HOME » NEWS » State » MINISTER RAMESH JARKIHOLI WHAT SAID ABOUT SEX CD ALLEGATION RHHSN

Ramesh Jarkiholi: ನೀರಾವರಿ ಸಚಿವರ ರಾಸಲೀಲೆ ಆರೋಪ ಪ್ರಕರಣ: ರಮೇಶ್ ಜಾರಕಿಹೊಳಿ ಹೇಳುವುದೇನು? ಸಚಿವರ ತಲೆದಂಡ ಸಾಧ್ಯತೆ?

ರಾಸಲೀಲೆ ವಿಡಿಯೋ ಬಿಡುಗಡೆಯಾಗುತ್ತಿದ್ದಂತೆ ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಈ ವಿಷಯವಾಗಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ.  ಬಿಜೆಪಿ ಸರ್ಕಾರ ಯಾವ ಕ್ರಮ ತೆಗೆದುಕೊಳ್ಳುತ್ತದೆ ಎಂಬುದನ್ನು ನೋಡುತ್ತೇವೆ. ಆ ಬಳಿಕ ನಾವು ಪ್ರತಿಕ್ರಿಯಿಸುತ್ತೇವೆ ಎಂದಷ್ಟೇ ಹೇಳಿದ್ದಾರೆ.

news18-kannada
Updated:March 2, 2021, 10:12 PM IST
Ramesh Jarkiholi: ನೀರಾವರಿ ಸಚಿವರ ರಾಸಲೀಲೆ ಆರೋಪ ಪ್ರಕರಣ: ರಮೇಶ್ ಜಾರಕಿಹೊಳಿ ಹೇಳುವುದೇನು? ಸಚಿವರ ತಲೆದಂಡ ಸಾಧ್ಯತೆ?
ಸಚಿವ ರಮೇಶ್ ಜಾರಕಿಹೋಳಿ.
  • Share this:
ಬೆಂಗಳೂರು: ರಾಜ್ಯದಲ್ಲಿ ಮತ್ತೊಬ್ಬ ರಾಜಕೀಯ ಮುಖಂಡನ ರಾಸಲೀಲೆ ಸಿಡಿ ಸ್ಫೋಟಗೊಂಡಿದೆ. ಮೈತ್ರಿ ಸರ್ಕಾರದಲ್ಲಿ ಬಂಡಾಯವೆದ್ದು, ಅಸಮಾಧಾನಿತ ಕಾಂಗ್ರೆಸ್, ಜೆಡಿಎಸ್ ಶಾಸಕರಿಂದ ರಾಜೀನಾಮೆ ಕೊಡಿಸುವ ಮೂಲಕ ಮೈತ್ರಿ ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ರಚನೆಗೆ ನೇರ ಕಾರಣರಾಗಿದ್ದ ಹಾಲಿ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷರಾದ ದಿನೇಶ್ ಕಲ್ಲಹಳ್ಳಿ ಅವರು ಯುವತಿ ಪರವಾಗಿ ಈ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಏನಿದೆ?

"ನೀರಾವರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಉತ್ತರ ಕರ್ನಾಟಕದ ಬಡಕುಟುಂಬದ ಯುವತಿಗೆ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಆಕೆಯನ್ನು ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾರೆ. ಆನಂತರ ಕೆಲಸವನ್ನು ಕೊಡಿಸದೆ ಆಕೆಗೆ ವಂಚಿಸಿದ್ದಾರೆ. ಯುವತಿ ಬಳಿ ತಮ್ಮ ಕಾಮದಾಟದ ವಿಡಿಯೋ ಇದೆ ಎಂದು ತಿಳಿಯುತ್ತಿದ್ದಂತೆ ಆಕೆ ಮತ್ತು ಆಕೆಯ ಕುಟುಂಬದ ಸದಸ್ಯರಿಗೆ ಜೀವ ಬೆದರಿಕೆ ಒಡ್ಡಿದ್ದಾರೆ. ಈ ವಿಡಿಯೋವನ್ನು ಆ ಕುಟುಂಬ ಸದಸ್ಯರೊಬ್ಬರು ನನಗೆ ನೀಡಿ, ರಕ್ಷಣೆ ಮಾಡುವಂತೆ ಮನವಿ ಮಾಡಿದ್ದಾರೆ. ಅದರಂತೆ ನಾನು ಈ ದೂರು ನೀಡುತ್ತಿದ್ದು, ವಿಡಿಯೋ ಸತ್ಯಾಸತ್ಯತೆ ಪರಿಶೀಲಿಸಿ, ಸಂತ್ರಸ್ತ ಯುವತಿ ಹಾಗೂ ಆಕೆಯ ಕುಟುಂಬ ಸದಸ್ಯರ ಜೀವ ರಕ್ಷಣೆಗೆ ಮುಂದಾಗಬೇಕು ಎಂದು ತಮ್ಮಲ್ಲಿ ಕೋರುತ್ತೇನೆ," ಎಂದು ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷರಾದ ದಿನೇಶ್ ಕಲ್ಲಹಳ್ಳಿ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಸಚಿವ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ರಾಸಲೀಲೆ ವಿಡಿಯೋ ಇಂದು ಸಂಜೆಯಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲಾರಂಭಿಸಿದೆ. ಇಂದು ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಬೇಕಿದ್ದ ಸಚಿವರು ಮಾಧ್ಯಮಗಳಲ್ಲೂ ಈ ವಿಡಿಯೋ ಪ್ರಸಾರವಾಗುತ್ತಿದ್ದಂತೆ ತಮ್ಮ ಬೆಂಗಾವರು ಪಡೆಯನ್ನು ಬಿಟ್ಟು ಏಕಾಂಗಿಯಾಗಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಇನ್ನು ರಮೇಶ್ ಜಾರಕಿಹೊಳಿ ಅವರ ಗೋಕಾಕ್ ಕ್ಷೇತ್ರದಲ್ಲಿ ಸಂಜೆಯಿಂದಲೇ ವಿದ್ಯುತ್ ಕಟ್​ ಆಗಿದೆ.

ಇದನ್ನು ಓದಿ: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಿಡಿ ಬಾಂಬ್​; ಸಚಿವರ ರಾಸಲೀಲೆ ವಿಡಿಯೋ ವಿರುದ್ಧ ದೂರು

ಸಿಡಿ ಬಹಿರಂಗಗೊಂಡ ಬಳಿಕ ಈ ವಿಚಾರವಾಗಿ ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿರುವ ರಮೇಶ್ ಜಾರಕಿಹೊಳಿ ಅವರು, "ಮೊದಲನೆಯದಾಗಿ ನನಗೆ ದಿನೇಶ್ ಕಲ್ಲಹಳ್ಳಿ ಯಾರು ಎಂಬುದು ಗೊತ್ತಿಲ್ಲ. ನಾನು 21 ವರ್ಷದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ನಾನು ತುಂಬಾ ಸೂಕ್ಷ್ಮ ವ್ಯಕ್ತಿ. ಇದರ ಬಗ್ಗೆ ಪರಿಪೂರ್ಣ ತನಿಖೆ ನಡೆಯಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ನಮ್ಮದು ದೊಡ್ಡ ರಾಜಕೀಯ ಕುಟುಂಬ. ಇದು ನಿಜಕ್ಕೂ ನನಗೆ ದೊಡ್ಡ ಶಾಕ್ ನೀಡಿದೆ. ಈ ವಿಡಿಯೋ ಕಂಪ್ಲಿಟ್ ಸೃಷ್ಟಿ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಆ ಹೆಣ್ಣು ಮಗಳು ಯಾರು ಎಂಬುದು ನನಗೆ ಗೊತ್ತಿಲ್ಲ. ಇದುವರೆಗೂ ಕೇಳಿಬರದ ಆರೋಪ ಈಗ ಹೇಗೆ ಕೇಳಿಬಂತು ಹೇಳಿ. ಇದರ ಬಗ್ಗೆ ಮೊದಲು ಸಂಪೂರ್ಣ ತನಿಖೆಯಾಗಲಿ. ನಾನು ಯಾವುದಕ್ಕೂ ಹೆದರಲ್ಲ. ಸತ್ಯ ಗೆಲ್ಲುತ್ತೆ," ಎಂದು ಹೇಳಿದ್ದಾರೆ.ದಿನೇಶ್ ಕಲ್ಲಳ್ಳಿ ಅವರು ನೀಡಿರುವ ದೂರಿನ ಪ್ರತಿ.ಕಾಂಗ್ರೆಸ್ ನಾಯಕರಿಂದ ನಾಳೆ ಸುದ್ದಿಗೋಷ್ಠಿ

ರಾಸಲೀಲೆ ವಿಡಿಯೋ ಬಿಡುಗಡೆಯಾಗುತ್ತಿದ್ದಂತೆ ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಈ ವಿಷಯವಾಗಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ.  ಬಿಜೆಪಿ ಸರ್ಕಾರ ಯಾವ ಕ್ರಮ ತೆಗೆದುಕೊಳ್ಳುತ್ತದೆ ಎಂಬುದನ್ನು ನೋಡುತ್ತೇವೆ. ಆ ಬಳಿಕ ನಾವು ಪ್ರತಿಕ್ರಿಯಿಸುತ್ತೇವೆ ಎಂದಷ್ಟೇ ಹೇಳಿದ್ದಾರೆ. ಇನ್ನು ನಾಳೆ ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಠಿ ಕರೆದಿದ್ದಾರೆ. ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಕುರಿತು ಎಐಸಿಸಿ ವಕ್ತರರಾದ ಬ್ರಿಜೇಶ್ ಕಾಳಪ್ಪ ನೇತೃತ್ವದಲ್ಲಿ ಪ್ರೆಸ್​ಮೀಟ್ ನಡೆಯಲಿದ್ದು, ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸುವ ಸಾಧ್ಯತೆ ಇದೆ.
Published by: HR Ramesh
First published: March 2, 2021, 9:57 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories