ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಸಿದ್ದರಾಮಯ್ಯ ಮಾತನಾಡುವುದು ದುರ್ದೈವ ; ಸಚಿವ ಈಶ್ವರಪ್ಪ

ಯಾವುದೇ ಹೇಳಿಕಗಳನ್ನು ಕೊಡುವ ಮೊದಲು ವೈಯಕ್ತಿಕವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ತಮಗೆ ತಾವೇ ಪ್ರಶ್ನೆಗಳನ್ನು ಹಾಕಿಕೊಳ್ಳಲಿ. ಅವರೇ ಒಬ್ಬರು ಪಕ್ಷಾಂತರಿಯಾಗಿದ್ದುಕೊಂಡು ‌ಪಕ್ಷಾಂತರ ಶಾಸಕರ ಬಗ್ಗೆ ಮಾತನಾಡುತ್ತಾರೆ.

G Hareeshkumar | news18-kannada
Updated:October 25, 2019, 4:03 PM IST
ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಸಿದ್ದರಾಮಯ್ಯ ಮಾತನಾಡುವುದು ದುರ್ದೈವ ; ಸಚಿವ ಈಶ್ವರಪ್ಪ
ಸಚಿವ ಈಶ್ವರಪ್ಪ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ
  • Share this:
ಕೊಡಗು(ಅ. 25): ತಮ್ಮ ಪಕ್ಷದವರನ್ನೇ ಸೋಲಿಸುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನವರು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಮಾತನಾಡುತ್ತಿರುವುದು ನಿಜಕ್ಕೂ ದುರ್ದೈವ ಎಂದು ಸಿದ್ದರಾಮಯ್ಯ ನವರಿಗೆ ಸಚಿವ ಈಶ್ವರಪ್ಪ ತಿರುಗೇಟು ನೀಡಿದರು. 

ಕೋಲಾರದಲ್ಲಿ ಕಳೆದ  ಲೋಕಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಶಾಸಕ ರಮೇಶ್ ಕುಮಾರ್ ಕಾರಣವೆಂದು ಪರಾಭವಗೊಂಡ ಸ್ವಪಕ್ಷದ ಕೆ.ಎಚ್.ಮುನಿಯಪ್ಪ ಅವರೇ ಹೇಳುತ್ತಾರೆ. ರಮೇಶ್ ಕುಮಾರ್ ಅವರನ್ನು ಸಿದ್ದರಾಮಯ್ಯ ಹೊಗಳುತ್ತಾ, ಸಿದ್ದರಾಮಯ್ಯನವರನ್ನು ರಮೇಶ್ ಕುಮಾರ್ ಹೊಗಳುತ್ತಾ ಕಾಂಗ್ರೆಸ್ ಅನ್ನು ಮುಳುಗಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಯಾವುದೇ ಹೇಳಿಕಗಳನ್ನು ಕೊಡುವ ಮೊದಲು ವೈಯಕ್ತಿಕವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ತಮಗೆ ತಾವೇ ಪ್ರಶ್ನೆಗಳನ್ನು ಹಾಕಿಕೊಳ್ಳಲಿ. ಅವರೇ ಒಬ್ಬರು ಪಕ್ಷಾಂತರಿಯಾಗಿದ್ದುಕೊಂಡು ‌ಪಕ್ಷಾಂತರ ಶಾಸಕರ ಬಗ್ಗೆ ಮಾತನಾಡುತ್ತಾರೆ. ಮೈತ್ರಿ ಸರ್ಕಾರದ ಪತನಕ್ಕೆ ಕಾರಣವೇ ಸಿದ್ದರಾಮಯ್ಯ ಅಂತಾ ಕುಮಾರಸ್ವಾಮಿ ಅವರೇ ಹೇಳಿದ್ದಾರೆ ಎಂದು ತಿರುಗೇಟು ನೀಡಿದರು.

ಸಿದ್ದರಾಮಯ್ಯ ಸಿಎಂ ಆಗುವ ಕನಸು ಕಾಣತ್ತಿದ್ದಾರೆ 

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದ ಅವಧಿಯಲ್ಲಿ 5 ವರ್ಷಗಳು ಸಿಎಂ ಆಗಿದ್ದ ಸಿದ್ದರಾಮಯ್ಯ ನಾವು ಹಿಂದುಳಿದವವರು ಹಾಗೂ ದಲಿತರ ಪರ ಇದ್ದೇವೆ ಎಂದು ಬರೀ ಭಾಷಣವನ್ನಷ್ಟೆ ಮಾಡಿದ್ದು ಬಿಟ್ಟರೆ ಬೇರೇನು ಮಾಡಲಿಲ್ಲ ಎಂದು ಕುಟುಕಿದರು‌. ಇದೀಗ ಹಿಂದುಳಿದವರ ಬಗ್ಗೆ ಜೋರಾಗಿ ಮಾತನಾಡುತ್ತಿದ್ದರು, ಹಿಂದುಳಿದವರ ಪರವಾಗಿ  ಬಿಜೆಪಿ ಸರ್ಕಾರದ ಇಲ್ಲವೆಂದು ಆರೋಪಿಸುತ್ತಾ ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಸಚಿವರು ಕಿಡಿಕಾರಿದರು.

ಮಹಾರಾಷ್ಟ್ರ ಹಾಗೂ ಹರಿಯಾಣ ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ ವರ್ಚಸ್ ಕಡಿಮೆಯಾಗುತ್ತಿದ್ದೆ ಎನ್ನುವ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಅವರು, ಕಾಂಗ್ರೆಸ್‌ನಲ್ಲಿ  ರಾಹುಲ್ ಗಾಂಧಿ ಅವರನ್ನು ಬಿಟ್ಟರೆ ಸಿದ್ದರಾಮಯ್ಯ ಅವರೇ ರಾಷ್ತ್ರೀಯ ಅಧ್ಯಕ್ಷರಾ?. ಹಾಗಿದ್ದರೆ ಅವರೇ ಚುನಾವಣೆ ಸಂದರ್ಭದಲ್ಲಿ ಎಲ್ಲಾ ಕ್ಷೇತ್ರಗಳಿಗೂ ಪ್ರಚಾರಕ್ಕೆ ಹೋಗಬೇಕಿತ್ತು. ಕಾಂಗ್ರೆಸ್‌ಗೆ ಒಂದು ಸಮರ್ಥ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಿಕೊಳ್ಳಲು ಆಗದ ಇವರಿಗೆಲ್ಲ ಬಿಜೆಪಿ ಹಾಗೂ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡಲು ಯಾವ ಯೋಗ್ಯತೆ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ :  ಯಾವಾಗಲೂ ಯಡಿಯೂರಪ್ಪ ಜೈಲಿಗೆ ಬಂದೋರು ಅಂತೀಯಾ; ನೀನೂ ಜೈಲಿಗೆ ಹೋಗುವೆ ಇರಪ್ಪಾ: ಸಿದ್ದರಾಮಯ್ಯಗೆ ಸೊಗಡು ಶಿವಣ್ಣ ಎಚ್ಚರಿಕೆಸಭಾಧ್ಯಕ್ಷರಿಗೇ ಏಕ ವಚನದಲ್ಲಿ ಮಾತನಾಡುತ್ತಾರೆ. ಆ ಪೀಠದ ಬಗ್ಗೆ ಅಗೌರವ ತೋರಿಸಿದ್ದಾರೆ. ವಿರೋಧ ಪಕ್ಷದ ನಾಯಕರಾಗಿ ಅವರು ಹೇಗೆಲ್ಲಾ ಮಾತನಾಡುತ್ತಾರೆ. ನಿಜವಾಗಲೂ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾ.?. ಇವರಿಗೆ ದೇಶದ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದೆಯಾ ಎನ್ನುವ ಪ್ರಶ್ನೆಗಳು ಎಲ್ಲರಿಗೂ ಮೂಡುತ್ತವೆ ಎಂದರು.

ಅನರ್ಹ ಶಾಸಕರು ಮೈತ್ರಿ ಸರ್ಕಾರ ಅಭಿವೃದ್ಧಿ ಕಾರ್ಯಗಳಿಗೆ ಸ್ಪಂದಿಸಲಿಲ್ಲ ಎಂದು ಅಲ್ಲಿಂದ ಹೊರ ಬಂದರು.‌ ಅವರು ಹೊರಗೆ ಬರದಿದ್ದರೆ ಇಂದು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವದಲ್ಲಿ ಇರುತ್ತಿರಲಿಲ್ಲ. ಹೀಗಾಗಿ ಆ ಶಾಸಕರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು. ಆ ಮೂಲಕ ಅನರ್ಹ ಶಾಸಕರಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎನ್ನುವ ಸ್ವ ಪಕ್ಷದ ಡಿಸಿಎಂ ಲಕ್ಷಣ ಸವದಿ ಹೇಳಿಕೆಗೆ ಸ್ಪಷ್ಟನೆ ನೀಡಿದರು.

First published: October 25, 2019, 3:51 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading