ಗೋವಾ ಬಿಜೆಪಿ ಮುಖಂಡರ ಸಂಪರ್ಕದಲ್ಲಿ ಸಚಿವ ರಮೇಶ್ ಜಾರಕಿಹೊಳಿ..?

news18
Updated:September 9, 2018, 7:06 PM IST
ಗೋವಾ ಬಿಜೆಪಿ ಮುಖಂಡರ ಸಂಪರ್ಕದಲ್ಲಿ ಸಚಿವ ರಮೇಶ್ ಜಾರಕಿಹೊಳಿ..?
  • Advertorial
  • Last Updated: September 9, 2018, 7:06 PM IST
  • Share this:
 - ಶ್ರಿನಿವಾಸ ಹಳಕಟ್ಟಿ ನ್ಯೂಸ್ 18 ಕನ್ನಡ 

ಬೆಂಗಳೂರು (09) :  ಬೆಳಗಾವಿಯ ಪಿಎಲ್ ಡಿ ಬ್ಯಾಂಕ್ ರಾಜಕಾರಣ ಕಾಂಗ್ರೆಸ್ ಪಕ್ಷದಲ್ಲಿ ಬಿರುಗಾಳಿ ಎಬ್ಬಿಸಿದೆ. ಜಾರಕಿಹೊಳಿ ಸಹೋದರರು ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಬಿಗ್ ಫೈಟ್ ನಡೆದಿತ್ತು. ಕಾಂಗ್ರೆಸ್ ನಾಯಕರು ಸಂಧಾನ ಮಾಡಲು ಮೂಲಕ ಬಗೆಹರಿಸಿದರು. ಇದೀಗ  ರಾಜ್ಯದ ಕಾಂಗ್ರೆಸ್ ನಾಯಕರು ಸಚಿವ ರಮೇಶ್ ಜಾರಕಿಹೋಳಿ ಅವರನ್ನು ಸಂಪರ್ಕಿಸಲು ಪ್ರಯತ್ನ ನಡೆಸಿದ್ದಾರೆ. ಆದ್ರೆ ಸಚಿವರು ಯಾವುದೇ ಸಂಪರ್ಕಕ್ಕೆ ಸಿಗುತ್ತಿಲ್ಲ.

ಇದರಿಂದ ರಾಜ್ಯದ ಕಾಂಗ್ರೆಸ್ ನಾಯಕರಿಗೆ ತಲೆನೊವಾಗಿ ಪರಿಣಮಿಸಿದೆ. ಒಂದು ಮೂಲದ ಪ್ರಕಾರ ಗೋವಾ - ಮಹಾರಾಷ್ಟ್ರ ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರವನ್ನು ತರಲು ತೆರೆಮರೆಯಲ್ಲಿ ಬಿಜೆಪಿ ನಾಯಕರು ಪ್ರಯತ್ನವನ್ನು ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಜವಾಬ್ದಾರಿಯನ್ನು ಗೋವಾ- ಮಹಾರಾಷ್ಟ್ರ ಬಿಜೆಪಿ ನಾಯಕರಿಗೆ ವಹಿಸಲಾಗಿದೆ. ಈ ಮಾಹಿತಿ ಅರಿತ ರಾಜ್ಯ ಕಾಂಗ್ರೆಸ್ ಮುಖಂಡರಿಗೆ ಶಾಕ್ ಆಗಿದೆ ಎಂದು ತಿಳಿದು ಬಂದಿದೆ.

ಸದ್ದಿಲ್ಲದೇ ಆಪರೇಶನ್ ಕಮಲಕ್ಕೆ ಬಿಜೆಪಿ ನಾಯಕರು ಮುಂದಾಗಿದ್ದಾರೆ. ಅಕ್ಟೋಬರ್​ವರೆಗೂ ಸರ್ಕಾರ ಬೀಳಿಸದಂತೆ ಬಿಜೆಪಿ ಹೈಕಮಾಂಡ್ ವಿಪಕ್ಷ ನಾಯಕ ಯಡಿಯೂರಪ್ಪ ಅವರಿಗೆ ಸೂಚನೆ ನೀಡಿದೆಯಂತೆ. ಜಾರಕಿಹೊಳಿ ಬ್ರದರ್ಸ್​​ ನೇತೃತ್ವದ  16 ಜನ ಶಾಸಕರ ತಂಡ ಬಿಜೆಪಿಗೆ ಸೇರಲಿದ್ದಾರೆ? ಎಂಬ ಚರ್ಚೆ ನಡೆಯುತ್ತಿದೆ.


  
First published:September 9, 2018
ಮತ್ತಷ್ಟು ಓದಿರಿ
ಮುಂದಿನ ಸುದ್ದಿ