• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Umesh Katti Death: ಉಮೇಶ್ ಕತ್ತಿ ನಿಧನಕ್ಕೆ ಹೆಚ್​ಡಿಕೆ, ಬಿಎಸ್​ವೈ, ಸಿದ್ದರಾಮಯ್ಯ ಸಂತಾಪ

Umesh Katti Death: ಉಮೇಶ್ ಕತ್ತಿ ನಿಧನಕ್ಕೆ ಹೆಚ್​ಡಿಕೆ, ಬಿಎಸ್​ವೈ, ಸಿದ್ದರಾಮಯ್ಯ ಸಂತಾಪ

ಉಮೇಶ್ ಕತ್ತಿ

ಉಮೇಶ್ ಕತ್ತಿ

ಬೆಳಗ್ಗೆ 10 ಗಂಟೆಗೆ ಸಿಎಂ ಬೆಂಗಳೂರಿನಿಂದ ಬೆಳಗಾವಿಗೆ ವಿಶೇಷ ವಿಮಾನದಲ್ಲಿ ಪ್ರಯಾಣಿಸಲಿದ್ದಾರೆ. ರಾಜಕೀಯ ಗಣ್ಯರು ಕತ್ತಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

  • Share this:

ಸಚಿವ ಉಮೇಶ್ ಕತ್ತಿ ನಿಧನದ (Minister Umesh Katti Death) ಸುದ್ದಿ ಬರ ಸಿಡಿಲಿನಂತೆ ಅಪ್ಪಳಿಸಿದೆ. ನಿನ್ನೆ ರಾತ್ರಿ ಸುದ್ದಿ ತಿಳಿಯುತ್ತಿದ್ದಂತೆ ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ಸೇರಿದಂತೆ ಸಚಿವರು, ಶಾಸಕರು ಆಸ್ಪತ್ರೆಯತ್ತ ದೌಡಾಯಿಸಿದ್ದರು. ಇಂದು ಸಂಜೆ ಬೆಳಗಾವಿ (Belagavi) ಜಿಲ್ಲೆಯ ಬೆಲ್ಲದ ಬಾಗೇವಾಡಿಯಲ್ಲಿ ನಡೆಯುವ ಅಂತ್ಯಕ್ರಿಯೆಯಲ್ಲಿ ಸಿಎಂ ಸೇರಿದಂತೆ ಸಂಪುಟದ ಸಚಿವರು (Cabinet Ministers) ಬಹುತೇಕ ಭಾಗಿಯಾಗಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಸಿಎಂ ಬೆಂಗಳೂರಿನಿಂದ ಬೆಳಗಾವಿಗೆ ವಿಶೇಷ ವಿಮಾನದಲ್ಲಿ ಪ್ರಯಾಣಿಸಲಿದ್ದಾರೆ. ರಾಜಕೀಯ ಗಣ್ಯರು ಕತ್ತಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.


ಹೆಚ್​​ಡಿಕೆ ಕಂಬನಿ


ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವರಾದ ಶ್ರೀ ಉಮೇಶ್ ಕತ್ತಿ ಅವರ ನಿಧನದಿಂದ ನನಗೆ ತೀವ್ರ ಆಘಾತವಾಗಿದೆ. ಜನತಾ ಪರಿವಾರದ ಹಿರಿಯರಾಗಿದ್ದ ಶ್ರೀ ಕತ್ತಿ ಅವರು ಸ್ನೇಹಜೀವಿ ಆಗಿದ್ದರಲ್ಲದೆ, ತಮ್ಮ ನೇರ ನಡೆ ನುಡಿಯಿಂದ ನಮ್ಮೆಲ್ಲರ ಪ್ರೀತಿ ಗೌರವಕ್ಕೆ ಪಾತ್ರರಾಗಿದ್ದರು. ಶ್ರೀ ಉಮೇಶ್ ಕತ್ತಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್. ಡಿ.ಕುಮಾರಸ್ವಾಮಿ (Former CM HD Kumarswamy) ಸಂತಾಪ ಸೂಚಿಸಿದ್ದಾರೆ.


ಸಿದ್ದರಾಮಯ್ಯ ಸಂತಾಪ


ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಚಿವರಾದ ಉಮೇಶ್ ಕತ್ತಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ.  ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬವರ್ಗಕ್ಕೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ (Former CM Siddaramaih) ತಮ್ಮ ಸಂತಾಪವನ್ನು ಸೂಚಿಸಿದ್ದಾರೆ.


Minister Umesh Katti Death Political Leaders condolence message mrq
ಉಮೇಶ್ ಕತ್ತಿ


ಇದನ್ನೂ ಓದಿ:  Umesh Katti Death: ಹೃದಯಾಘಾತದಿಂದ ಉಮೇಶ್ ಕತ್ತಿ ನಿಧನ; ಚಿಕಿತ್ಸೆ ನೀಡಿದ ವೈದ್ಯರು ಹೇಳಿದ್ದೇನು?


ಬಿ.ಎಸ್.ಯಡಿಯೂರಪ್ಪ ಸಂತಾಪ


ಜನಪ್ರಿಯ ಶಾಸಕರು, ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಶ್ರೀ ಉಮೇಶ್​ ಕತ್ತಿ ಅವರು ಹಠಾತ್ ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖ ಮತ್ತು ಆಘಾತವಾಗಿದೆ. ಸುದೀರ್ಘ ಕಾಲ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸಿದ್ದ ಹಿರಿಯ ನಾಯಕ ನಮ್ಮನ್ನಗಲಿರುವುದು ರಾಜ್ಯಕ್ಕೆ ದೊಡ್ದ ನಷ್ಟ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ, ಅವರ ಕುಟುಂಬ ಹಾಗೂ ಅಪಾರ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (Former CM BS Yediyurappa_ ಪ್ರಾರ್ಥಿಸಿದ್ದಾರೆ.


ನೇರ ನುಡಿಯ ನಾಯಕ ಇನ್ನಿಲ್ಲ


ಬಾಯಿ ಮತ್ತು ಹೃದಯದ ಮಧ್ಯೆ ಫಿಲ್ಟರ್ ಇಲ್ಲದೆ, ಮನಸ್ಸಿಗೆ ಅನ್ನಿಸಿದ್ದನ್ನು ನೇರವಾಗಿ  ಹೇಳುತ್ತಿದ್ದ ನೇರ ನುಡಿಯ ನಾಯಕ, ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾವಪೂರ್ಣ ಶ್ರದ್ಧಾಂಜಲಿ ಎಂದು ಸಂಸದ ಪ್ರತಾಪ್ ಸಿಂಹ (MP Pratap Simha) ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.


ಮಾಜಿ ಡಿಸಿಎಂ ಸಂತಾಪ


ಸಚಿವ ಉಮೇಶ್ ಕತ್ತಿಯವರ ಅಕಾಲಿಕ ಮರಣ ನನಗೆ ತೀವ್ರ ನೋವನ್ನುಂಟು ಮಾಡಿದೆ. ಅವರ ಕುಟುಂಬದವರ ಮತ್ತು ಬೆಂಬಲಿಗರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಈ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿ ಅವರ ಆಪ್ತರಿಗೆ ದೊರಕಲಿ ಎಂದು ಆಶಿಸುತ್ತೆನೆ ಎಂದು ಮಾಜಿ ಸಿಎಂ ಡಾ.ಜಿ.ಪರಮೇಶ್ವರ್ ಸಂತಾಪ ಸೂಚಿಸಿದ್ದಾರೆ.


Minister Umesh Katti Death Political Leaders condolence message mrq
ಉಮೇಶ್ ಕತ್ತಿ


ಇದನ್ನೂ ಓದಿ:  Umesh Katti: ನೇರ ನುಡಿಯ ಗಟ್ಟಿ ರಾಜಕಾರಣಿ ಉಮೇಶ್ ಕತ್ತಿ, ಹಿರಿಯ ನಾಯಕನ ಹೆಜ್ಜೆ ಗುರುತು ಇಲ್ಲಿದೆ


ತಂದೆಯ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ

top videos


    ಸ್ವಗ್ರಾಮ ಬೆಲ್ಲದ ಬಾಗೇವಾಡಿಯ ತೋಟದಲ್ಲಿರುವ ತಂದೆ ವಿಶ್ವನಾಥ್ ಅವರ ಸಮಾಧಿ ಪಕ್ಕದಲ್ಲಿಯೇ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಿದ್ದಾರೆ. ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಸಂಪುಟದ ಬಹುತೇಕ ಎಲ್ಲಾ ಸಚಿವರು, ರಾಜಕೀಯ ಮುಖಂಡರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

    First published: