HOME » NEWS » State » MINISTER KS ESHWARAPPA HITS OUT AT FORMER CM SIDDARAMAIAH AND HD KUMARASWAMY AT MYSORE LG

ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಸಿಎಂ ಆಗುವ ಹಗಲುಗನಸು ಕಾಣುತ್ತಿದ್ದಾರೆ; ಕೆ.ಎಸ್.ಈಶ್ವರಪ್ಪ ಲೇವಡಿ

 ಮುಖ್ಯಮಂತ್ರಿ ಬದಲಾವಣೆ ಅಂತ ಸುಮ್ಮನೆ ಮಾತನಾಡ್ತಾರೆ. ಇದು ಕೇವಲ ಸೃಷ್ಟಿ ಮಾಡಿರುವುದು ಅಷ್ಟೆ. ಕೇಂದ್ರ ನಾಯಕರು, ಶಾಸಕರು ಯಾರೂ ಹೇಳಿಲ್ಲ‌. ಇದನ್ನ ಹೇಳುತ್ತಿರುವುದು ಸಿದ್ದರಾಮಯ್ಯನವರು ಒಬ್ಬರೇ. ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ನಂತರ ಅವರಿಗೆ ಸಿಎಂ ಸ್ಥಾನದ ಮೇಲೆ ಕಣ್ಣು‌ ಇದೆ. ಹಾಗಾಗಿ ಸ್ಥಾನ ಕಳೆದುಕೊಳ್ಳುತ್ತಾರೆ ಅಂತ ಹೇಳಿ ಅಭ್ಯಾಸ ಆಗಿದೆ.

news18-kannada
Updated:January 11, 2021, 9:43 AM IST
ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಸಿಎಂ ಆಗುವ ಹಗಲುಗನಸು ಕಾಣುತ್ತಿದ್ದಾರೆ; ಕೆ.ಎಸ್.ಈಶ್ವರಪ್ಪ ಲೇವಡಿ
ಸಚಿವ ಕೆ.ಎಸ್‌. ಈಶ್ವರಪ್ಪ.
  • Share this:
ಮೈಸೂರು(ಜ.11): ಕೆಲವರು ಸಿಎಂ ಆಗುತ್ತೇನೆ ಎಂದು ಹಗಲುಗನಸು ಕಾಣುತ್ತಿರುತ್ತಾರೆ. ಅದೇ ರೀತಿ ಕುಮಾರಸ್ವಾಮಿ ಮತ್ತು  ಸಿದ್ದರಾಮಯ್ಯ ಹಗಲುಗನಸು ಕಾಣುತ್ತಿದ್ದಾರೆ‌. ಸಿದ್ದರಾಮಯ್ಯ ಅವರೆ ನಾನು ಮುಖ್ಯಮಂತ್ರಿ ಆಗ್ತಿನಿ ಅಂತಿದ್ದಾರೆ. ಅವರ ಪಕ್ಷದವರು ಯಾರಾದರು ಹೇಳಿದ್ದಾರಾ? ಕುಮಾರಸ್ವಾಮಿ ಅವರು ಕೂಡ ಅದೇ ರೀತಿ ಮಾತನಾಡುತ್ತಿದ್ದಾರೆ. ಇವರಿಬ್ಬರದು ಹಗಲು ಕನಸು. ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ. ಜೆ.ಡಿ.ಎಸ್ ಅಧಿಕಾರಕ್ಕೆ ಬರುವುದಿಲ್ಲ‌ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರಯ, 2023 ಕ್ಕೆ ಕುಮಾರಸ್ವಾಮಿ ಮತ್ತೆ ಸಿಎಂ ಆಗುತ್ತೇನೆ ಎಂದು ಹೇಳಿರುವ ವಿಚಾರಕ್ಕೆ ವ್ಯಂಗ್ಯ ಮಾಡಿದರು. ಇದೇ ವೇಳೆ ಸಿಎಂ ಸ್ಥಾನ ಬದಲಾವಣೆ ಆಗುವುದಿಲ್ಲ ಎಂದು ಸಹ ಹೇಳಿದರು. ಮುಖ್ಯಮಂತ್ರಿ ಬದಲಾವಣೆ ಅಂತ ಸುಮ್ಮನೆ ಮಾತನಾಡ್ತಾರೆ. ಇದು ಕೇವಲ ಸೃಷ್ಟಿ ಮಾಡಿರುವುದು ಅಷ್ಟೆ. ಕೇಂದ್ರ ನಾಯಕರು, ಶಾಸಕರು ಯಾರೂ ಹೇಳಿಲ್ಲ‌. ಇದನ್ನ ಹೇಳುತ್ತಿರುವುದು ಸಿದ್ದರಾಮಯ್ಯನವರು ಒಬ್ಬರೇ. ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ನಂತರ ಅವರಿಗೆ ಸಿಎಂ ಸ್ಥಾನದ ಮೇಲೆ ಕಣ್ಣು‌ ಇದೆ. ಹಾಗಾಗಿ ಸ್ಥಾನ ಕಳೆದುಕೊಳ್ಳುತ್ತಾರೆ ಅಂತ ಹೇಳಿ ಅಭ್ಯಾಸ ಆಗಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ‌. ಹತ್ತತ್ತು ಬಾರಿ ಹೇಳಿದರೆ ಜನ ನಂಬುತ್ತಾರೆ ಅಂತ ಸಿದ್ದರಾಮಯ್ಯ ಹೇಳ್ತಿದ್ದಾರೆ. ಆದರೆ ಇದು ಸುಳ್ಳು, ಕೇವಲ ಮಾಧ್ಯಮಗಳಲ್ಲಿ ಮಾತ್ರ ಬರುತ್ತಿರುವ ಸುದ್ದಿ ಅಷ್ಟೆ ಎಂದು ಸಚಿವ ಈಶ್ವರಪ್ಪ ಅಭಿಪ್ರಾಯಪಟ್ಟರು.

ಅಜಾನುಬಾಹು ದೇಹವಿದ್ದರೂ ಮರಿಯಾನೆಗೂ ಅಂಜುವ ರಾಮ; ದುಬಾರೆಯಲ್ಲಿ ಕುರುಡು ಆನೆಯ ಪರದಾಟ

ಗೆದ್ದವರು ಸ್ವಾಭಾವಿಕವಾಗಿ ಮಂತ್ರಿ ಆಗಬೇಕು ಅಂತ ಅಪೇಕ್ಷೆ ಪಡುತ್ತಾರೆ. ಮಂತ್ರಿಯಾಗಬೇಕು ಎಂದು ಅಪೇಕ್ಷೆ ಪಡುವುದರಲ್ಲಿ ತಪ್ಪಿಲ್ಲ. ಮಂತ್ರಿಯಾದವರಿಗೆ ಆಗದವರು ಸಹಕಾರ ಕೊಡುತ್ತಾರೆ. ಜನರು ಬಿಜೆಪಿ ಆಡಳಿತ ಮಾಡಲಿ ಅಂದರು. ಆದರೆ ಅಷ್ಟು ಸ್ಥಾನ ಸಿಗಲಿಲ್ಲ. ಮುಖ್ಯಮಂತ್ರಿಗಳು ಭರವಸೆ ಕೊಟ್ಟಿರುವಂತೆ ಬೇರೆ ಪಕ್ಷದಿಂದ ಬಂದ ಎಲ್ಲರಿಗೂ ಸಚಿವ ಸ್ಥಾನ ಕೊಡಬೇಕಿದೆ. ಅದರಂತೆ ಅವರಿಗೆ ಕೊಟ್ಟು ಉಳಿದಿರುವುದರಲ್ಲಿ ನೀಡಲಾಗುತ್ತದೆ ಎಂದು ಹೇಳಿದರು.

ಯಡಿಯೂರಪ್ಪನವರ ಸಂಪುಟದಲ್ಲಿ ಮಂತ್ರಿಯಾಗಲ್ಲ ಅಂತ ಯತ್ನಾಳ್ ಹೇಳಿದ್ದಾರೆ. ಸಿಎಂ ನನ್ನನ್ನ ಮಂತ್ರಿ ಮಾಡುವುದಿಲ್ಲ ಅಂತ ಹೇಳಿದ್ದಾರೆ. ಅವರನ್ನ ಮಂತ್ರಿ ಮಾಡುವುದು ಬಿಡುವುದು ಮುಖ್ಯಮಂತ್ರಿಗಳಿಗೆ ಬಿಟ್ಟಿದ್ದು. ಒಂದು ವೇಳೆ ಕೇಂದ್ರ ನಾಯಕರು ಹಾಗೂ ಮುಖ್ಯಮಂತ್ರಿ ಮಂತ್ರಿ ಮಾಡುತ್ತೇವೆ ಅಂದ್ರೆ ,ಅದನ್ನ ಅವರು ಒಪ್ಪಿಕೊಳ್ಳಬೇಕು. ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಕೆಲವು ಬಾರಿ ಅವರು ಬಹಿರಂಗವಾಗಿ ಏನೇನೋ ಟೀಕೆ ಮಾಡಿ ಬಿಡುತ್ತಾರೆ. ಅದು ತಪ್ಪು, ಅದರ ಬಗ್ಗೆ ನಾವು ಹೇಳಿದ್ದೇವೆ. ಆದರೆ ಮಂತ್ರಿ ಮಾಡಬೇಕು ಅಂತ ನಿರ್ಧಾರ ಕೈಗೊಂಡರೆ ಅವರು ಒಪ್ಪಿಕೊಳ್ಳಬೇಕು. ಅವರನ್ನ ಮಂತ್ರಿ ಮಾಡ್ತಾರಾ, ಇಲ್ಲವಾ ಎಂಬುದು ನನಗೆ ಗೊತ್ತಿಲ್ಲ ಎಂದರು.

ಇನ್ನು, ವಂಚಕ ಯುವರಾಜ್ ಕುರಿತಾಗಿ ಪ್ರತಿಕ್ರಿಯೆ ನೀಡಿದ ಸಚಿವ ಈಶ್ವರಪ್ಪ, ಯುವರಾಜ್ ಎಂಬಾತನ ಮುಖವನ್ನು ನಾನು ಟಿವಿಯಲ್ಲೇ ನೋಡಿದ್ದು.  ಜೀವಂತವಾಗಿ ನಾನು ಆತನ ಮುಖ ನೋಡಿಲ್ಲ. ಬಹಳ ಬುದ್ದಿವಂತಿಕೆಯಿಂದ ಅನೇಕರಿಗೆ ಮೋಸ ಮಾಡಿದ್ದಾನೆ. ಈ ರೀತಿ ಒಬ್ಬೊಬ್ಬರು ಇರುತ್ತಾರೆ. ವೇಣುಗೋಪಾಲ್ ಹಾದಿಯಾಗಿ ಎಲ್ಲಾ ಪಕ್ಷದವರನ್ನು ಈತ ಭೇಟಿ ಮಾಡಿದ್ದಾನೆ. ಆದರೆ ದಿನೇಶ್ ಗುಂಡೂರಾವ್ ಅವರು  ಯುವರಾಜ್​ ಬಿಜೆಪಿಯವರನ್ನು ಭೇಟಿಯಾಗಿದ್ದಾನೆ, ಈ ಬಗ್ಗೆ ತನಿಖೆಯಾಗಬೇಕು ಅಂತ ಹೇಳುತ್ತಾರೆ. ಹಾಗಾದ್ರೆ ವೇಣುಗೋಪಾಲ್ ಭೇಟಿ ಬಗ್ಗೆ ತನಿಖೆಯಾಗೋದು ಬೇಡವೇ? ಎಲ್ಲವನ್ನು ರಾಜಕೀಯವಾಗಿಯೇ ನೋಡಬಾರದು. ಪಕ್ಷಾತೀತಿವಾಗಿ ಇದನ್ನ ನೋಡಬೇಕು. ಯುವರಾಜ್ ನಂತವರು ಹಲಾಲ್ ಟೋಪಿಗಳು, 420 ಗಳು. ಇಲ್ಲಿ ರಾಜಕೀಯವನ್ನ ಹುಡುಕಬಾರದು ಎಂದು ಕಿಡಿಕಾರಿದರು.
Published by: Latha CG
First published: January 11, 2021, 9:42 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories