ಬಿಜೆಪಿ ಬಗ್ಗೆ ಮಾತನಾಡೋದು ಡಿಕೆಶಿ​​ಗೆ ಚಟವಾಗಿದೆ; ಸಚಿವ ಆರ್. ಅಶೋಕ್ ವ್ಯಂಗ್ಯ

ಇನ್ನು ಸಿಎಂ ಯಡಿಯೂರಪ್ಪ ಅವರ ಬದಲಾವಣೆ ವಿಷಯಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಸಿಎಂ ಯಡಿಯೂರಪ್ಪ ಅವರೇ ನಮ್ಮ ಮುಖ್ಯಮಂತ್ರಿ. ಮುಂದಿನ ಎರಡು ವರ್ಷಗಳ ಅವಧಿಯಲ್ಲೂ ಅವರೇ ಸಿಎಂ ಆಗಿರುತ್ತಾರೆ. ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಸಚಿವ ಆರ್. ಅಶೋಕ್

ಸಚಿವ ಆರ್. ಅಶೋಕ್

  • Share this:
ಕೊಡಗು(ನ.29): ಸಿಎಂ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರ ಆತ್ಮಹತ್ಯೆ ಪ್ರಯತ್ನಕ್ಕೆ ಸಂಬಂಧಿಸಿದಂತೆ ವಿಡಿಯೋಗಳಿವೆ. ಅವುಗಳನ್ನು ಬಿಜೆಪಿ ನಾಯಕರೇ ಕೇಂದ್ರ ನಾಯಕರಿಗೆ ಕೊಟ್ಟಿದ್ದಾರೆ. ಹೀಗಾಗಿಯೇ ಸಂತೋಷ್ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ನಮ್ಮ ಪಕ್ಷದ ಬಗ್ಗೆ ಮಾತನಾಡುವುದು ಒಂದು ಚಟವಾಗಿಬಿಟ್ಟಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಡಿಕೆಶಿಗೆ ತಿರುಗೇಟು ನೀಡಿದ್ದಾರೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ನೂತನ ತಾಲ್ಲೂಕು ಉದ್ಘಾಟನೆಗೆ ಆಗಮಿಸಿದ ಸಂದರ್ಭ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಕಾಂಗ್ರೆಸ್ ಈಗ ರಾಜ್ಯದಲ್ಲಿಯಾಗಲಿ ಅಥವಾ ಕೇಂದ್ರದಲ್ಲಿ ಆಗಲಿ ಇಲ್ಲ. ಜೊತೆಗೆ ಕಾಂಗ್ರೆಸ್ ಸಾಕಷ್ಟು ಜನರು ಬಿಜೆಪಿ ಸೇರುತ್ತಿದ್ದಾರೆ. ಹೀಗಾಗಿ ಡಿಕೆಶಿ ಅವರು ಹೀಗೆಲ್ಲಾ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಮರಾಠ ಪ್ರಾಧಿಕಾರ ವಿರೋಧಿಸಿ ಮೈಸೂರಿನಲ್ಲಿ ಹೆದ್ದಾರಿ ತಡೆ; ವಾಟಾಳ್ ನಾಗರಾಜ್, ಸಾರಾ ಗೋವಿಂದ್ ಪೊಲೀಸರ ವಶಕ್ಕೆ

ಇನ್ನು ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಎನ್ನೋದು ಗೊತ್ತಿಲ್ಲ. ಅದು ಹೈಕಮಾಂಡ್‍ಗೆ ಬಿಟ್ಟಿರುವ ವಿಚಾರ. ಸದ್ಯ ಅಧಿವೇಶನವಿದೆ, ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಇದೆ. ಇವುಗಳನ್ನು ಎದುರಿಸಲು ನಿರ್ದೇಶನವಿದೆ. ಆ ಬಳಿಕ ಸಚಿವ ಸಂಪುಟದ ಬಗ್ಗೆ ಕೇಂದ್ರ ನಾಯಕರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.

ಇನ್ನು ಸಿಎಂ ಯಡಿಯೂರಪ್ಪ ಅವರ ಬದಲಾವಣೆ ವಿಷಯಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಸಿಎಂ ಯಡಿಯೂರಪ್ಪ ಅವರೇ ನಮ್ಮ ಮುಖ್ಯಮಂತ್ರಿ. ಮುಂದಿನ ಎರಡು ವರ್ಷಗಳ ಅವಧಿಯಲ್ಲೂ ಅವರೇ ಸಿಎಂ ಆಗಿರುತ್ತಾರೆ. ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ನಾನೂ ಕೂಡ ದೆಹಲಿಗೆ ಹೋಗಿದ್ದೆ ಆ ವೇಳೆಯೂ ಸಿಎಂಂ ಬದಲಾವಣೆಗೆ ಸಂಬಂಧಿಸಿ ಯಾವುದೇ ಮಾಹಿತಿ ಇಲ್ಲ. ಹೀಗಾಗಿ ಯಡಿಯೂರಪ್ಪನವರೇ ಸಿಎಂ ಆಗಿರುತ್ತಾರೆ ಎಂದು ಹೇಳಿದರು.

ಇನ್ನು ಹೊರಗಿನಿಂದ ಬಂದಿರುವ ಇನ್ನೂ ಕೆಲವರಿಗೆ ಸಚಿವ ಸ್ಥಾನ ನೀಡುವ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು ಯಾವುದೇ ಕಾರಣಕ್ಕೂ ಯಾರಿಗೂ ಅನ್ಯಾಯವಾಗುದಿಲ್ಲ. ಆರ್ ಶಂಕರ್, ಎಂಟಿಬಿ ನಾಗರಾಜ್ ಮತ್ತು ಮುನಿರತ್ನಂ ಅವರಿಗೂ ಸಚಿವಸ್ಥಾನ ಸಿಗಲಿದೆ. ಆದರೆ ಗ್ರಾಮ ಪಂಚಾಯಿತಿ ಚುನಾವಣೆ ಮತ್ತು ಅಧಿವೇಶನ ಇರುವುದರಿಂದ ಅವುಗಳನ್ನು ಮುಗಿಸಿದ ಬಳಿಕ ಉಳಿದವರಿಗೂ ಸಚಿವಸ್ಥಾನ ಸಿಗಲಿದೆ. ಆತುರ ಬೇಡ ಅಷ್ಟೆ. ಆತುರವಿಲ್ಲದೆ ಕಾಯುವುದು ಒಳ್ಳೆಯದು ಎಂದು ಪ್ರತಿಕ್ರಿಯಿಸಿದ್ದಾರೆ.
Published by:Latha CG
First published: