ಬೆಂಗಳೂರು: ಐದು ವರ್ಷ ಸಿದ್ದರಾಮಯ್ಯ (CM Siddaramaiah) ಅವರೇ ಸಿಎಂ ಎಂದು ಹೇಳಿದ್ದ ಸಚಿವ ಎಂಬಿ ಪಾಟೀಲ್ (Minister MB Patil) ಇಂದು ಯು ಟರ್ನ್ ತೆಗೆದುಕೊಂಡಿದ್ದಾರೆ. ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ ಎಂದು ಹೇಳಿದರು. ನಾನು ಪದೇ ಪದೇ ಮಾತನಾಡಲ್ಲ. ನಿನ್ನೆ ಮಾಧ್ಯಮದವರು ಲೋಕಸಭಾ ಚುನಾವಣೆ (Loksabha Election) ಬಳಿಕ ಸಿದ್ದರಾಮಯ್ಯ ಬದಲಾಗ್ತಾರಾ ಅಂತ ಕೇಳಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅಂತ ನಮ್ಮ ನಾಯಕರು ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಏನು ಹೇಳಿದರೋ ಅದನ್ನೇ ನಾನು ಹೇಳಿದ್ದೇನೆ. ಪವರ್ ಸ್ಟೇರಿಂಗ್ ಶೇರಿಂಗ್ ಇಲ್ಲ. ಇದ್ರೆ ಅದು ಜನರ ಜೊತೆ ಮಾತ್ರ ಅಂತ ಹೇಳಿದರು. ನನ್ನದು ಯಾವುದೇ ಹೇಳಿಕೆ ಇಲ್ಲ. ನಾನು ವೈಯಕ್ತಿಕವಾಗಿ ಮಾತನಾಡಿಲ್ಲ ಎಂದು ತಿಳಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಹೇಳಿದ್ದನ್ನ ಅಷ್ಟೇ ನಾನು ಹೇಳಿದ್ದು . ಪವರ್ ಸ್ಟೇರಿಂಗ್ ಇದ್ರೆ ಅದು ಜನರ ಜೊತೆ ಮಾತ್ರ ಅಂತ ಹೇಳಿದ್ದಾರೆ.
ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ ಅಂತ ಹೇಳಿದ್ರು. ನಾನು ಅದನ್ನೆ ಹೇಳಿದ್ದೇನೆ ಎಂದು ಹೇಳಿದರು. ಅಧಿಕಾರ ಹಂಚಿಕೆ ಬಗ್ಗೆ ಸಂಧಾನ ಆಗಿದೆಯಾ ಎಂಬ ಪ್ರಶ್ನೆಗೆ ಮಾಹಿತಿ ಇಲ್ಲ ಎಂದು ಹೇಳಿ ಹೋದರು.
ನಿನ್ನೆ ಹೇಳಿದ್ದೇನು?
ರಾಜ್ಯದಲ್ಲಿ ಸಿದ್ದರಾಮಯ್ಯ 5 ವರ್ಷ ಪೂರ್ಣಾವಧಿ ಸಿಎಂ ಆಗಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಅಂತ ಎಂಬಿ ಪಾಟೀಲ್ ಹೇಳಿದ್ದರು.
ಇದನ್ನೂ ಓದಿ: Arun Kumar Puthila: ಕರಾವಳಿಯಲ್ಲಿ ಬಿಜೆಪಿಗೆ ಕಂಟಕವಾಗುತ್ತಾ ಪುತ್ತಿಲ ನಡೆ? RSSಗೇ ಶಾಕ್ ಕೊಟ್ಟ ಹಿಂದೂ ಮುಖಂಡ
ಲೋಕಸಭೆ ಚುನಾವಣೆ ಬಳಿಕ ರಾಜ್ಯದ ಸಿಎಂ ಸ್ಥಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ಸಿಎಂ ಬದಲಾವಣೆ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ