ಇಡೀ ಕರ್ನಾಟಕದಲ್ಲಿ Hijab ಪರವಾಗಿ 100 ಜನ ಕೂಡ ಇಲ್ಲ : ಸಚಿವ R. Ashoka ವ್ಯಂಗ್ಯ

ಹಿಜಾಬ್ ಪರ ಮಾತನಾಡುವವರು ಕೆಲವೇ ಕೆಲವು ಜನ. ಇಡೀ ಕರ್ನಾಟಕದಲ್ಲಿ ಗುಡ್ಡೆ ಹಾಕಿದರೂ 100 ಜನ ಸಿಗಲ್ಲ. ಹಿಜಾಬ್ ಪರ ಇರುವವರ ಓಟು ಬೇಡ, ಸಿಂಪಥಿಯೂ ಬೇಡ ಎಂದು ಸಚಿವ ಆರ್​.ಅಶೋಕ್​ ಹೇಳಿಕೆ ನೀಡಿದ್ದಾರೆ.

ಸಚಿವ ಆರ್.ಅಶೋಕ್

ಸಚಿವ ಆರ್.ಅಶೋಕ್

  • Share this:
ಉಡುಪಿ: ಸಚಿವ ಕೆ.ಎಸ್​​.ಈಶ್ವರಪ್ಪ (Minister KS Eshwarappa) ವಜಾಕ್ಕೆ ಪಟ್ಟು ಹಿಡಿದಿರುವ ಕಾಂಗ್ರೆಸ್(Congress) ಸರ್ಕಾರದ ವಿರುದ್ಧ ನಿರಂತರ ವಾಗ್ದಾಳಿಯಲ್ಲಿ ತೊಡಗಿದೆ. ಸಿಎಂ ಬೊಮ್ಮಾಯಿ (CM Bommai) ಹಾಗೂ ಬಿಜೆಪಿಗೆ (BJP) ಸ್ವಾಭಿಮಾನ ಇಲ್ಲ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಹೇಳಿಕೆಗೆ ಕಂದಾಯ ಸಚಿವ ಆರ್​.ಅಶೋಕ್​​ (R. Ashoka) ತಿರುಗೇಟು ಕೊಟ್ಟರು. ಈಶ್ವರಪ್ಪರನ್ನು ನೇಮಕ ಮಾಡಿದ್ದು ಬಿಜೆಪಿ ಪಕ್ಷ, ಈಶ್ವರಪ್ಪನ ಕಾಂಗ್ರೆಸ್ ನೇಮಕ ಮಾಡಿದೆಯಾ? ಕಾಂಗ್ರೆಸ್​​ನ ಎಲ್ಲರೂ ಬಿಜೆಪಿಗೆ ಸೇರಿಕೊಂಡು ಬಿಡಿ. ಆಮೇಲೆ ನೀವು ಬಿಜೆಪಿಗೆ ಸಲಹೆ ಕೊಡಿ ಎಂದು ಬ್ರಹ್ಮಾವರ ತಾಲೂಕಿನ ಕೆಂಜೂರಿನಲ್ಲಿ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಕ್ಷ ಬಹಳ ಗೊಂದಲದಲ್ಲಿದೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಒಡಕು ಬೀದಿಗೆ ಬಿದ್ದಿದೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: Hijab Row: ಹಿಜಾಬ್ ನಿಷೇಧಿಸಿ ಅಲ್ಪಸಂಖ್ಯಾತರ ಇಲಾಖೆಯಿಂದ ಸುತ್ತೋಲೆ.. ಯಾರಿಗೆಲ್ಲಾ ಇದು ಅನ್ವಯ?

6 ವಿದ್ಯಾರ್ಥಿಗಳು ಇಷ್ಟೆಲ್ಲಾ ಮಾಡಲು ಸಾಧ್ಯವೇ?

ಹಿಜಾಬ್ ವಿವಾದ ವಿಧಾನಸಭೆಯಲ್ಲಿ ಚರ್ಚೆಗೆ ಬರದಂತೆ ನೋಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ ನ ಬಂಡವಾಳ ಏನು ಎಂಬುದು ಜನಕ್ಕೆ ಅರ್ಥ ಆಗುತ್ತಿದೆ. ಕೆಲವರು ಟಿಸಿ ಕೇಳುತ್ತಿದ್ದಾರೆ, ಕೆಲವರು ಶಾಲೆಗೆ ಬರಲ್ಲ ಅನ್ನುತ್ತಿದ್ದಾರೆ. ಹಿಜಾಬ್​​ ವಿವಾದ ಹಿಂದೆ ದೊಡ್ಡ ಷಡ್ಯಂತ್ರ ಇದೆ, ಐಸಿಸ್ ಸಂಘಟನೆ ಕೆಲಸ ಮಾಡುತ್ತಿದೆ. ಒಂದು ಸಂಸ್ಥೆಯ ವಿಚಾರ ಪ್ರಪಂಚಕ್ಕೆ ಹಬ್ಬಿದ್ದು ಹೇಗೆ? ಆರು ಮಂದಿ ವಿದ್ಯಾರ್ಥಿಗಳು ಇಷ್ಟೆಲ್ಲಾ ಮಾಡಲು ಸಾಧ್ಯವೇ? ವಿದ್ಯೆ ಮುಖ್ಯ, ಧರ್ಮ ಮುಖ್ಯ ಅಲ್ಲ. ನಾನು ಮಕ್ಕಳಲ್ಲಿ ವಿನಂತಿ ಮಾಡುತ್ತಿದ್ದೇನೆ. ವಿದ್ಯೆ ಇದ್ರೆ ಧರ್ಮ ಎಲ್ಲವೂ ನಿಮ್ಮ ಹತ್ತಿರ ಓಡಿ ಬರುತ್ತದೆ. ದೇಶ ದೊಡ್ಡದು ಧರ್ಮ ದೊಡ್ಡದಲ್ಲ ಅರ್ಥ ಮಾಡಿಕೊಳ್ಳಿ. ಕಾಂಗ್ರೆಸ್ಸನ್ನು ನಂಬಿಕೊಂಡು ಹೋದರೆ ದೇವರೇ ಗತಿ ಎಂದು ವಿದ್ಯಾರ್ಥಿಗಳಿಗೆ ಮನವಿ ಮಾಡಿಕೊಂಡರು.

ಇಡೀ ಕರ್ನಾಟಕ ಗುಡ್ಡೆ ಹಾಕಿದರು 100 ಜನ ಸಿಗಲ್ಲ

ಹಿಜಬ್ ವಿಚಾರದಲ್ಲಿ ಪೋಷಕರು ಶಾಪ ಹಾಕುತ್ತಿದ್ದಾರೆ ಎಂಬ ಯು.ಟಿ ಖಾದರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವ ಅಶೋಕ್​​, ಹಿಜಾಬ್ ಹಾಕುವವರು ಶಾಪ ಹಾಕುತ್ತಿರಬಹುದು. ಹಿಜಾಬ್ ಪರ ಮಾತನಾಡುವವರು ಕೆಲವೇ ಕೆಲವು ಜನ. ಇಡೀ ಕರ್ನಾಟಕದಲ್ಲಿ ಗುಡ್ಡೆ ಹಾಕಿದರು 100 ಜನ ಸಿಗಲ್ಲ. ಹಿಜಾಬ್ ಪರ ಇರುವವರ ಓಟು ಬೇಡ ಸಿಂಪಥಿಯೂ ಬೇಡ. ಅಂಜುಮನ್ ಇಸ್ಲಾಂ ಇಡೀ ರಾಜ್ಯದ ದೊಡ್ಡ ಶಿಕ್ಷಣ ಸಂಸ್ಥೆ. ಹಿಜಾಬ್, ಕೇಸರಿ ಮುಖ್ಯ ಅಲ್ಲ ಅಂತ ಅವರೇ ಕರೆ ಕೊಟ್ಟಿದ್ದಾರೆ. ಬಹಳಷ್ಟು ಮೌಲ್ವಿಗಳು ಹಿಜಾಬ್ ಮುಖ್ಯ ಅಲ್ಲ ಎಂದಿದ್ದಾರೆ. ದೇಶದ ಮಾತು ಕೇಳೋದು ಬಿಟ್ಟು ವಿದೇಶದ ಮಾತು ಕೇಳುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: Hijab Row: ಕುಂಕುಮ, ಬಳೆ, ಸರಸ್ವತಿ ಪೂಜೆ ಬಗ್ಗೆ ಮಾತನಾಡಿದರೆ ನಾಲಿಗೆ ಸೀಳುತ್ತೇವೆ ಹುಷಾರ್: Muthalik

ಸ್ಥಳೀಯ ಮುಸ್ಲಿಂ ನಾಯಕರು ಶಿಕ್ಷಣದ ಪರ ಇದ್ದಾರೆ. ಎರಡು ಲಕ್ಷ ಸಂಬಳ ತೆಗೆದುಕೊಂಡು ವಿಧಾನಸಭೆಯಲ್ಲಿ ಗೊರಕೆ ಹೊಡಿಬೇಡಿ. ಸರ್ಕಾರವೇ ವಿರೋಧ ಪಕ್ಷಕ್ಕೆ ಕಿವಿ ಹಿಂಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತದಲ್ಲಿ ಅತ್ತ ದರಿ ಇತ್ತ ಪುಲಿ ಎಂಬ ಪರಿಸ್ಥಿತಿ ಕಾಂಗ್ರೆಸ್​​ನದ್ದು ಎಂದು ಸಚಿವರು ವ್ಯಂಗ್ಯವಾಡಿದರು.

ಈಶ್ವರಪ್ಪ ರಾಜೀನಾಮೆನೂ ಕೊಡಲ್ಲ, ಕ್ಷಮೆನೂ ಕೇಳಲ್ಲ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಮಾತನಾಡಿದ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ರೇಣುಕಾಚಾರ್ಯ, ಈಶ್ವರಪ್ಪ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಕ್ಷಮೆನೂ ಕೇಳಲ್ಲ, ಯಾಕೆ ಕ್ಷಮೆ ಕೇಳಬೇಕು ಎಂದು ಪ್ರಶ್ನಿಸಿದರು. ಈಶ್ವರಪ್ಪ ಒಬ್ಬ ದೇಶ ಭಕ್ತ. ರಾಷ್ಟ್ರದ್ರೋಹಿಗಳು ನೀವು ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು. ಯಾವ ಪುರುಷಾರ್ಥಕ್ಕೆ ರಾಜೀನಾಮೆ ನೀಡಬೇಕು. ವಿಧಾನಸಭೆಯಲ್ಲಿ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ಮಾಡಿದ್ದೀರಿ. ರಾಷ್ಟ್ರಧ್ವಜಕ್ಕೆ ಕಾಂಗ್ರೆಸ್ ನವರು ಅಪಮಾನ ಮಾಡಿದ್ದಾರೆ. ರಾಜ್ಯಲ್ಲಿ ಎಲ್ಲಾದರೂ ಪ್ರತಿಭಟನೆ ಮಾಡಿ, ಆದರೆ ಈಶ್ವರಪ್ಪ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ನವರೇ ನೈತಿಕ ಹೊಣೆ ಹೊತ್ತು ನಾಡಿನ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
Published by:Kavya V
First published: