ಕಲಬುರಗಿ(ಫೆ. 28): ರಾಜ್ಯ ಬಜೆಟ್ ಮಂಡನೆ ಬಳಿಕ ತಿಂಗಳಲ್ಲಿ ಒಂದು ದಿನ ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಗ್ರಾಮ ವಾಸ್ತವ್ಯ ಮಾಡಬೇಕು. ಈ ಮೂಲಕ ಅವರ ಸಮಸ್ಯೆ ಅರಿಯುವ ಪ್ರಯತ್ನ ಮಾಡಬೇಕು ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಪ್ರತಿ ತಿಂಗಳು ಒಂದು ದಿನ ಗ್ರಾಮಕ್ಕೆ ಡಿಸಿಗಳು ಕಡ್ಡಾಯವಾಗಿ ಭೇಟಿ ನೀಡಬೇಕು. ಈ ವೇಳೆ ಕಂದಾಯ ಇಲಾಖೆಯ ಅಧಿಕಾರಿಗಳು ಇರಬೇಕು. ಬಜೆಟ್ ಅಧಿವೇಶನ ಮುಗಿಯುತ್ತಿದ್ದಂತೆಯೇ ಈ ಕ್ರಮ ಜಾರಿ ಮಾಡಲಾಗುವುದು ಎಂದರು.
'ಜಿಲ್ಲಾಧಿಕಾರಿಗಳೇ ಹಳ್ಳಿಗೆ ನಡೆಯಿರಿ' ಎಂಬ ಕಾರ್ಯಕ್ರಮವನ್ನು ಜಾರಿಗೆ ತರುವ ಬಗ್ಗೆ ಈಗಾಗಲೇ ಚಿಂತಿಸಲಾಗಿದೆ. ಈ ಮೂಲಕ ತೆರಿಗೆದಾರರ ಕಷ್ಟವನ್ನು ಅಧಿಕಾರಿಗಳು ಅರಿಯುವ ಪ್ರಯತ್ನ ಮಾಡಬೇಕು. ಗ್ರಾಮಗಳಿಗೆ ಭೇಟಿನೀಡಿದಾಗ ಗ್ರಾಮಸ್ಥರ ಸಮಸ್ಯೆಯನ್ನು ಆಲಿಸಿ, ಅಲ್ಲಿಯೇ ಪರಿಹಾರ ಸೂಚಿಸಬೇಕು. ಅಂಗನವಾಡಿಯಲ್ಲಿಯೇ ಊಟ ಮಾಡಬೇಕು. ಸಾಧ್ಯವಾದರೆ ರಾತ್ರಿ ಅಲ್ಲೇ ವಾಸ್ತವ್ಯ ಹೂಡಬೇಕು ಎಂದರು.
ಇದನ್ನು ಓದಿ: ಲಾಡು ಮಾರಾಟದಿಂದಲೇ ಕೋಟಿ ರೂ. ಆದಾಯಗಳಿಸಿದ ಮಲೆ ಮಹದೇಶ್ವರ ದೇಗುಲ
60 ವರ್ಷ ತುಂಬಿದ ಹಿರಿಯರಿಗೆ ವೃದ್ಧಾಪ್ಯ ವೇತನವನ್ನು ಮನೆ ಬಾಗಿಲಿಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿದ್ದು, ಶೀಘ್ರದಲ್ಲಿಯೇ ಇದನ್ನು ಜಾರಿಗೆ ತರಲಾಗುವುದು . ಇದರಿಂದ ಹಿರಿಯ ನಾಗರಿಕರು ಸರ್ಕಾರಿ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲಾಗುವುದು ಎಂದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ