ನಿರಂತರ ಜ್ಯೋತಿ ಯೋಜನೆ ಕಾಮಗಾರಿ; ಮೆಸ್ಕಾಂ ಅಧಿಕಾರಿಗಳ ಚಳಿ ಬಿಡಿಸಿದ ಸಚಿವ ಈಶ್ವರಪ್ಪ

ನಿರಂತರ ಜ್ಯೋತಿ ವಿದ್ಯುತ್ ಯೋಜನೆಯಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂದು ಸಾಕ್ಷಿ ಸಮೇತ ಆರೋಪಿಸಿದರು. ಮೆಸ್ಕಾಂ ಕೆಲಸಗಳ ಪರಿವೀಕ್ಷಣೆ ಮಾಡಬೇಕಾದ ಅಧಿಕಾರಿಗಳು ಏನ್ ಮಾಡ್ತಾ ಇದ್ದಿರಾ? ಇಂತಹ ಕಳಪೆ ವಸ್ತುಗಳನ್ನು ಬಳಸುವಾಗ ನೀವೆಲ್ಲಾ ಏನ್ ಮಾಡ್ತಾ ಇದ್ರಿ? ಇದನ್ನೆಲ್ಲಾ ನೋಡಬೇಕಾದವರು ನೀವೆ ತಾನೆ? ಎಂದು ಪ್ರಶ್ನೆ ಮಾಡಿದರು.

ಅಧಿಕಾರಿಗಳ ಜೊತೆ ಸಚಿವ ಈಶ್ವರಪ್ಪ ಸಭೆ ನಡೆಸುತ್ತಿರುವ ದೃಶ್ಯ

ಅಧಿಕಾರಿಗಳ ಜೊತೆ ಸಚಿವ ಈಶ್ವರಪ್ಪ ಸಭೆ ನಡೆಸುತ್ತಿರುವ ದೃಶ್ಯ

  • Share this:
ಶಿವಮೊಗ್ಗ(ಫೆ.10): ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿರುವ ನಿರಂತರ ಜ್ಯೋತಿ ಕಾಮಗಾರಿಯನ್ನು ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಸಮಿತಿ ರಚನೆಗೆ ಸಚಿವ ಕೆ.ಎಸ್.ಈಶ್ವರಪ್ಪ ಸೂಚನೆ ನೀಡಿದ್ದಾರೆ. ನಿರಂತರ ಜ್ಯೋತಿ ಕಾಮಗಾರಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ಕೊಡಲಾಗಿದೆ. ನಿರಂತರ ಜ್ಯೋತಿ ಕಾಮಗಾರಿ ಅನುಷ್ಟಾನದಲ್ಲಿ ಲೋಪ ದೋಷಗಳು ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಈ ಕುರಿತು ತನಿಖೆ ನಡೆಸಿ 15 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಿರಂತರ ಜ್ಯೋತಿ ಯೋಜನೆ ಅನುಷ್ಟಾನದಲ್ಲಿನ ಲೋಪದೋಷಗಳ ಬಗ್ಗೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.
ಅಧಿಕಾರಿಗಳಿಂದ ಕಾಮಗಾರಿ ಕುರಿತು ಮಾಹಿತಿ ಕಲೆ ಹಾಕಿದರು. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳು, ವಿಷಯ ತಜ್ಞರು ಹಾಗೂ ಜನಪ್ರತಿನಿಧಿಗಳನ್ನು ಒಳಗೊಂಡ ಸಮಿತಿಯನ್ನು ಸ್ಥಳೀಯವಾಗಿ ರಚಿಸಲಾಗುವುದು. ಈ ಸಮಿತಿಗೆ ಎಲ್ಲಾ ಮಾಹಿತಿಯನ್ನು ತಕ್ಷಣ ಒದಗಿಸಬೇಕು. ಸಮಿತಿ ಪರಿಶೀಲನೆ ನಡೆಸಿ 15 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸಬೇಕು. ಅಗತ್ಯ ಬಿದ್ದರೆ ಹೆಚ್ಚಿನ ತನಿಖೆ ಕೈಗೊಳ್ಳುವ ಕುರಿತು ನಿರ್ಧಾರಿಸಲಾಗುವುದು ಎಂದು ಹೇಳಿದರು.

ರೋಗನಿರೋಧಕ ಮೆಣಸಿನಕಾಯಿ ಪ್ರಭೇದ ಅಭಿವೃದ್ಧಿಪಡಿಸಿದ ಬೆಂಗಳೂರು ಮೂಲದ IIHR

ಯೋಜನೆ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಕಾಮಗಾರಿಯನ್ನು ಕೈಗೊಳ್ಳಲಾಗಿದ್ದು, ಗುತ್ತಿಗೆದಾರನಿಗೆ ಸಂಪೂರ್ಣ ಹಣವನ್ನು ಪಾವತಿಸಲಾಗಿದೆ. ಫೀಡರ್‍ಗಳಲ್ಲಿ ಅಳವಡಿಸಿರುವ ಕಂಬಗಳ ಬಗ್ಗೆಯೂ ಸರಿಯಾಗಿ ಲೆಕ್ಕ ಇರುವುದಿಲ್ಲ. ಪ್ರತಿ ಕಂಬಗಳಿಗೆ ಸಂಖ್ಯೆಯನ್ನೂ ನಮೂದಿಸಿರುವುದಿಲ್ಲ ಎಂದರಯ.  ಕಾಮಗಾರಿ ಆರಂಭಕ್ಕಿಂತ ಮೊಲು ಗುತ್ತಿಗೆದಾರನೊಂದಿಗೆ ಬಾಂಡ್ ಬರೆಯಿಸಿರುವುದಿಲ್ಲ. 2019 ರಿಂದ ಜಿಲ್ಲೆಯಲ್ಲಿ ಈ ಯೋಜನೆ ಅನುಷ್ಟಾನ ಆರಂಭಿಸಲಾಗಿದ್ದು, ಮೂಲ ಕ್ರಿಯಾ ಯೋಜನೆಯನ್ನು ಉಲ್ಲಂಘಿಸಿ ಕಾಮಗಾರಿ ಅನುಷ್ಟಾನಗೊಳಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಅವರು ಹೇಳಿದರು.

ಯೋಜನೆ ಅನುಷ್ಟಾನದಲ್ಲಿನ ಲೋಪ ದೋಷಗಳನ್ನು ಗುತ್ತಿಗೆದಾರನಿಂದ ಸರಿ ಪಡಿಸಿಕೊಳ್ಳಬೇಕು. ಗುತ್ತಿಗೆದಾರನಿಗೆ ಪಾವತಿಯಾಗಿರುವ ಹಣವನ್ನು ವಸೂಲು ಮಾಡಿ, ಲೋಪದೋಷಗಳನ್ನು ಕಾನೂನು ಪ್ರಕಾರ ಸರಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಮೆಸ್ಕಾಂ ವ್ಯಾಪ್ತಿಯ ಇತರ ಜಿಲ್ಲೆಗಳಲ್ಲಿ ನಡೆದಿರುವ ಯೋಜನೆ ಅನುಷ್ಟಾನದ ಬಗ್ಗೆ ಪರಿಶೀಲನೆ ನಡೆಸುವ ಅಗತ್ಯವಿದೆ ಎಂದು ಅವರು ಹೇಳಿದರು.
ಸಭೆಯಲ್ಲಿ  ಕಳಪೆ ವಸ್ತುಗಳನ್ನು ತೋರಿಸಿ ಮೆಸ್ಕಾಂ ಅಧಿಕಾರಿಗಳಿಗೆ   ಸಚಿವ ಈಶ್ವರಪ್ಪ‌ ಚಳಿ ಬಿಡಿಸಿದರು.

ನಿರಂತರ ಜ್ಯೋತಿ ವಿದ್ಯುತ್ ಯೋಜನೆಯಲ್ಲಿ ಕಳಪೆ ಕಾಮಗಾರಿ ನಡೆದಿದೆ ಎಂದು ಸಾಕ್ಷಿ ಸಮೇತ ಆರೋಪಿಸಿದರು. ಮೆಸ್ಕಾಂ ಕೆಲಸಗಳ ಪರಿವೀಕ್ಷಣೆ ಮಾಡಬೇಕಾದ ಅಧಿಕಾರಿಗಳು ಏನ್ ಮಾಡ್ತಾ ಇದ್ದಿರಾ? ಇಂತಹ ಕಳಪೆ ವಸ್ತುಗಳನ್ನು ಬಳಸುವಾಗ ನೀವೆಲ್ಲಾ ಏನ್ ಮಾಡ್ತಾ ಇದ್ರಿ? ಇದನ್ನೆಲ್ಲಾ ನೋಡಬೇಕಾದವರು ನೀವೆ ತಾನೆ? ಎಂದು ಪ್ರಶ್ನೆ ಮಾಡಿದರು.

ನಿರಂತರ ಜ್ಯೊತಿ ವಿದ್ಯುತ್ ಯೋಜನೆಯಲ್ಲಿ ಬಹಳಷ್ಟು ಭ್ರಷ್ಟಾಚಾರ ನಡೆದಿದೆ. ಈ ಕುರಿತಂತೆ, ಕೂಡಲೇ ಪರಿಶೀಲನೆ ನಡೆಸಿ, ಸಮಗ್ರ ವರದಿ ನೀಡಬೇಕು ಎಂದು ಡಿಸಿ ಎದುರೇ ಅಧಿಕಾರಿಗಳಿಗೆ ತಾಕೀತು ಮಾಡಿದರು. ಕಳಪೆ ಸಾಮಾಗ್ರಿಗಳನ್ನು ಅಳವಡಿಸಿರುವ ಕಂಟ್ರಾಕ್ಟರ್ ಮತ್ಯಾವ ಜಿಲ್ಲೆಯಲ್ಲಿ ಈ ಕೆಲಸ ಮಾಡಿದ್ದಾನೆ ನೋಡಿ. ಈ ಕುರಿತಂತೆ ನನಗೆ ಸಮಗ್ರ ವರದಿ ನಿಮ್ಮ ಹಸ್ತಾಕ್ಷರ ಸಮೇತ ನೀಡಬೇಕು ಎಂದು ಅಧಿಕಾರಿಗಳ ವಿರುದ್ಧ ಫುಲ್ ಗರಂ ಆದರು. ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಮೆಸ್ಕಾಂ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
Published by:Latha CG
First published: