news18-kannada Updated:February 18, 2021, 1:58 PM IST
ಸಚಿವ ಆರ್.ಅಶೋಕ್
ಬೆಂಗಳೂರು(ಫೆ.18): ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ಮಾಡುತ್ತಿರುವ ವಿಚಾರ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಎಚ್.ಡಿ. ಕುಮಾರಸ್ವಾಮಿ ಮತ್ತಿತರರು ದೇಣಿಗೆ ಸಂಗ್ರಹ ಕುರಿತಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಹಣ ಲೂಟಿ ಮಾಡುತ್ತಿದ್ದಾರೆ ಎಂಬ ಆರೋಪವನ್ನೂ ಮಾಡುತ್ತಿದ್ದಾರೆ. ಕಾಂಗ್ರೆಸ್-ಜೆಡಿಎಸ್ ನಾಯಕರ ಹೇಳಿಕೆಗಳಿಗೆ ಕಂದಾಯ ಸಚಿವ ಆರ್.ಅಶೋಕ್ ಇಂದು ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಅವರಿಗೆ ಟಾಂಗ್ ಕೊಟ್ಟಿದ್ದಾರೆ.
ಸಿದ್ದರಾಮಯ್ಯ ವಕೀಲರು ಆಗಿದ್ದವರು. ಸುಪ್ರೀಂಕೋರ್ಟ್ ಸ್ಪಷ್ಟವಾದ ತೀರ್ಪು ಕೊಟ್ಟಿದೆ ಸುಪ್ರೀಂಕೋರ್ಟ್ ತೀರ್ಪು ಬಗ್ಗೆ ಇವರಿಗೆ ನಂಬಿಕೆ ಇಲ್ಲವಾ ? ಇಷ್ಟ ಇದ್ರೆ ದೇಣಿಗೆ ಕೊಡಲಿ, ಇಲ್ಲದೇ ಇದ್ದರೆ ಸುಮ್ಮನಿರಿ. ಕೊಡಬಾರದು ಅಂತಾ ಯಾಕೆ ಹೇಳಬೇಕು? ಇವರು ರಾಮಮಂದಿರವನ್ನಾದರೂ ಕಟ್ಟಲಿ, ಅಲ್ಲಾ ಮಂದಿರವನ್ನಾದರೂ ಕಟ್ಟಲಿ. ಮಸೀದಿ, ಚರ್ಚ್ ಕಟ್ಟುವ ಬಗ್ಗೆ ಏನನ್ನಾದರೂ ಮಾತನ್ನಾಡಿದ್ದಾರಾ? ಹಿಂದೂಗಳನ್ನ ಹೀಯಾಳಿಸೋದೆ ಇವರ ಚಾಳಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಗಾಳಿಯಿಂದ ಗರ್ಭ ಧರಿಸಿ ಹೆಣ್ಣು ಮಗುವಿಗೆ ಜನ್ಮ ನೀಡಿದೆ...!; ಇಂಡೋನೇಷ್ಯಾ ಮಹಿಳೆಯ ಮಾತು
ಇನ್ನು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧವೂ ಆರ್.ಅಶೋಕ್ ತಮ್ಮ ವಾಗ್ದಾಳಿ ಮುಂದುವರೆಸಿದರು. ದೇಣಿಗೆ ಕೇಳಲು ಬಂದು ನನಗೆ ಬೆದರಿಕೆ ಹಾಕುತ್ತಾರೆ ಎಂದು ಆರೋಪಿಸಿದ್ದ ಎಚ್ಡಿಕೆಗೆ ನಯವಾಗಿಯೇ ತಿರುಗೇಟು ನೀಡಿದರು. ರಾಮಮಂದಿರ ನಿರ್ಮಾಣಕ್ಕೆ ಕುಮಾರಸ್ವಾಮಿ ಒಂದು ಪೈಸೆಯನ್ನೂ ನೀಡಿಲ್ಲ. ದೇಣಿಗೆ ಲೆಕ್ಕದಲ್ಲಿ ಅವ್ಯವಹಾರ ಆಗಿದ್ದರೆ ತೋರಿಸಲಿ. ರಾಜ್ಯದಲ್ಲಿ ಯಾರಾದರೂ ಕುಮಾರಸ್ವಾಮಿಗೆ ಧಮ್ಕಿ ಹಾಕಲು ಆಗುತ್ತಾ? ಇವರೇ ಇನ್ನೊಬ್ಬರಿಗೆ ಧಮ್ಕಿ ಹಾಕುತ್ತಾರೆ. ಶಾಸಕರಿಗೆ ಇವರೇ ಧಮ್ಕಿ ಹಾಕುತ್ತಾರೆ ಎಂದು ಹರಿಹಾಯ್ದರು.
ರಾಮನ ಲೆಕ್ಕದಲ್ಲಿ ಅವ್ಯವಹಾರ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ, ರಾಮನ ಲೆಕ್ಕ ಕೇಳಲು ಇವರು ಯಾರು ? ಇವರಂತೂ ನಯಾಪೈಸೆ ಕೊಟ್ಟಿಲ್ಲ ಕೊಡೋರನ್ನ ಬೇಡ ಅನ್ನೋಕೆ ಇವರು ಯಾರು? ಇವರದೇ ಪಕ್ಷದ ಶಾಸಕರು ದೇಣಿಗೆ ಕೊಟ್ಟಿದ್ದಾರೆ. ಇವರ ಮಾತನ್ನು ಅವರದೇ ಪಕ್ಷದ ಶಾಸಕರು ಕೇಳೋದಿಲ್ಲ. ಈಗಾಗಲೇ ಆರ್ಟಿಜಿಎಸ್, ಚೆಕ್, ಆನ್ ಲೈನ್ ಮೂಲಕ ದೇಣಿಗೆ ನೀಡುವ ವ್ಯವಸ್ಥೆ ಇದೆ. ಇದರಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಇದೇ ವೇಳೆ, ಅಯೋಧ್ಯೆಗೆ ತೆರಳಿ ದೇಣಿಗೆ ನೀಡಲು ಜೆಡಿಎಸ್ ಮುಖಂಡ ಶಿವಲಿಂಗೇಗೌಡ ಮುಂದಾಗಿರುವ ವಿಚಾರವಾಗಿ, ಅದನ್ನಾದರೂ ಮಾಡಲಿ ಬಿಡಿ. ಅವರೇ ಅಯೋಧ್ಯೆಗೆ ಹೋಗಿ ಕೊಡುತ್ತಾರೆ ಎಂದರೆ ಸಂತೋಷವಲ್ಲವೇ ಎಂದು ನಕ್ಕರು.
Published by:
Latha CG
First published:
February 18, 2021, 1:44 PM IST