HOME » NEWS » State » MINISTER R ASHOK GRAMA VASTAVYA IN DODDABALLAPURA HOSAHALLI VILLAGE NKCKB

‘ಅಧಿಕಾರಿಗಳ ನಡೆ ಗ್ರಾಮಗಳ ಕಡೆ‌’ : ನಾಳೆ ದೊಡ್ಡಬಳ್ಳಾಪುರದ ಹೊಸಹಳ್ಳಿಯಲ್ಲಿ ಕಂದಾಯ ಸಚಿವರ ಗ್ರಾಮವಾಸ್ತವ್ಯ

. ಹೆಬ್ಬಾಳ ದಿಂದ ಹೊಸಹಳ್ಳಿ ವರೆಗೂ ಸುಮಾರು 50 ಕಿ.ಮೀ ಗೂ ಹೆಚ್ಚು ದೂರದ ರಸ್ತೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಸ್ವಾಗತ ಕೋರಿ ಬ್ಯಾನರ್ಸ್​ ಹಾಕಲಾಗಿದೆ

news18-kannada
Updated:February 19, 2021, 3:42 PM IST
‘ಅಧಿಕಾರಿಗಳ ನಡೆ ಗ್ರಾಮಗಳ ಕಡೆ‌’ : ನಾಳೆ ದೊಡ್ಡಬಳ್ಳಾಪುರದ ಹೊಸಹಳ್ಳಿಯಲ್ಲಿ ಕಂದಾಯ ಸಚಿವರ ಗ್ರಾಮವಾಸ್ತವ್ಯ
ಸಚಿವ ಆರ್. ಅಶೋಕ್
  • Share this:
ದೊಡ್ಡಬಳ್ಳಾಪುರ (ಫೆ. 19): ಗ್ರಾಮಗಳಲ್ಲಿನ ಸಮಸ್ಯೆ ಆಲಿಸಿ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು "ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆ" ಎಂಬ ವಿನೂತನ ಕಾರ್ಯಕ್ರಮವನ್ನು ಆರಂಭಿಸಿದೆ. ಪ್ರತಿ ತಿಂಗಳ ಮೂರನೇ ಶನಿವಾರದಂದು ತಾಲ್ಲೂಕಿನ ಒಂದು ಗ್ರಾಮದಲ್ಲಿ  ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಲಿದ್ದು, ಜನರ ಸಮಸ್ಯೆ ಆಲಿಸಲಿದ್ದಾರೆ. ಇನ್ನು ಜಿಲ್ಲಾಧಿಕಾರಿಗಳ ವಾಸ್ತವ್ಯದ ತಾಲೂಕು ರತುಪಡಿಸಿ ಉಳಿದ ತಾಲೂಕುಗಳಲ್ಲಿ ತಹಶೀಲ್ದಾರ್ ಹಾಗೂ ಇತರೆ ಅಧಿಕಾರಿಗಳು ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ನಾಳೆ ಕಂದಾಯ ಸಚಿವ ಆರ್​ ಅಶೋಕ್​ ಚಾಲನೆ ನೀಡಲಿದ್ದಾರೆ. ಬೆಂಗಳೂರು ಗ್ರಾಮಾಂತಾರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ  ಹೊಸಹಳ್ಳಿ ಗ್ರಾಮದಲ್ಲಿ "ಜಿಲ್ಲಾಧಿಕಾರಿ ನಡೆ-ಹಳ್ಳಿ ಕಡೆಗೆ" ಕಾರ್ಯಕ್ರಮವನ್ನು ಸಚಿವ ಆರ್​ ಅಶೋಕ್​ ಉದ್ಘಾಟಿಸಲಿದ್ದು, ಅಲ್ಲಿಯೇ ಗ್ರಾಮವಾಸ್ತವ್ಯ ಮಾಡಲಿದ್ದಾರೆ. 

ಕಂದಾಯ ಸಚಿವರ ಆಗಮನದ ಹಿನ್ನಲೆ ಗ್ರಾಮವನ್ನು ಸಿಂಗಾರಗೊಳಿಸಲಾಗಿದ್ದು, ಕಿ.ಮೀ ಗಟ್ಟಲೆ ರಸ್ತೆಯುದ್ದಕ್ಕೂ  ಫ್ಲೆಕ್ಸ್, ಬ್ಯಾನರ್ಸ್ ರಾರಾಜಿಸುತ್ತಿವೆ. ಹೆಬ್ಬಾಳ ದಿಂದ ಹೊಸಹಳ್ಳಿ ವರೆಗೂ ಸುಮಾರು 50 ಕಿ.ಮೀ ಗೂ ಹೆಚ್ಚು ದೂರದ ರಸ್ತೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಸ್ವಾಗತ ಕೋರಿ ಬ್ಯಾನರ್ಸ್​ ಹಾಕಲಾಗಿದೆ. ಗ್ರಾಮದ ಜನರ ಸಮಸ್ಯೆ ಕೇಳಲು ಆಗಮಿಸುವ ಸಚಿವರ ಕಾರ್ಯಕ್ರಮದಲ್ಲಿ ಪ್ರಚಾರದ ಅಬ್ಬರ ಹೆಚ್ಚಾಗಿದೆ ಎಂಬುದು ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ.

ಇದನ್ನು ಓದಿ: ಬೆಳಗಾವಿ ಗಡಿ ವಿವಾದ ಬಗ್ಗೆ ಶಿವಸೇನೆ ಕಿರಿಕ್; ರಾಜ್ಯ ಲೋಕಸಭಾ ಸದಸ್ಯರ ಮೌನಕ್ಕೆ ತೀವ್ರ ವಿರೋಧ

ಕಾರ್ಯಕ್ರಮದ ಹಿನ್ನಲೆ  ಸರ್ಕಾರದ ನಿರ್ದೇಶನದಂತೆ ಈಗಾಗಲೇ ಕಂದಾಯ ಅಧಿಕಾರಿಗಳು ಹಲವು ವಿಷಯಗಳ ಫಲಾನುಭವಿಗಳನ್ನು ಗುರುತಿಸಿದ್ದಾರೆ. ಜೊತೆಗೆ ಪಹಣಿ ಕಾಲಂ 3 ಮತ್ತು 9ಕ್ಕೆ ವ್ಯತ್ಯಾಸ ಸರಿಪಡಿಸುವ ಬಗ್ಗೆ ಆದೇಶಗಳನ್ನು ಈಗಾಗಲೇ ಹೊರಡಿಸಲಾಗಿದೆ‌. ಗ್ರಾಮದಲ್ಲಿ ಪೌತಿ ಹೊಂದಿದ ಖಾತೆದಾರರನ್ನು ಗುರುತಿಸಿ, ಪೌತಿ ಖಾತೆ ಬದಲಾವಣೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಪಿಂಚಣಿಯನ್ನು ಮಂಜೂರು ಮಾಡುವುದು.ಆಶ್ರಯ ಯೋಜನೆಗೆ ಜಮೀನು ಮಂಜೂರು ಮಾಡುವುದು. ಆಧಾರ್ ಕಾರ್ಡ್‌ನ ಅನುಕೂಲತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು. ಹದ್ದುಬಸ್ತು ಪೋಡಿ ಬಗ್ಗೆ ಮಾಹಿತಿ ನೀಡುವುದು. ಸರ್ಕಾರಿ ವಸತಿ ನಿಲಯಕ್ಕೆ ಭೇಟಿ ನೀಡಿ ಸುಸ್ಥಿತಿ ಬಗ್ಗೆ ಪರಿಶೀಲಿಸಲಾಗುತ್ತಿದೆ.

ಗುಡಿಸಲು ರಹಿತ ವಾಸದ ಮನೆಗಳ ನಿರ್ಮಾಣದ ಬಗ್ಗೆ ಗ್ರಾಮ ಭೇಟಿಯ ಸಮಯದಲ್ಲಿ ಪರಿಶೀಲಿಸಲಾಗುವುದು. ಇತರೆ ಇಲಾಖೆಗಳಿಂದ ನೀಡಬಹುದಾದ ಸೌಲಭ್ಯದ ಬಗ್ಗೆ ಗ್ರಾಮದಲ್ಲಿ ಮಾಹಿತಿ ನೀಡಲು ಕ್ರಮ ಕೈಗೊಳ್ಳಲಾಗಿದೆ.   ಕಂದಾಯ ಇಲಾಖೆಯಿಂದ ನೀಡಲಾಗುವ ಸವಲತ್ತುಗಳಾದ ವಿವಿಧ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಯಡಿಯಲ್ಲಿ 150 ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಮಾಡಲಾಗುವುದು. 250 ಫಲಾನುಭವಿಗಳ ಆಧಾರ್ ನೋಂದಣಿ, 50 ಫಲಾನುಭವಿಗಳಿಗೆ ಮತದಾರರ ಗುರುತಿನ ಚೀಟಿ(EPIC), 200 ಪಹಣಿ ಕಾಲಂ 3&9ರ ತಿದ್ದುಪಡಿ, 25 ಪೌತಿ ಖಾತೆ ಸೇರಿದಂತೆ 625 ಫಲಾನುಭವಿಗಳಿಗೆ ಸವಲತ್ತುಗಳನ್ನು ನೀಡಲಿದ್ದಾರೆ.

ಅಧಿಕಾರಿಗಳ ಗ್ರಾಮವಾಸ್ತವ್ಯಕ್ಕೆ ದೇವನಹಳ್ಳಿ ತಾಲೂಕಿನ ವಿಜಯಪುರ ಹೋಬಳಿ ಕೋರಮಂಗಲ ಗ್ರಾಮ, ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಹೋಬಳಿ ತವಟಹಳ್ಳಿ ಗ್ರಾಮ ಹಾಗೂ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಹೋಬಳಿಯ ಹೊನ್ನಾರಾಯನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಲಾಗಿದೆ,  ತಹಶೀಲ್ದಾರ್, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಗ್ರಾಮದಲ್ಲಿ ಸರ್ಕಾರದ ನಿರ್ದೇಶನದಂತೆ ಗ್ರಾಮಸ್ಥರಿಗೆ ಸವಲತ್ತುಗಳನ್ನು ನೀಡಲು ಹಾಗೂ ಪಹಣಿ ಕಾಲಂ 3 ಮತ್ತು 9ರ ವ್ಯತ್ಯಾಸದ ಬಗ್ಗೆ ಹಾಗೂ ಪಿಂಚಣಿ ಆಂದೋಲನದ ಬಗ್ಗೆ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಗ್ರಾಮ ವಾಸ್ತವ್ಯಕ್ಕೆ ಸಕಲ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ
Published by: Seema R
First published: February 19, 2021, 3:42 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories