• Home
  • »
  • News
  • »
  • state
  • »
  • V Somanna: ಸಮಸ್ಯೆ ಹೇಳಿಕೊಳ್ಳಲು ಬಂದಿದ್ದೇ ತಪ್ಪಾಯ್ತಾ? ಮಹಿಳೆಯ ಕಪಾಳಕ್ಕೆ ಹೊಡೆದ ಸಚಿವ ಸೋಮಣ್ಣ

V Somanna: ಸಮಸ್ಯೆ ಹೇಳಿಕೊಳ್ಳಲು ಬಂದಿದ್ದೇ ತಪ್ಪಾಯ್ತಾ? ಮಹಿಳೆಯ ಕಪಾಳಕ್ಕೆ ಹೊಡೆದ ಸಚಿವ ಸೋಮಣ್ಣ

ಕಪಾಳಕ್ಕೆ ಹೊಡೆದ ಸಚಿವ ವಿ. ಸೋಮಣ್ಣ

ಕಪಾಳಕ್ಕೆ ಹೊಡೆದ ಸಚಿವ ವಿ. ಸೋಮಣ್ಣ

ಒಂದು ವೇಳೆ ಈ ಘಟನೆ ನಡೆದ್ರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಕಾಲಿಗೆ ಬೀಳಲು ಬಂದಾಗ ತಡೆಯಲು ಹೋದಾಗ ಕೈ ತಾಗಿದೆಯೇ ಹೊರತು ಹೊಡೆದಿಲ್ಲ ಎಂದು ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದ್ದರು.

  • News18 Kannada
  • Last Updated :
  • Karnataka, India
  • Share this:

ಶನಿವಾರ ಸಂಜೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ (Gundlupet, Chamarajangara) ತಾಲೂಕಿನ ಹಂಗಳ ಗ್ರಾಮದಲ್ಲಿ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಮಹಿಳೆಯೊಬ್ಬರು (Woman) ಸಮಸ್ಯೆ ಹೇಳಿಕೊಳ್ಳಲು ವೇದಿಕೆ ಮೇಲೆ ಬಂದಿದ್ದರು. ಮಹಿಳೆ ಸಚಿವರ ಕಾಲಿಗೆ ನಮಸ್ಕಾರ ಮಾಡಲು ಹೋದಾಗ ವಿ ಸೋಮಣ್ಣ (Minister V Somanna) ಕಪಾಳಮೋಕ್ಷ ಮಾಡಿದ್ದಾರೆ. ಈ ಘಟನೆಯಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ನಂತರ ಪೊಲೀಸರು (Police) ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ (Social Media) ವೈರಲ್ (Video Viral) ಆಗಿದ್ದು, ಮಹಿಳೆಗೆ ಗೌರವ ನೀವು ಕೊಡೋದು  ಹೀಗೇನಾ  ಎಂದು ವಿಪಕ್ಷಗಳು ಪ್ರಶ್ನೆ ಮಾಡುತ್ತಿವೆ.  ಘಟನೆ ಬಗ್ಗೆ ನ್ಯೂಸ್ 18 ಕನ್ನಡದ ಜೊತೆ ಮಾತನಾಡಿದ ವಿ ಸೋಮಣ್ಣ, ಕೋಪದಲ್ಲಿಯೇ ವಿಷಾದ ವ್ಯಕ್ತಪಡಿಸುತ್ತೇನೆ ಎಂದರು.


ನಾನು ಹೊಡೆದಿಲ್ಲ, ವಾಸ್ತವಾಂಶ ಬೇರೆ


ನಿನ್ನೆ 173 ಜನಕ್ಕೆ ನಿವೇಶನ ಹಂಚಿಕೆ ಮಾಡಲಾಯ್ತು. ಇನ್ನು 9-10 ಸೈಟ್​ಗಳಿದ್ದು, ಸುಮಾರು 25 ಜನರು ಕೇಳುತ್ತಿದ್ದಾರೆ. ಈ ಮಹಿಳೆ ಐದಾರು ಬಾರಿ ಕಾಲಿಗೆ ನಮಸ್ಕಾರ ಮಾಡಿದರು. ನಾಲ್ಕೂವರೆ ಸಾವಿರ ರೂ. ಯಾರಿಗೋ ಕೊಟ್ಟಿದ್ದೀನಿ ಅಂದ್ರು.  ಆ ವೇಳೆ ನಾನೇ ಹಣ ನೀಡಿದೆ. ನಾನು ಎಲ್ಲಾ ಹೆಣ್ಣು ಮಕ್ಕಳನ್ನು ಸೋದರಿಯ ಭಾವನೆಯಲ್ಲಿ ನೋಡುತ್ತೇನೆ. ಒಂದು ವೇಳೆ ಈ ಘಟನೆ ನಡೆದ್ರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಕಾಲಿಗೆ ಬೀಳಲು ಬಂದಾಗ ತಡೆಯಲು ಹೋದಾಗ ಕೈ ತಾಗಿದೆಯೇ ಹೊರತು ಹೊಡೆದಿಲ್ಲ ಎಂದು ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದ್ದರು.


ನಾನು ಹೇಳೋದನ್ನ ಹೇಳಿದ್ದೀನಿ. ನೀವು ಎಷ್ಟರಮಟ್ಟಿಗೆ ಸ್ವೀಕರಿಸ್ತಿರೋ ಸ್ವೀಕರಿಸಿ. ನಾನು ಈ ಬಗ್ಗೆ ಆಮೇಲೆ ಮಾತನಾಡುತ್ತೇನೆ ಎಂದು ಏರುಧ್ವನಿಯಲ್ಲಿ ಮಾತನಾಡಿ ಕರೆಯನ್ನ ಕಡಿತಗೊಳಿಸಿದರು. ನ್ಯೂಸ್ 18 ಜೊತೆ ಮಾತನಾಡುತ್ತಿರುವಾ ಸಚಿವರ ಪಕ್ಕದಲ್ಲಿಯೇ ಹಲ್ಲೆಗೊಳಗಾದ ಮಹಿಳೆ ಇದ್ದರು.


ಇದನ್ನೂ ಓದಿ:  Loudspeaker: ಧ್ವನಿವರ್ಧಕ ಬಳಕೆಗೆ ಸರ್ಕಾರದಿಂದ ಅನುಮತಿ; ಪ್ರಮೋದ್ ಮುತಾಲಿಕ್ ಹೇಳಿದ್ದು ಹೀಗೆ


ಸಚಿವರ ಮುಂದೆಯೇ ಸ್ಪಷ್ಟನೆ ಹೇಳಿದ ಮಹಿಳೆ


ಇದೇ ವೇಳೆ ನ್ಯೂಸ್​ 18 ಕನ್ನಡದ ಜೊತೆ ಮಾತನಾಡಿದ ಮಹಿಳೆ, ನನ್ನ ಮೇಲೆ ಹಲ್ಲೆ ಆಗಿಲ್ಲ. ನಾನು ಕಾಲಿಗೆ ನಮಸ್ಕಾರ ಮಾಡಲು ಹೋದಾಗ ಸಚಿವರು ತಡೆದರು. ನನ್ನ ಮೇಲೆ ಯಾರೂ ಒತ್ತಡ ಹಾಕಿಲ್ಲ ಎಂದು ಹೇಳಿದರು.‘ರಾಜೀನಾಮೆ ಕೊಟ್ಟು ಮನೆಗೆ ಹೋಗು’


ಚಾಮರಾಜನಗರದಲ್ಲಿ ನಿನ್ನೆ ಸಚಿವ ವಿ‌.ಸೋಮಣ್ಣ ತೋಟಗಾರಿಕೆ ಇಲಾಖೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ರು. ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವ ವಿ‌.ಸೋಮಣ್ಣ ತರಾಟೆಗೆ ತೆಗೆದುಕೊಂಡ್ರು.ನಿನ್ ಮನೆ ಕಾಯೋಗ, ನಿಂಗೆ NDRF ಯಾವ್ದು, SDRF ಯಾವ್ದು ಅಂತಾ ಗೊತ್ತಿಲ್ಲ, ರಾಜೀನಾಮೆ ಕೊಟ್ಟು ಮನೆಗೆ ಹೋಗು ಅಂತ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ್ರು.


Anand Mamani: ಡೆಪ್ಯೂಟಿ ಸ್ಪೀಕರ್ ಆನಂದ್ ಮಾಮನಿ ವಿಧಿವಶ


ಡೆಪ್ಯೂಟಿ ಸ್ಪೀಕರ್ ಆನಂದ್ ಮಾಮನಿ ತಡರಾತ್ರಿ ಸುಮಾರು 12.30ರ ವೇಳೆಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಸವದತ್ತಿ ಕ್ಷೇತ್ರದ ಶಾಸಕರಾಗಿದ್ದ ಆನಂದ್ ಮಾಮನಿ ಅವರು ಕ್ಯಾನ್ಸರ್​​ನಿಂದ ಬಳಲುತ್ತಿದ್ದರು. ಕೆಲ ವಾರಗಳ ಹಿಂದೆ ಚೆನ್ನೈನಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದ ಆನಂದ್ ಮಾಮನಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಇದನ್ನೂ ಓದಿ:  Bangalore University Student: ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರು ವಿವಿ ವಿದ್ಯಾರ್ಥಿನಿ ಶಿಲ್ಪಾ ಸಾವು

 ಇಂದು ಸಂಜೆ ಸ್ವಕ್ಷೇತ್ರದಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ. ವಿಷಯ ತಿಳಿದು ತಡರಾತ್ರಿಯೇ ಆಸ್ಪತ್ರೆಗೆ ಆಗಮಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.

Published by:Mahmadrafik K
First published: