ಲಕ್ಷ್ಮಣ ಸವದಿ ಮುಂದಿನ ಮುಖ್ಯಮಂತ್ರಿ; ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಂದ ಅಭಿಯಾನ

ಲಕ್ಷ್ಮಣ ಸವದಿ ಮುಂದಿನ ಸಿಎಂ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ನಡೆಯುತ್ತಿರುವುದರಿಂದ ಲಕ್ಷ್ಮಣ ಸವದಿಗೆ ಅದೃಷ್ಟ ಇದ್ದರೆ ಮುಖ್ಯಮಂತ್ರಿ ಆಗಲಿ ಬಿಡಿ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಡಿಸಿಎಂ ಲಕ್ಷ್ಣಣ್ ಸವದಿ

ಡಿಸಿಎಂ ಲಕ್ಷ್ಣಣ್ ಸವದಿ

  • Share this:
ಚಿಕ್ಕೋಡಿ (ಜು. 28): ರಾಜ್ಯ ಸರ್ಕಾರಕ್ಕೆ  ಒಂದು ವರ್ಷ ತುಂಬಿದ ಹಿನ್ನಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆಮಾಡಿದೆ. ಇನ್ನೊಂದೆಡೆ ಇದಕ್ಕೆ ಕಾಂಗ್ರೆಸ್ ವಿರೋಧಿಸಿ ಪ್ರತಿಭಟನೆಯನ್ನು ನಡೆಸಿದೆ. ಇದೆಲ್ಲದರ ಮಧ್ಯೆ ಈಗ ಮತ್ತೊಂದು ವಿಚಾರ ರಾಜ್ಯ ರಾಜಕೀಯದ ವಲಯದಲ್ಲಿ ಬಿಸಿಬಿಸಿ ಚರ್ಚೆಗೆ ಬಂದಿದೆ. ಅದೇ ಲಕ್ಷ್ಮಣ ಸವದಿ ಹೆಸರು. ಹೌದು, ರಾಜ್ಯ ಸರಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಿಜೆಪಿ ವರ್ಷಾಚರಣೆಯಲ್ಲಿದ್ದರೆ ಇತ್ತ ಡಿಸಿಎಂ ಲಕ್ಷ್ಮಣ ಸವದಿ ಮುಂದಿನ ಮುಖ್ಯಮಂತ್ರಿ ಎಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪೋಟೋ ಸದ್ಯ ಹರಿದಾಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. 

ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಆಯ್ಕೆಗೆ ಕ್ಷಣಗಣನೆ ಎಂದು ಪೋಟೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ರಮೇಶ್ ಜಾರಕಿಹೊಳಿ, ನಸೀಬು ಇದ್ದರೆ ಲಕ್ಷ್ಮಣ ಸವದಿ ಸಿಎಂ ಆಗಲಿ ಎಂದು ಹೇಳಿದ್ದಾರೆ. ಲಕ್ಷ್ಮಣ ಸವದಿ ಮುಂದಿನ ಸಿಎಂ ಎಂದು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ನಡೆಯುತ್ತಿರುವುದರಿಂದ ಲಕ್ಷ್ಮಣ ಸವದಿಗೆ ಅದೃಷ್ಟ ಇದ್ದರೆ ಮುಖ್ಯಮಂತ್ರಿ ಆಗಲಿ ಬಿಡಿ ಎಂದು ಹೇಳಿದ್ದಾರೆ.

ಬೆಳಗಾವಿಯಲ್ಲಿ ಇಂದು ಮಾತನಾಡಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಲಕ್ಷ್ಮಣ ಸವದಿಯೇ ಮುಂದಿನ ಮುಖ್ಯಮಂತ್ರಿ ಎಂಬ ಬಗ್ಗೆ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಯುತ್ತಿರುವ ಬಗ್ಗೆ ನನಗೆ ತಿಳಿದಿಲ್ಲ. ಸವದಿ ಅದೃಷ್ಟದಲ್ಲಿ ಮುಖ್ಯಮಂತ್ರಿ ಯೋಗವಿದ್ದರೆ ಆಗಲಿ ಬಿಡಿ. ಅದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರದ ವಿರುದ್ದ ಕಾಂಗ್ರೆಸ್ ಸಮರ; ಜಿಲ್ಲಾಮಟ್ಟದಲ್ಲಿ ತಿರುಗೇಟು ನೀಡಲು ಸಿದ್ಧತೆ

2018ರಲ್ಲಿ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಲಕ್ಷ್ಮಣ ಸವದಿ ಸೋಲನ್ನು ಅನುಭವಿಸಿದ್ದರು. ಬಳಿಕ ಆಪರೇಷನ್ ಕಮಲದ ಮೂಲಕ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಎಲ್ಲರಿಗೂ ಅಚ್ಚರಿ ಎಂಬಂತೆ ರಾಜ್ಯದ ಉಪ ಮುಖ್ಯಮಂತ್ರಿ ಎಂದು ಘೋಷಣೆ ಬಳಿಕ ಡಿಸಿಎಂ ಸವದಿ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವ ಮೂಲಕ ರಾಜಕೀಯದಲ್ಲಿ ಯಾವುದೂ ಅಸಾಧ್ಯವಲ್ಲ ಎಂಬುದನ್ನು ತೋರಿಸಿದ್ದರು. ಅಂದೇ ಹೈಕಮಾಂಡ್​ಗೆ ತುಂಬ ಹತ್ತಿರವಿದ್ದ ಲಕ್ಷ್ಮಣ ಸವದಿ ಪವರ್ ಇಡೀ ರಾಜ್ಯಕ್ಕೆ ಗೊತ್ತಾಗಿತ್ತು. ಇತ್ತೀಚಿನ ದಿನಗಳಲ್ಲಿ ಲಕ್ಷ್ಮಣ ಸವದಿ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡಿದ್ದಾರೆ. ರಾಜ್ಯಪಾಲರ ಭೇಟಿ ಮಾಡಿರುವ ವಿಚಾರ ಮುಂಚೂಣಿಗೆ ಬರುತ್ತಿದ್ದಂತೆ ಅಥಣಿಯ ಲಕ್ಷ್ಮಣ ಸವದಿ ಬೆಂಬಲಿಗರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷ್ಮಣ ಸವದಿ ಕುರಿತಾದ ಪೋಸ್ಟ್  ಹರಿಬಿಡಲು ಶುರು ಮಾಡಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ವಿನಯ್ ಗುರೂಜಿಯಿಂದ ಮರಳು ರವಾನೆ

ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿಗಳನ್ನು ಸೃಷ್ಟಿಸಲು ಕ್ಷಣಗಣನೆ ಶುರುವಾಗಿದೆ. ಮುಂದಿನ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಎಂಬ ಬರಹದ ಪೋಸ್ಟ್​ಗಳ ಪೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಾರೆ. ಒಟ್ಟಿನಲ್ಲಿ ಸದ್ಯ ಬಿಜೆಪಿ ಸರ್ಕಾರ ವರ್ಷಾಚರಣೆಯ ಸಂಭ್ರಮದಲ್ಲಿದ್ದರೆ ಇನ್ನೊಂದೆಡೆ  ಸಚಿವ ಸಂಪುಟ ವಿಸ್ತರಣೆ ಚರ್ಚೆಗಳ ನಡುವೆ ಮತ್ತೊಮ್ಮೆ ಮುಖ್ಯಮಂತ್ರಿ ಬದಲಾವಣೆಯ ಮಾತುಗಳು ಸಹ ಕೇಳಿಬರುತ್ತಿವೆ. ರಾಜ್ಯ ರಾಜಕಾರಣದಲ್ಲಿ ಸದ್ದಿಲ್ಲದೆ ಹಲವಾರು ಬೆಳವಣಿಗೆಗಳು  ನಡೆಯುತ್ತಿವೆ . ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎಂಬುದು ರಾಜಕೀಯ ವಿಶ್ಲೇಷಕರ ಮಾತು.
Published by:Sushma Chakre
First published: