Ramesh Jarakiholi: ಮತ್ತೆ ಡಿಸಿಎಂ ಸ್ಥಾನ ಪಡೆಯುವ ಕಸರತ್ತು ಆರಂಭಿಸಿದ ರಮೇಶ್ ಜಾರಕಿಹೊಳಿ

ಈಗ ಆರೋಗ್ಯ ಸಚಿವರಾಗಿದ್ದ ಶ್ರೀರಾಮುಲು ಕೊರೋನಾ ಸಂದರ್ಭದಲ್ಲಿ ಸಮರ್ಥವಾಗಿ ಕೆಲಸ ಮಾಡಿಲ್ಲ ಎಂಬುದನ್ನು ಹೈಕಮಾಂಡ್ ನಾಯಕರಿಗೆ ಮನವರಿಕೆ ಮಾಡಿಕೊಟ್ಟು ತಮಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಬೇಡಿಕೆ ಇಡುತ್ತಿದ್ದಾರೆ.

ಸಚಿವ ರಮೇಶ್ ಜಾರಕಿಹೊಳಿ

ಸಚಿವ ರಮೇಶ್ ಜಾರಕಿಹೊಳಿ

  • Share this:
ನವದೆಹಲಿ(ಸೆ.16): ಹಿಂದಿನ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ಬಂಡೆದ್ದು ಸರ್ಕಾರ ಕೆಡವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಮತ್ತೆ ಉಪ ಮುಖ್ಯಮಂತ್ರಿ ಸ್ಥಾನ ಪಡೆಯುವ ಕಸರತ್ತು ಆರಂಭಿಸಿದ್ದಾರೆ. ರಾಜ್ಯದಲ್ಲಿ ಆಪರೇಷನ್ ಕಮಲದ ಮೂಲಕ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೇ ರಮೇಶ್ ಜಾರಕಿಹೊಳಿ‌ ಉಪ ಮುಖ್ಯಮಂತ್ರಿ ಸ್ಥಾನ ಪಡೆಯಲು ಪ್ರಯತ್ನಿಸಿದ್ದರು. ಆದರೆ ಇವರದೇ ನಾಯಕ ಸಮುದಾಯದ ಬಿ. ಶ್ರೀರಾಮುಲು ಅವರನ್ನು ಬಿಜೆಪಿ ಚುನಾವಣೆಗೂ ಮುನ್ನವೇ ಉಪಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿತ್ತು. ಆದುದರಿಂದ ಶ್ರೀರಾಮುಲು ಅವರನ್ನು ತಪ್ಪಿಸಿ ರಮೇಶ್ ಜಾರಕಿಹೊಳಿ‌ ಉಪ ಮುಖ್ಯಮಂತ್ರಿ ಸ್ಥಾನ ಪಡೆಯುವುದು ಸಾಧ್ಯವಾಗಿರಲಿಲ್ಲ. ಈಗ ಆರೋಗ್ಯ ಸಚಿವರಾಗಿದ್ದ ಶ್ರೀರಾಮುಲು ಕೊರೋನಾ ಸಂದರ್ಭದಲ್ಲಿ ಸಮರ್ಥವಾಗಿ ಕೆಲಸ ಮಾಡಿಲ್ಲ ಎಂಬುದನ್ನು ಹೈಕಮಾಂಡ್ ನಾಯಕರಿಗೆ ಮನವರಿಕೆ ಮಾಡಿಕೊಟ್ಟು ತಮಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಬೇಡಿಕೆ ಇಡುತ್ತಿದ್ದಾರೆ.

Sira By Election: ಶಿರಾ ಉಪಚುನಾವಣೆ: ಮದಲೂರು ಕೆರೆಯೇ ಬಿಜೆಪಿಗೆ ಆಧಾರ

ಇದೇ ಹಿನ್ನಲೆಯಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ ಹಾಗೂ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರನ್ನು ಭೇಟಿ ಮಾಡಲೆಂದು ದೆಹಲಿಗೆ ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಜೆ.ಪಿ. ನಡ್ಡಾ ಹಾಗೂ ಸಂತೋಷ್ ಅವರ ಸಮಯ ಕೇಳಿರುವ ರಮೇಶ್ ಜಾರಕಿಹೊಳಿ‌ ಅವರ ಭೇಟಿಗಾಗಿ ದೆಹಲಿಯ ಕರ್ನಾಟಕ ಭವನದಲ್ಲೇ ಕಾಯುತ್ತಾ ಕುಳಿತಿದ್ದಾರೆ. ಇವರಿಬ್ಬರ ಭೇಟಿಯ ಬಳಿಕ ರಾಜ್ಯದಿಂದ ಕೇಂದ್ರ ಸಚಿವರಾಗಿರುವ ಡಿ.ವಿ. ಸದಾನಂದಗೌಡ ಮತ್ತು ಪ್ರಹ್ಲಾದ್ ಜೋಷಿ ಅವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡುವ ನೆಪ ಇಟ್ಟುಕೊಂಡು ದೆಹಲಿಗೆ ಬಂದಿರುವ ರಮೇಶ್ ಜಾರಕಿಹೊಳಿ‌ ಉಪ ಮುಖ್ಯಮಂತ್ರಿ ಸ್ಥಾನ ಪಡೆಯಲು ಹರಸಾಹಸ ಮಾಡುತ್ತಿದ್ದಾರೆ ಎನ್ನಲಾಗಿದೆ.
Published by:Latha CG
First published: