• Home
  • »
  • News
  • »
  • state
  • »
  • ಶಿಕ್ಷಣವಾಣಿ ಮೂಲಕ ಆನ್​ಲೈನ್​ ಶಿಕ್ಷಣದ ಕುರಿತು ದೂರು ಸಲ್ಲಿಸಲು ಅವಕಾಶ; ಸುರೇಶ್ ಕುಮಾರ್ ಸೂಚನೆ

ಶಿಕ್ಷಣವಾಣಿ ಮೂಲಕ ಆನ್​ಲೈನ್​ ಶಿಕ್ಷಣದ ಕುರಿತು ದೂರು ಸಲ್ಲಿಸಲು ಅವಕಾಶ; ಸುರೇಶ್ ಕುಮಾರ್ ಸೂಚನೆ

ಸಭೆಯಲ್ಲಿ ಸಚಿವ ಸುರೇಶ್​ ಕುಮಾರ್​​

ಸಭೆಯಲ್ಲಿ ಸಚಿವ ಸುರೇಶ್​ ಕುಮಾರ್​​

online class: ಸಾರ್ವಜನಿಕರು ಆನ್‍ಲೈನ್ ಕುರಿತ ದೂರುಗಳನ್ನು ಶಿಕ್ಷಣವಾಣಿ-ಸಹಾಯವಾಣಿಗೆ (18004257302) ಇಲ್ಲವೇ ಸಹಾಯವಾಣಿ ವಾಟ್ಸ್-ಆಪ್ ಸಂಖ್ಯೆ-9483045130) ಸಲ್ಲಿಸಿ ಇಲಾಖೆಯ ಗಮನಕ್ಕೆ ತರಬಹುದು

  • Share this:

ಬೆಂಗಳೂರು (ನ.6): ಕೊರೋನಾ ಸಂಕಷ್ಟದಿಂದ ಆನ್​ಲೈನ್​ ಶಿಕ್ಷಣದ ಮೊರೆ ಹೋಗಿರುವ ಶಾಲಾ-ಕಾಲೇಜ್​ಗಳು ವಿದ್ಯಾರ್ಥಿಗಳ ಮೇಲೆ ಒತ್ತಡ ಹಾಕುತ್ತಿವೆ. ತಂತ್ರಜ್ಞಾನ ಆಧಾರಿತ ಶಿಕ್ಷಣ ಮಕ್ಕಳಲ್ಲಿ ಅನೇಕ ಸಮಸ್ಯೆಗೆ ಕಾರಣವಾಗುತ್ತಿದೆ. ಕಣ್ಣು-ತಲೆ ನೋವಿನಿಂದ ಮಕ್ಕಳು ಬಳಲುತ್ತಿದ್ದಾರೆ. ಅಲ್ಲದೇ ಶಿಕ್ಷಣ ಸಂಸ್ಥೆಗಳು ತಮಗೆ ಬೇಕೆಂದ ಸಮಯದಲ್ಲಿ ಆನ್​ಲೈನ್​ ತರಗತಿ ಮಾಡುತ್ತಿರುವುದು  ಕೂಡ ಸಮಸ್ಯೆಯಾಗಿದೆ. ಈ ರೀತಿ ಸಾಲು ಸಾಲು ಸಮಸ್ಯೆಗಳನ್ನು ಪಟ್ಟಿ ಮಾಡಿ ಪೋಷಕರು ಈ ಕುರಿತು ಕ್ರಮ ಕೈಗೊಳ್ಳುವಂತೆ ಶಿಕ್ಷಣ ಸಚಿವರಿಗೆ, ಇಲಾಖೆಗೆ ದೂರು ಸಲ್ಲಿಸಿದ್ದಾರೆ. ಈ ದೂರುಗಳ ಬಗ್ಗೆ ಈಗಾಗಲೇ ಗಮನಹರಿಸಿರುವ ಶಿಕ್ಷಣ ಇಲಾಖೆ, ಬೋಧನ ಅವಧಿ ಕುರಿತು ಅಧಿಸೂಚನೆ ಹೊರಡಿಸಿದೆ. ಈ ನಡುವೆ ಮತ್ತೆ ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಇದಕ್ಕಾಗಿ ಸಾರ್ವಜನಿಕರಿಗೆ ಸಹಾಯವಾಣಿ ಮೂಲಕ ಗಮನಸೆಳೆಯಲು ಅವಕಾಶ ಕಲ್ಪಿಸಲಾಗಿದೆ. 


ಈ ಕುರಿತು ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್​ ಸುರೇಶ್​ ಕುಮಾರ್, ಆನ್-ಲೈನ್ ಶಿಕ್ಷಣ ನಿರ್ವಹಣೆಗೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣವಾಣಿಗೆ ಫೋನ್​ ಕರೆ  ಮೂಲಕ ದೂರು ದಾಖಲಿಸಬಹುದೆಂದು ತಿಳಿಸಿದರು


ಇದೇ ವೇಳೆ  ಆನ್ಲೈನ್ ಶಿಕ್ಷಣ ಕುರಿತಂತೆ ಹೊರಡಿಸಲಾದ ಸೂಚನೆಗಳನ್ವಯ ಸೂಕ್ತ ಅನುಪಾಲನಾ ವ್ಯವಸ್ಥೆ ಜಾರಿಯಲ್ಲಿಡುವ ಕುರಿತು ಮತ್ತು ಈ ಸುತ್ತೋಲೆಗಳ ಅನುಷ್ಠಾನದಲ್ಲಿ ಇಲಾಖೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿ ಮಾತನಾಡಿದರು.  ಸಾರ್ವಜನಿಕರು ಆನ್‍ಲೈನ್ ಕುರಿತ ದೂರುಗಳನ್ನು ಶಿಕ್ಷಣವಾಣಿ-ಸಹಾಯವಾಣಿಗೆ (18004257302) ಇಲ್ಲವೇ ಸಹಾಯವಾಣಿ ವಾಟ್ಸ್-ಆಪ್ ಸಂಖ್ಯೆ-9483045130) ಸಲ್ಲಿಸಿ ಇಲಾಖೆಯ ಗಮನಕ್ಕೆ ತರುವ ಮೂಲಕ ಸಹಾಯವಾಣಿಯ ಉಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.


ಇಂತಹ ದೂರುಗಳನ್ನು ನಿರ್ವಹಿಸಲು  ಆಯುಕ್ತರ ಕಚೇರಿ ಮತ್ತು ಜಿಲ್ಲಾ ಮಟ್ಟದಲ್ಲಿ ಉಪನಿರ್ದೇಶಕರ ಹಂತದಲ್ಲಿ ಒಬ್ಬೊಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಬೇಕು. ಬೆಂಗಳೂರು, ಕಲ್ಬುರ್ಗಿ, ಬೆಳಗಾವಿ, ಮಂಗಳೂರು, ಹುಬ್ಬಳ್ಳಿ_ಧಾರವಾಡ ಸೇರಿದಂತೆ ಹಲವು ನಗರ ಕೇಂದ್ರಿತ ಪ್ರದೇಶಗಳಲ್ಲಿ ಇಂತಹ ದೂರುಗಳು ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ತಕ್ಷಣ ದೂರಿಗೆ ಸ್ಪಂದಿಸಿ ಪರಿಹಾರ ಸೂಚಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.


ಆನ್-ಲೈನ್ ಶಿಕ್ಷಣವನ್ನು ತಜ್ಞರ ಸಮಿತಿ ಶಿಫಾರಸಿನ ಅನ್ವಯ ಇಲಾಖೆ ಹೊರಡಿಸಿರುವ ಸುತ್ತೋಲೆಗಳನ್ವಯ ವೈಜ್ಞಾನಿಕವಾಗಿಯೇ ನಿರ್ವಹಿಸುವ ಕುರಿತು ಅಗತ್ಯ.  ಬಿಇಒಗಳು ಆನ್-ಲೈನ್ ತರಗತಿಗಳ ಪರಾಮರ್ಶೆ ಮಾಡಬೇಕು. ಕೇಂದ್ರ ಕಚೇರಿಯಲ್ಲಿ ಈ ಕುರಿತ ಮಾಹಿತಿಗಳು ಯಾವುದೇ ಸಂದರ್ಭದಲ್ಲಿಯೂ ದೊರೆಯವಂತಾಗಬೇಕು ಎಂದು ನಿರ್ದೇಶಿಸಿದರು.


ಆನ್ಲೈನ್ ತರಗತಿಗೆ ಅವಧಿ ನಿಗದಿಗೆ ಸೂಚನೆ


ಆನ್ಲೈನ್ ಬೋಧನೆಯನ್ನು ಹಗಲು-ರಾತ್ರಿಯನ್ನದೇ ಯಾವುದೇ ಸಮಯದಲ್ಲೂ ಮಾಡಲಾಗುತ್ತಿದ್ದು, ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಉಂಟಾಗುತ್ತದೆ ಎನ್ನುವ ದೂರುಗಳಿವೆ. ಈ ಹಿನ್ನೆಲೆಯಲ್ಲಿ  ಬೋಧನೆಗೆ ತರಗತಿಗಳ ಅವಧಿಯನ್ನು ನಿಗದಿಪಡಿಸಿದಂತೆ ಆನ್‍ಲೈನ್ ಬೋಧನಾ ಶಾಲಾವಧಿಯನ್ನು ನಿಗದಿಪಡಿಸಬೇಕು.  ಮಕ್ಕಳ ಆರೋಗ್ಯದ ಮೇಲೆ ಪರಿಣಾಮವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಈ ಕುರಿತಂತೆ ಜಿಲ್ಲೆ, ತಾಲೂಕು, ಬಿಆರ್​ಸಿ, ಸಿಆರ್​​ಪಿ ಮಟ್ಟದಲ್ಲಿ ಶಾಲಾವಧಿಯನ್ನು ಗಮನಿಸಲು ಅಗತ್ಯ ಕ್ರಮ ವಹಿಸಬೇಕು. ಹಾಗೆಯೇ ಈ ಕುರಿತ ಸಮಸ್ಯೆಗಳಿದ್ದಲ್ಲಿ ಶಿಕ್ಷಣವಾಣಿ ಸಹಾಯವಾಣಿಗೆ ದೂರುಗಳನ್ನು ಸಲ್ಲಿಸುವ ವ್ಯವಸ್ಥೆ ಮಾಡಬೇಕೆಂದು ಅವರು ಹೇಳಿದರು.


ಇದನ್ನು ಓದಿ: ನ.17ರಿಂದ ಯುಜಿ, ಪಿಜಿ ಕಾಲೇಜು ಆರಂಭ; ಯುಜಿಸಿಯಿಂದ ಮಾರ್ಗಸೂಚಿ ಬಿಡುಗಡೆ


ಯಾವುದೇ ಶಾಲೆಗಳಿರಲಿ ತಮಗೆ ತೋಚಿದ ಅವಧಿಯಲ್ಲಿ ತಮಗೆ ತಿಳಿದಷ್ಟು ಸಮಯ ಆನ್-ಲೈನ್ ಪಾಠ ಮಾಡಲು ಅವಕಾಶ ನೀಡಲಾಗದು. ತಜ್ಞರ ಸಮಿತಿ ನಿಗದಿಪಡಿಸಿರುವ ಸಮಯದಷ್ಟೇ ಅವಧಿಯಲ್ಲಿ ನಿರ್ವಹಿಸಬೇಕು. ಹಾಗೆಯೇ ಆನ್‍ಲೈನ್ ಶಾಲಾವಧಿಯನ್ನು ನಿಗದಿಪಡಿಸಿ ಸುತ್ತೋಲೆ ಹೊರಡಿಸಿ ಈ ಕುರಿತು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಬೇಕೆಂದು ಸಚಿವರು ಆಯುಕ್ತರಿಗೆ ನಿರ್ದೇಶನ ನೀಡಿದರು.


ಎನ್‍ಇಪಿ ಕುರಿತ ತಜ್ಞರ ವರದಿ ಸಲ್ಲಿಕೆ:


ಕೇಂದ್ರದ ನೂತನ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವಲ್ಲಿ ಕರ್ನಾಟಕ ಇಡೀ ರಾಷ್ಟ್ರದಲ್ಲಿ ಮೊದಲನೇ ರಾಜ್ಯವಾಗಲಿದ್ದು, ರಾಜ್ಯದಲ್ಲಿ ನೂತನ ಶಿಕ್ಷಣ ನೀತಿಯ ಅಳವಡಿಕೆಗೆ ಸಂಬಂಧಿಸಿದಂತೆ ನೇಮಿಸಲಾದ ತಜ್ಞರ ಸಮಿತಿ ನ. 7ರಂದು ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಈ ತಜ್ಞರ ವರದಿಯ ಶಿಫಾರಸುಗಳನ್ನು ನೂತನ ಶಿಕ್ಷಣ ನೀತಿಯನ್ವಯ ಶೈಕ್ಷಣಿಕ ಕ್ಷೇತ್ರದಲ್ಲಿ ತೆಗೆದುಕೊಳ್ಳಬಹುದಾದ ನಿರ್ಣಯಗಳಲ್ಲಿ ಅಳವಡಿಸಿಕೊಳ್ಳಲಾಗುವುದು ಇದು ರಾಜ್ಯದ ಶಿಕ್ಷಣದಲ್ಲಿ ಹೊಸ ದಿಕ್ಕನ್ನು ಕಲ್ಪಿಸಲಿದೆ ಎಂದರು

Published by:Seema R
First published: