• Home
  • »
  • News
  • »
  • state
  • »
  • ಅನ್-ಲೈನ್ ಶಿಕ್ಷಣ ಗುಣಮಟ್ಟ ಅರಿಯುವ ಅಭಿಯಾನಕ್ಕೆ ಸಚಿವ ಸುರೇಶ್​ ಕುಮಾರ್ ಚಾಲನೆ

ಅನ್-ಲೈನ್ ಶಿಕ್ಷಣ ಗುಣಮಟ್ಟ ಅರಿಯುವ ಅಭಿಯಾನಕ್ಕೆ ಸಚಿವ ಸುರೇಶ್​ ಕುಮಾರ್ ಚಾಲನೆ

ಸಚಿವ ಸುರೇಶ್​ ಕುಮಾರ್​.

ಸಚಿವ ಸುರೇಶ್​ ಕುಮಾರ್​.

ಆರ್ಥಿಕ ಮಿತವ್ಯಯದ ಹಿನ್ನೆಲೆಯಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ನೇಮಕಾತಿ ಸ್ಥಗಿತಗೊಂಡಿದ್ದು, ಈ ಸಮಸ್ಯೆಯನ್ನು ಬಗೆಹರಿಸಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಿದ್ದೇನೆ ಎಂದು ಈ ವೇಳೆ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

  • Share this:

ಬೆಂಗಳೂರು: ಈಗ  ಆರಂಭವಾಗಿರುವ ಆನ್​ಲೈನ್ ಶಿಕ್ಷಣದ ಕಲಿಕಾ ಗುಣಮಟ್ಟ ಅರಿಯುವ ಕುರಿತು ವಿದ್ಯಾವಿನ್- ಶೈಕ್ಷಣಿಕ ಆಪ್ ವಿದ್ಯಾಸಂಸ್ಥೆ  ಕೈಗೆತ್ತಿಕೊಂಡಿರುವ   ಅಭಿಯಾನಕ್ಕೆ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಬುಧವಾರ  ಚಾಲನೆ ನೀಡಿದ್ದಾರೆ. ಕೋವಿಡ್​​ನಿಂದಾಗಿ ಸಾಂಪ್ರದಾಯಿಕ ತರಗತಿಗಳು ಆರಂಭವಾಗದೇ ಕೇವಲ  ಆನ್​ಲೈನ್ ತರಗತಿಗಳು ನಡೆಯುತ್ತಿರುವ ಈ ದಿನಗಳಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಆನ್​ಲೈನ್ ಶಿಕ್ಷಣ  ಮತ್ತು ಅದರಲ್ಲಿರುವ ಸಾಧ್ಯತೆಗಳ ಕುರಿತು ಅರಿವು  ಮೂಡಿಸುವ ನಿಟ್ಟಿನಲ್ಲಿ ವಿದ್ಯಾವಿನ್ ಸಂಸ್ಥೆ ರಾಜ್ಯಾದ್ಯಂತ ಆನ್-ಲೈನ್ ಶಿಕ್ಷಣ ಸಂಸ್ಥೆ ಕೈಗೊಂಡಿರುವ ಅಭಿಯಾನ ಉತ್ತಮವಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್​ ಅಭಿಪ್ರಾಯಪಟ್ಟಿದ್ದಾರೆ.


ಮಕ್ಕಳಿಗೆ ಮಿಸ್ಡ್ ಕಾಲ್ ನೀಡಿದ ತಕ್ಷಣವೇ ಪ್ರಶ್ನಾವಳಿ ಡೌನ್  ಲೋಡ್ ಮಾಡುವ ವ್ಯವಸ್ಥೆ ಇದ್ದು, ಇದರಿಂದ ಮಕ್ಕಳ ಕಲಿಕೆಯ ಗುಣಮಟ್ಟ ತಿಳಿಯುವುದರೊಂದಿಗೆ ಪ್ರತಿ ಜಿಲ್ಲೆಯಲ್ಲಿ ಹೆಚ್ಚು ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡುವ ಪ್ರತಿಭಾಶಾಲಿ ವಿದ್ಯಾರ್ಥಿಗೆ ಟ್ಯಾಬ್ ಮತ್ತು ಪ್ರತಿ ಜಿಲ್ಲೆಯಲ್ಲಿ ಮೂವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಆಪ್ ಆಧಾರಿತ ಶಿಕ್ಷಣ ನೀಡುತ್ತಿರುವದು  ಅಭಿಯಾನದಲ್ಲಿ ಹೆಚ್ಚೆಚ್ಚು ವಿದ್ಯಾರ್ಥಿಗಳು ಅಭಿಯಾನದಲ್ಲಿ ಭಾಗವಹಿಸಲು ಪ್ರೇರಣೆಯಾಗಿದೆ ಎಂದು ಅವರು ಹೇಳಿದರು.


ಈ‌ ಬಾರಿ‌ ಸರಳ‌‌‌ ಶಿಕ್ಷಕ‌ಸ್ನೇಹಿ‌ ವರ್ಗಾವಣೆ ಈಗಾಗಲೇ ಪ್ರಾರಂಭವಾಗಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಎದುರಿಸಲಾಗುತ್ತಿರುವ ಕೆಲವು ಪ್ರಾಯೋಗಿಕ ಸಮಸ್ಯೆಗಳನ್ನು ಸರಿಪಡಿಸುವುದಲ್ಲದೇ ಕಡ್ಡಾಯ, ಹೆಚ್ಚುವರಿ ವರ್ಗಾವಣೆಯಾದ ಶಿಕ್ಷಕರಿಗೆ ಮೊದಲ ಆದ್ಯತೆ ನೀಡಲಾಗಿದೆ. ಈ ಬಾರಿ ವರ್ಗಾವಣೆ ಮಿತಿಯನ್ನು ಶೇ. 15ಕ್ಕೆ ಹೆಚ್ಚಿಸಿರುವುದರಿಂದ ಬಹುಪಾಲು ಶಿಕ್ಷಕರಿಗೆ ವರ್ಗಾವಣೆ ಅವಕಾಶಗಳಿವೆ ಎಂದು ಸಚಿವರು ತಿಳಿಸಿದ್ದಾರೆ.


ಸಿ.ಆರ್.ಪಿ ಮತ್ತು ಬಿ.ಆರ್.ಪಿ ಶಿಕ್ಷಕರಿಗೆ ವರ್ಗಾವಣಾ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುವುದು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಕಡ್ಡಾಯ ವರ್ಗಾವಣಾ ವ್ಯಾಪ್ತಿಯಲ್ಲಿ ಬಂದ ಮುಖ್ಯೋಪಾಧ್ಯಾಯರಿಗೆ ಮತ್ತು ಪದವಿ ಪೂರ್ವ ಉಪನ್ಯಾಸಕರಿಗೂ  ಈ ಬಾರಿ ಆದ್ಯತೆಯ ವರ್ಗಾವಣೆಗೆ ಅವಕಾಶ ನೀಡಲಾಗುವುದು ಎಂದರು.


ಇದನ್ನೂ ಓದಿ : ಮಾಸ್ಕ್​ ಧರಿಸದಿದ್ದರೆ ದಂಡ ಜೊತೆಗೆ ಕೊರೋನಾ ಕೇಂದ್ರಗಳಲ್ಲಿ ಸೇವೆ ಸಲ್ಲಿಸುವ ಶಿಕ್ಷೆ; ಗುಜರಾತ್​ ಹೈಕೋರ್ಟ್​


ಹೊಸದಾಗಿ ನೇಮಕಗೊಂಡ ವೃತ್ತಿನಿರತ‌ ಪಿಯು ಉಪನ್ಯಾಸಕರಿಗೆ ನಿರಾಕ್ಷೇಪಣಾ ಪತ್ರಹೊಸದಾಗಿ ನೇಮಕಗೊಂಡ ಸೇವಾ ನಿರತ ಪದವಿ ಪೂರ್ವ ಶಿಕ್ಷಣ ಉಪನ್ಯಾಸಕ ಅಭ್ಯರ್ಥಿಗಳ ಪೈಕಿ ಕೆಲವು ಅಭ್ಯರ್ಥಿಗಳು ನಿರಪೇಕ್ಷಣಾ ಪ್ರಮಾಣ ಪತ್ರಗಳನ್ನ ನೀಡಬೇಕೆಂದು ಆಗ್ರಹ ವ್ಯಕ್ತವಾಗಿದ್ದು, ಕೂಡಲೇ ಈ ಕುರಿತು ಕ್ರಮ ವಹಿಸಬೇಕೆಂದು ಸಚಿವರು ಪಿಯು ಇಲಾಖೆ ನಿರ್ದೇಶಕರಿಗೆ ಸೂಚಿಸಿದರು.


ಆರ್ಥಿಕ ಮಿತವ್ಯಯದ ಹಿನ್ನೆಲೆಯಲ್ಲಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ನೇಮಕಾತಿ ಸ್ಥಗಿತಗೊಂಡಿದ್ದು, ಈ ಸಮಸ್ಯೆಯನ್ನು ಬಗೆಹರಿಸಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ ನೀಡಿದ್ದೇನೆ ಎಂದು ಈ ವೇಳೆ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

Published by:MAshok Kumar
First published: