮಿ ತಾನಿನ್ನೂ ಬದುಕಿದ್ದೇನೆ ಎಂದು ಜಗತ್ತಿಗೆ ತೋರಿಸಿಕೊಳ್ಳಲು ಈ ವಿಡಿಯೋ ರಿಲೀಸ್ ಮಾಡಿದ್ದಾರೆ. ಕುಮಾರಸ್ವಾಮಿ ಇನ್ನು ಎಂದೂ ಸಿಎಂ ಆಗುವುದಿಲ್ಲ. ಎಷ್ಟೇ ವಿಡಿಯೋ ಮಾಡಿದರೂ, ಇನ್ನು 10 ಜನ್ಮ ಕಳೆದರೂ ಅವರು ಸಿಎಂ ಆಗುವುದಿಲ್ಲ ಎಂದು  ಇತ್ತೀಚೆಗೆ  ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಲೇವಡಿ ಮಾಡಿದ್ದಾರೆ.

 
First published: