HOME » NEWS » State » MINISTER SHASHIKALA JOLLE SAYS IN LAST FOUR YEARS 297 CHILD MARRIAGES HELD IN KARNATAKA LG

Child Marriage: ರಾಜ್ಯದಲ್ಲಿ ಕಳೆದ 4 ವರ್ಷಗಳಲ್ಲಿ 297 ಬಾಲ್ಯ ವಿವಾಹ; ಸಚಿವೆ ಶಶಿಕಲಾ ಜೊಲ್ಲೆ

ಮುಂದುವರೆದ ಅವರು, ಕಲ್ಯಾಣ ಕರ್ನಾಟಕದಲ್ಲಿ 2360 ಮತ್ತು ದಕ್ಷಿಣ ಭಾಗದ ಕೋಲಾರ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಕೊಡಗು ಮತ್ತು ಹಾಸನದಲ್ಲಿ 1806 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ ಎಂದು ತಿಳಿಸಿದರು.

news18-kannada
Updated:March 23, 2021, 2:44 PM IST
Child Marriage: ರಾಜ್ಯದಲ್ಲಿ ಕಳೆದ 4 ವರ್ಷಗಳಲ್ಲಿ 297 ಬಾಲ್ಯ ವಿವಾಹ; ಸಚಿವೆ ಶಶಿಕಲಾ ಜೊಲ್ಲೆ
ಸಚಿವೆ ಶಶಿಕಲಾ ಜೊಲ್ಲೆ
  • Share this:
ಬೆಂಗಳೂರು(ಮಾ.23): ಕೊರೋನಾ ಸಮಯದಲ್ಲಿ ಬಾಲ್ಯ ವಿವಾಹಗಳು ಹೆಚ್ಚಾಗಿವೆ ಎಂಬ ವಿಷಯವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಒಪ್ಪಿಕೊಂಡಿದ್ದಾರೆ. ಜೊತೆಗೆ ಕಳೆದ 4 ವರ್ಷಗಳಲ್ಲಿ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ 106 ಮತ್ತು ದಕ್ಷಿಣ ಭಾಗದ ಏಳು ಜಿಲ್ಲೆಗಳಲ್ಲಿ 191 ಬಾಲ್ಯ ವಿವಾಹಗಳು ನಡೆದಿವೆ ಎಂದು ಅವರು ತಿಳಿಸಿದ್ದಾರೆ.

ಪರಿಷತ್​ನಲ್ಲಿ ಕಾಂಗ್ರೆಸ್​ ಸದಸ್ಯ ಯು.ಬಿ. ವೆಂಕಟೇಶ್​ ಅವರು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ್ದ ವಿಷಯಕ್ಕೆ ಉತ್ತರಿಸಿದ ಅವರು, ಕಳೆದ 4 ವರ್ಷಗಳಲ್ಲಿ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ 106 ಮತ್ತು ದಕ್ಷಿಣ ಭಾಗದ ಏಳು ಜಿಲ್ಲೆಗಳಲ್ಲಿ 191 ಬಾಲ್ಯ ವಿವಾಹಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಕ್ರಮವಾಗಿ 60 ಮತ್ತು 115 ಪ್ರಕರಣಗಳಲ್ಲಿ ಎಫ್​ಐಆರ್​ ದಾಖಲಿಸಲಾಗಿದೆ ಎಂದು ಹೇಳಿದರು.

ಮುಂದುವರೆದ ಅವರು, ಕಲ್ಯಾಣ ಕರ್ನಾಟಕದಲ್ಲಿ 2360 ಮತ್ತು ದಕ್ಷಿಣ ಭಾಗದ ಕೋಲಾರ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಕೊಡಗು ಮತ್ತು ಹಾಸನದಲ್ಲಿ 1806 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ ಎಂದು ತಿಳಿಸಿದರು.

ಎಮೋಜಿಗಳಿಂದ ಮಾಡಿದ ಬಿಲ್ಲಿ ಎಲಿಶ್ ಕಲಾಕೃತಿ ಹರಾಜಿನಲ್ಲಿ 6 ಲಕ್ಷ ರೂ. ಗೆ ಮಾರಾಟ..?

ಇದೇ ವೇಳೆ, ಸರ್ಕಾರವು ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುತ್ತಿದೆ ಎಂದರು. ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆಯಂತೆ ಕಲ್ಯಾಣ ಕರ್ನಾಟಕದ ಬಳ್ಳಾರಿ, ಬೀದರ್, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬಾಲ್ಯ ವಿವಾಹ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಹೇಳಿದರು.

ಇನ್ನು, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಾಲ್ಯ ವಿವಾಹದ ಪ್ರಮಾಣವು ಕ್ರಮವಾಗಿ ಶೇ.2.8 ಮತ್ತು ಶೇ. 3.6ರಷ್ಟಿದೆ. ಸಾಂಸ್ಕೃತಿಕ, ಧಾರ್ಮಿಕ ಆಚರಣೆಗಳು, ಅನಕ್ಷರತೆ, ಅಜ್ಞಾನ, ಕುರುಡು ನಂಬಿಕೆಗಳು, ಶಿಕ್ಷಣದ ಕೊರತೆ, ಬಡತನ ಮತ್ತು ಆರ್ಥಿಕ ಕಾರಣಗಳಿಂದಾಗಿ ಹೆಚ್ಚಾಗಿ ಬಾಲ್ಯ ವಿವಾಹಗಳು ನಡೆಯುತ್ತಿವೆ ಎಂದು ಶಶಿಕಲಾ ಜೊಲ್ಲೆ ಅಭಿಪ್ರಾಯಪಟ್ಟರು.
Youtube Video
ಇದೇ ವೇಳೆ, ಕೊರೋನಾ ಸಮಯದಲ್ಲಿ ಬಾಲ್ಯ ವಿವಾಹ ತಡೆಗೆ ಕ್ರಮ ತೆಗೆದುಕೊಂಡಿದ್ದೆವು. ಗೃಹ ಇಲಾಖೆ, ನಮ್ಮ ಇಲಾಖೆ ಸೇರಿ ವಿವಿಧ ಇಲಾಖೆಗಳ ಸಹಕಾರದಲ್ಲಿ ಬಾಲ್ಯ ವಿವಾಹ ತಡೆಗೆ ಕ್ರಮ ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕ್ರಮ ತೆಗೆದುಕೊಂಡು ಬಾಲ್ಯ ವಿವಾಹ ತಡೆಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.
Published by: Latha CG
First published: March 23, 2021, 2:39 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories