• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಆಂಧ್ರ ಶಾಲೆಗಳಲ್ಲಿ ಕನ್ನಡ ಉಳಿಸಿ: ಸಿಎಂ ಜಗನ್​​​​ಗೆ ಸಚಿವ ಸುರೇಶ್ ಕುಮಾರ್ ಪತ್ರ

ಆಂಧ್ರ ಶಾಲೆಗಳಲ್ಲಿ ಕನ್ನಡ ಉಳಿಸಿ: ಸಿಎಂ ಜಗನ್​​​​ಗೆ ಸಚಿವ ಸುರೇಶ್ ಕುಮಾರ್ ಪತ್ರ

ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಆಂಧ್ರಪ್ರದೇಶ ಸಿಎಂ ಜಗನ್​​​ ಮೋಹನ್​​ ರೆಡ್ಡಿ

ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಆಂಧ್ರಪ್ರದೇಶ ಸಿಎಂ ಜಗನ್​​​ ಮೋಹನ್​​ ರೆಡ್ಡಿ

ಕರ್ನಾಟಕದಲ್ಲಿ ಹತ್ತಾರು ತೆಲುಗು ಮಾಧ್ಯಮ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ಆದರೆ ಆಂಧ್ರ ಸರ್ಕಾರ ಮಾಡಿರುವ ನಿರ್ಧಾರ, ಕನ್ನಡ ಭಾಷಾ ಶಿಕ್ಷಕರ ಜೀವನವನ್ನು ಅಪಾಯಕ್ಕೆ ಸಿಲುಕಿಸುತ್ತದೆ. ಅಲ್ಲದೆ ಕರ್ನಾಟಕದ ಹೊರಗೆ ವಾಸಿಸುತ್ತಾರೆ ಎಂಬ ಕಾರಣಕ್ಕೆ ಕನ್ನಡಿಗರ ಮಕ್ಕಳು ಮಾತೃ ಭಾಷೆಯಿಂದ ವಂಚಿತರಾಗುತ್ತಾರೆ

ಮುಂದೆ ಓದಿ ...
  • Share this:

ಬೆಂಗಳೂರು(ಜ. 29) : ಆಂಧ್ರ ಪ್ರದೇಶದ ಶಾಲೆಗಳಲ್ಲಿ ತೆಲುಗು ಕಡ್ಡಾಯ ಮಾಡಿರುವುದಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್​ ಆತಂಕ ವ್ಯಕ್ತಪಡಿಸಿದ್ದಾರೆ. ಗಡಿಯಲ್ಲಿರುವ ಕನ್ನಡಿಗರ ಹಿತದೃಷ್ಟಿಯಿಂದ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕೆಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್​​​ಮೋಹನ್ ರೆಡ್ಡಿಯವರಿಗೆ ಪತ್ರವನ್ನೂ ಬರೆದಿದ್ದಾರೆ.


ಈ ಕುರಿತು ಆಂಧ್ರ ಮುಖ್ಯಮಂತ್ರಿ ವೈ.ಎಸ್. ಜಗನ್‌ ಮೋಹನ್ ರೆಡ್ಡಿ ಅವರಿಗೆ ಪತ್ರ ಬರೆದಿರುವ ಶಿಕ್ಷಣ ಸಚಿವರು, ಕರ್ನಾಟಕ ಮತ್ತು ಆಂಧ್ರ ಪ್ರದೇಶ ರಾಜ್ಯಗಳ ಸಂಬಂಧ ಐತಿಹಾಸಿಕವಾದುದು. ಕೃಷ್ಣದೇವರಾಯನ ಕಾಲಕ್ಕಿಂತಲೂ ಮೊದಲಿನಿಂದಲೂ ಈ ಎರಡೂ ರಾಜ್ಯಗಳು ಯಾವಾಗಲೂ ಸಹೋದರ ಸಂಬಂಧದಲ್ಲೇ ನಡೆದುಕೊಂಡು ಬರುತ್ತಿವೆ. ಭಾಷೆ ಸೇರಿದಂತೆ ಎಲ್ಲ ವಿಷಯಗಳಲ್ಲೂ ನಮ್ಮೆರಡು ರಾಜ್ಯಗಳು ಪರಸ್ಪರ ಸೌಹಾರ್ದದಿಂದಲೇ ಇವೆ. ಇದು ಎರಡೂ ರಾಜ್ಯಗಳಿಗೂ ಅಭಿಮಾನದ ಸಂಗತಿಯಾಗಿದೆ ಎಂದು ಹೇಳಿದ್ದಾರೆ


ಆಂಧ್ರ ಪ್ರದೇಶ ರಾಜ್ಯದಲ್ಲಿ ವಿದ್ಯಾರ್ಥಿಗಳು ತೆಲುಗು ಇಲ್ಲವೇ ಉರ್ದು ಭಾಷೆ ಕಲಿಯಬೇಕೆಂದು ಸಿಎಂ ಜಗನಮೋಹನ್​​​ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಈ ನಿರ್ಧಾರ ಎರಡೂ ರಾಜ್ಯಗಳ ಸೌಹಾರ್ದತೆಗೆ ಧಕ್ಕೆ ತರುತ್ತದೆ. ಆಂಧ್ರದ ಗಡಿ ಪ್ರದೇಶದಲ್ಲಿ ವಾಸಿಸುವ ಕನ್ನಡಿಗರ ಮನೋ ಸ್ಥೈರ್ಯದ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.


ಆಂಧ್ರಪ್ರದೇಶ ಸಿಎಂ ವೈ ಎಸ್ ಜಗನಮೋಹನ್​ ರೆಡ್ಡಿಗೆ ಸಚಿವ ಸುರೇಶ್ ಕುಮಾರ್ ಬರೆದ ಪತ್ರ


latter
ಸಚಿವ ಸುರೇಶ್ ಕುಮಾರ ಬರೆದ ಪತ್ರ


ಕರ್ನಾಟಕದಲ್ಲಿ ಹತ್ತಾರು ತೆಲುಗು ಮಾಧ್ಯಮ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ಆದರೆ ಆಂಧ್ರ ಸರ್ಕಾರ ಮಾಡಿರುವ ನಿರ್ಧಾರ, ಕನ್ನಡ ಭಾಷಾ ಶಿಕ್ಷಕರ ಜೀವನವನ್ನು ಅಪಾಯಕ್ಕೆ ಸಿಲುಕಿಸುತ್ತದೆ. ಅಲ್ಲದೆ ಕರ್ನಾಟಕದ ಹೊರಗೆ ವಾಸಿಸುತ್ತಾರೆ ಎಂಬ ಕಾರಣಕ್ಕೆ ಕನ್ನಡಿಗರ ಮಕ್ಕಳು ಮಾತೃ ಭಾಷೆಯಿಂದ ವಂಚಿತರಾಗುತ್ತಾರೆ. ಹಾಗಾಗಿ ಕನ್ನಡ ಭಾಷೆಯಾಗಿ‌‌ ಇಲ್ಲವೇ ಮಾಧ್ಯಮವಾಗಿ ಕಲಿಸುವ ಅಲ್ಪಸಂಖ್ಯಾತ ಭಾಷಾ ಶಾಲೆಗಳನ್ನು ಮುಂದುವರೆಸಬೇಕು ಎಂದು ಪತ್ರದಲ್ಲಿ ಶಿಕ್ಷಣ ಸಚಿವರು ತಿಳಿಸಿದ್ದಾರೆ.


ಇದನ್ನೂ ಓದಿ : ಮೂಲ ಮತ್ತು ವಲಸಿಗರು ಅಂತೇನು ಇಲ್ಲ- ನಮ್ಮ ಪಕ್ಷಕ್ಕೆ ಬಂದ ಮೇಲೆ ಎಲ್ಲರೂ ಕಾಂಗ್ರೆಸ್ಸಿಗರೇ ; ಎಸ್ ಆರ್​ ಪಾಟೀಲ್


ಈ ಮೂಲಕ ತಮ್ಮ ರಾಜ್ಯದಲ್ಲಿ ‌ವಾಸಿಸುವ ಕನ್ನಡಿಗರ ಹಿತಾಸಕ್ತಿ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪತ್ರ ಮುಖೇನ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್  ಮೋಹನ್​ ಅವರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಗ್ರಹಿಸಿದ್ದಾರೆ.

First published: