ಕುಮಾರಸ್ವಾಮಿ ಹೇಳಿಕೆಯಿಂದ ಮುಂದೊಂದು ದಿನ ಜೆಡಿಎಸ್ ಅಣಕು ಪಕ್ಷವಾಗುತ್ತೆ: ಆರ್.ಅಶೋಕ್ ಆಕ್ರೋಶ

ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ ಕುಮಾರಸ್ವಾಮಿಯವರು ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸುವಂತಹ ಹೇಳಿಕೆಗಳು ಅವರಿಗೆ ಶೋಭೆ ತರುವುದಿಲ್ಲ

G Hareeshkumar | news18-kannada
Updated:January 22, 2020, 3:06 PM IST
ಕುಮಾರಸ್ವಾಮಿ ಹೇಳಿಕೆಯಿಂದ ಮುಂದೊಂದು ದಿನ ಜೆಡಿಎಸ್ ಅಣಕು ಪಕ್ಷವಾಗುತ್ತೆ: ಆರ್.ಅಶೋಕ್ ಆಕ್ರೋಶ
ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಸಚಿವ ಆರ್​. ಅಶೋಕ್​​
  • Share this:
ಕಾರವಾರ(ಜ.22) : ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಯಿಂದ ಮುಂದೊಂದು ದಿನ ಜೆಡಿಎಸ್ ಪಕ್ಷವನ್ನ ಜನ ಅಣಕು ಪಕ್ಷ ಎಂದು ತೀರ್ಮಾನ ಮಾಡುತ್ತಾರೆ. ಭಾರತ ಧರ್ಮ ಛತ್ರವಲ್ಲ ಎಂದು ಹೆಚ್ಡಿಕೆ ವಿರುದ್ದ ಸಚಿವ ಆರ್​​ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಎರಡು ಬಾರೀ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ ಕುಮಾರಸ್ವಾಮಿಯವರು ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸುವಂತಹ ಹೇಳಿಕೆಗಳು ಅವರಿಗೆ ಶೋಭೆ ತರುವುದಿಲ್ಲ. ಬಾಂಬ್ ಇಡುವಂತಹ ಕೃತ್ಯ ಯಾರೇ ಮಾಡಿರಲಿ ಅವರು ಭಯೋತ್ಪಾದಕರು. ಪೊಲೀಸರ ಮೇಲೆ ಗೂಬೆ ಕೂರಿಸುವಂತದ್ದು ಅಕ್ಷಮ್ಯ ಅಪರಾಧ ಎಂದರು.

ಬಾಂಗ್ಲಾ ವಲಸಿಗರ ಕುರಿತು ಸಿದ್ಧರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು,  ಇಡೀ ಜಗತ್ತಿಗೆ ಗೊತ್ತಿದೆ ಬಾಂಗ್ಲಾ ವಲಸಿಗರು ಕಳೆದ 30 ವರ್ಷಗಳಿಂದ ವಲಸೆ ಬಂದಿದ್ದಾರೆ. ಅಂತಹವರಿಗೆ ಶೆಡ್ ಹಾಕಿಕೊಟ್ಟು, ರೇಷನ್ ಕಾರ್ಡ್ ನೀಡಿ ಮತ ಹಾಕಿಸಿಕೊಂಡಿದ್ದು ಕಾಂಗ್ರೆಸ್ ಚಾಳಿಯಾಗಿದ್ದು, ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿಕೆ ಅವರ ಅಭ್ಯಾಸ ಬಲವನ್ನ ತೋರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ :  ಅನರ್ಹ ಶಾಸಕ ಪ್ರತಾಪ್​​​ ಗೌಡ ಪಾಟೀಲ್ ವಿರುದ್ದ ಮತ್ತೊಂದು ಪ್ರಕರಣ ದಾಖಲು

ಯಾರು ಬೇರೆ ದೇಶಗಳಿಂದ ಬಂದಿದ್ದಾರೆ ಪೌರತ್ವ ಇಲ್ಲದವರು ವಾಪಸ್ ಹೋಗಬೇಕು. ಭಾರತ ಧರ್ಮಛತ್ರ ಅಲ್ಲ. ಸಿದ್ಧರಾಮಯ್ಯನವರು ಭಾರತವನ್ನ ಬಾಂಗ್ಲಾ, ಪಾಕಿಸ್ತಾನ ಮಾಡಲು ಹೊರಟಿದ್ದಾರಾ? ಭಾರತ ಭಾರತವಾಗಿಯೇ ಉಳಿಯಬೇಕು. ಇದಕ್ಕೆ ಯಾವುದೇ ಅವಕಾಶ ನೀಡಲ್ಲ  ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.
First published:January 22, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ