ಗೋಹತ್ಯೆ ನಿಷೇಧಿಸುವಂತೆ ಸಿಎಂಗೆ ಮನವಿ ಮಾಡುತ್ತೇನೆ; ಸಚಿವ ಡಾ.ಕೆ.ಸುಧಾಕರ್

ಇನ್ನು ಜಿ.ಎಸ್.ಟಿ ಗೊಂದಲದ ಬಗ್ಗೆ ಮಾತನಾಡಿದ ಸಚಿವ ಸುಧಾಕರ್ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್‍ಟಿ ಪಾಲನ್ನು ನಮ್ಮ ಮುಖಂಡರು ತರುವ ವಿಶ್ವಾಸವಿದೆ. ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸಲು ಇದು ಅವಶ್ಯಕ ಎಂದರು.

ಸಚಿವ ಡಾ.ಕೆ.ಸುಧಾಕರ್

ಸಚಿವ ಡಾ.ಕೆ.ಸುಧಾಕರ್

  • Share this:
ಚಿಕ್ಕಬಳ್ಳಾಪುರ(ಆ.31): ಮನೆ ಸದಸ್ಯನಂತಿರುವ ಗೋವನ್ನು ಹತ್ಯೆ ಮಾಡುವುದು ಮಹಾಪಾಪ. ಗೋಹತ್ಯೆ ನಿಷೇಧಿಸಲು ಮುಖ್ಯಮಂತ್ರಿಯವರಿಗೆ ಮನವಿ ಮಾಡುತ್ತೇನೆ. ಜೊತೆಗೆ ಜಿಲ್ಲೆಯಲ್ಲಿ ಜಾಗೃತಿ ಆಂದೋಲನವನ್ನು ಕೂಡ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶ್ರೀ ವೆಂಕಟೇಶ್ವರ ಗೋಶಾಲೆ ಉದ್ಘಾಟಿಸಿ ಮಾತನಾಡಿದ ಸುಧಾಕರ್, "ಗೋಹತ್ಯೆಯನ್ನು ಎಲ್ಲ ಸರ್ಕಾರಗಳು ನಿಷೇಧಿಸಬೇಕು. ಗೋಮಾಂಸದ ರಫ್ತನ್ನು ಕೂಡ ನಿಷೇಧಿಸಬೇಕು. ಪಶ್ಚಿಮದ ದೇಶಗಳಲ್ಲಿ ನಾಲಿಗೆ ಚಪಲಕ್ಕೆ ಏನು ಬೇಕಾದರೂ ತಿನ್ನುತ್ತಾರೆ. ಆದರೆ ಭಾರತೀಯರಾಗಿ ನಾವು ಗೋಹತ್ಯೆ ಮಾಡಬಾರದು. ಇದನ್ನು ನಾನು ಬಲವಾಗಿ ವಿರೋಧಿಸುತ್ತೇನೆ" ಎಂದರು.

"ಭಾರತೀಯ ಸಂಪ್ರದಾಯದಲ್ಲಿ ಗೋವಿಗೆ ವಿಶೇಷ ಸ್ಥಾನಮಾನವಿದೆ. ವಯಸ್ಸಾಗಿದೆ ಎಂಬ ಕಾರಣಕ್ಕೆ ಹಸುವನ್ನು ಮಾರಾಟ ಮಾಡಬಾರದು. ಹಸು ಮನುಷ್ಯನಿಗೆ ಎಲ್ಲವನ್ನೂ ನೀಡುವ ಕಾಮಧೇನುವಾಗಿದೆ. ಆದ್ದರಿಂದ ಗೋಹತ್ಯೆ ಮಾಡಬಾರದು" ಗೋವಿಂದ ಹಾಲು, ಮೊಸರು, ಬೆಣ್ಣೆ ತುಪ್ಪ ಅಂತೆಲ್ಲಾ ಪಡಿತೀವಿ, ಸಗಣಿ, ಬೆರಣಿ, ಗೋವಿನ ಮೂತ್ರ ಆಯುರ್ವೇದ ಔಷಧ ಎಂದರು.

Bengaluru Weather: ಬೆಂಗಳೂರಲ್ಲಿ ರಾತ್ರಿಯಿಡೀ ವರುಣನ ಅಬ್ಬರ; ಮಳೆ ಇನ್ನೂ ಎಷ್ಟು ದಿನ ಮುಂದುವರಿಯಲಿದೆ ಗೊತ್ತಾ?

"ಗೋಮಾಂಸ ರಫ್ತು ನಿಷೇಧಕ್ಕೆ ಎರಡೂ ಸದನಗಳಲ್ಲಿ ಸಾಕಷ್ಟು ಚರ್ಚೆ ಯಾಗಬೇಕಿದೆ. ನಮ್ಮ ಪಕ್ಷ ಈ ವಿಚಾರದಲ್ಲಿ ದೃಢ ಸಂಕಲ್ಪ ಹೊಂದಿದೆ. ಶೀಘ್ರದಲ್ಲೇ ರಫ್ತು ನಿಷೇಧ ಆಗಲಿದೆ" ಎಂದು ಹೇಳಿದರು.

"ನಮ್ಮ ಮನೆಯಲ್ಲೂ ಸುಮಾರು 50 ಹಸುಗಳಿದ್ದವು. ಆಗ ನಮ್ಮ ಅಜ್ಜ ರಾತ್ರಿಯಲ್ಲೂ ಹಸುಗಳಿಗೆ ಮೇವು ಹಾಕುತ್ತಿದ್ದರು. ಹಸುವಿನ ಸಗಣಿ ಸ್ಯಾನಿಟೈಜರ್ ನಂತೆ ಸೂಕ್ಷ್ಮ ರೋಗಾಣುಗಳನ್ನೂ ನಾಶಪಡಿಸುವ ಶಕ್ತಿ ಹೊಂದಿದೆ. ಆದ್ದರಿಂದ ಸಗಣಿಯಲ್ಲಿ ನೆಲ ಸಾರಿಸುತ್ತಾರೆ" ಎಂದರು.ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚಿಕ್ಕನರಸಿಂಹಯ್ಯ ಉಪಸ್ಥಿತರಿದ್ದರು.

ಇನ್ನು ಜಿ.ಎಸ್.ಟಿ ಗೊಂದಲದ ಬಗ್ಗೆ ಮಾತನಾಡಿದ ಸಚಿವ ಸುಧಾಕರ್ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್‍ಟಿ ಪಾಲನ್ನು ನಮ್ಮ ಮುಖಂಡರು ತರುವ ವಿಶ್ವಾಸವಿದೆ. ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸಲು ಇದು ಅವಶ್ಯಕ ಎಂದರು.

ಡ್ರಗ್ಸ್ ಮಾಫಿಯಾ ಬೆಂಗಳೂರಿನಲ್ಲಿ ವ್ಯಾಪಕವಾಗುತ್ತಿರುವುದು ಆತಂಕಕಾರಿ. ಇದು ಸಮಾಜಕ್ಕೆ ಮಾರಕವಾಗಿದ್ದು, ಆರಂಭದಲ್ಲೇ ಕಿತ್ತುಹಾಕಬೇಕು. ಇಲ್ಲವಾದರೆ ಇದು ಅಪಾಯಕಾರಿಯಾಗಲಿದೆ. ಪೊಲೀಸರು ಮಾಫಿಯಾವನ್ನು ಸಮಾಜದಿಂದ ತೆಗೆದುಹಾಕಬೇಕು ಎಂದರು.
Published by:Latha CG
First published: