• Home
 • »
 • News
 • »
 • state
 • »
 • ಸಂಪುಟ ವಿಸ್ತರಣೆ ಪ್ರಕ್ರಿಯೆ ಶುರು: ಸಿಎಂ ಬಿ.ಎಸ್​​​ ಯಡಿಯೂರಪ್ಪ ಮನೆಗೆ ಸಚಿವಾಕಾಂಕ್ಷಿಗಳು ದೌಡು

ಸಂಪುಟ ವಿಸ್ತರಣೆ ಪ್ರಕ್ರಿಯೆ ಶುರು: ಸಿಎಂ ಬಿ.ಎಸ್​​​ ಯಡಿಯೂರಪ್ಪ ಮನೆಗೆ ಸಚಿವಾಕಾಂಕ್ಷಿಗಳು ದೌಡು

ಸಿಎಂ ಬಿ.ಎಸ್.ಯಡಿಯೂರಪ್ಪ.

ಸಿಎಂ ಬಿ.ಎಸ್.ಯಡಿಯೂರಪ್ಪ.

ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಲೇ ಇದೆ. ಈಗಾಗಲೇ ಬಿಜೆಪಿ ನೂತನ ಶಾಸಕರು ಬಿ.ಎಸ್​​ ಯಡಿಯೂರಪ್ಪರನ್ನು ಭೇಟಿ ಮಾಡಿ ಈ ಕುರಿತಂತೆ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ.

 • Share this:

  ಬೆಂಗಳೂರು(ಜ.17): ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್​​ ಶಾ ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆಗೆ ಭಾರೀ ಸಿದ್ಧತೆ ನಡೆಸಿಕೊಂಡಿದ್ದಾರೆ. ಈಗಾಗಲೇ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಶುರುವಾಗಿದೆ. ಸಿಎಂ ಯಡಿಯೂರಪ್ಪ ಮನೆಯತ್ತ ಆಕಾಂಕ್ಷಿಗಳ ದಂಡೇ ದೌಡಾಯಿಸಿದೆ. ತಮಗೂ ಮಂತ್ರಿ ಸ್ಥಾನ ನೀಡುವಂತೆ ಬೇಡಿಕೆಯಿಡುತ್ತಿದ್ದಾರೆ. 


  ಹೌದು, ಗುರುವಾರ(ನಿನ್ನೆ) ಶಾಸಕರಾದ ಉಮೇಶ್ ಕತ್ತಿ, ಗೋಪಾಲಯ್ಯ ಸೇರಿದಂತೆ ಹಲವರು ಸಿಎಂ ಮನೆಗೆ ಭೇಟಿ ನೀಡಿದ್ದರು. ಈ ಬೆನ್ನಲ್ಲೀಗ ಬೆಂಗಳೂರು ಗ್ರಾಮಾಂತರ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದ ಎಂಟಿಬಿ ನಾಗರಾಜ್ ಕೂಡ ಯಡಿಯೂರಪ್ಪ ಮನೆಗೆ ಭೇಟಿ ನೀಡಿದ್ದಾರೆ. ಹೇಗಾದರೂ ಸರಿ ತಮ್ಮನ್ನು ವಿಧಾನಪರಿಷತ್ ಸದಸ್ಯರನ್ನಾಗಿಸಿ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ. ಹಾಗಯೇ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಕೂಡ ಸಿಎಂ ಭೇಟಿ ಮಾಡಿದ್ದಾರೆ. ಇನ್ನು ಹಲವರು ಸಿಎಂ ಭೇಟಿ ಮಾಡಿ ತಮಗೂ ಮಂತ್ರಿ ಸ್ಥಾನ ನೀಡುವಂತೆ ಸಾಧ್ಯತೆಗಳು ಹೆಚ್ಚಿವೆ.


  ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಲೇ ಇದೆ. ಈಗಾಗಲೇ ಬಿಜೆಪಿ ನೂತನ ಶಾಸಕರು ಬಿ.ಎಸ್​​ ಯಡಿಯೂರಪ್ಪರನ್ನು ಭೇಟಿ ಮಾಡಿ ಈ ಕುರಿತಂತೆ ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ. ಫೆಬ್ರವರಿ 17ನೇ ತಾರೀಕಿನಂದು ವಿಧಾನಸಭಾ ಜಂಟಿ ಅಧಿವೇಶನ ನಡೆಯಲಿದೆ. ಇದಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಆಗಬೇಕೆಂದು ಸಿಎಂ ಬಿ.ಎಸ್​ ಯಡಿಯೂರಪ್ಪಗೆ ಬಿಜೆಪಿ ನೂತನ ಶಾಸಕರು ಒತ್ತಡ ಹಾಕಿದ್ದಾರೆ.


  ಇದನ್ನೂ ಓದಿ: ನಾಳೆ ರಾಜ್ಯಕ್ಕೆ ಅಮಿತ್​​ ಶಾ: ಬಿಜೆಪಿ ನಾಯಕರೊಂದಿಗೆ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಹತ್ವದ ಚರ್ಚೆ


  ನಾಳೆ ಕೇಂದ್ರ ಗೃಹ ಸಚಿವ ಅಮಿತ್​​ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್​​​ ಹಸಿರು ನಿಶಾನೆ ತೋರುವ ಸಾಧ್ಯತೆ ಇದೆ. ಹಾಗಾಗಿಯೇ ಸಚಿವ ಸಂಪುಟ ವಿಸ್ತರಣೆ ಸಂಬಂಧ ಅಮಿತ್ ಶಾರೊಂದಿಗೆ ಚರ್ಚೆ ನಡೆಸಬೇಕಿರುವ ಕಾರಣ ಯಡಿಯೂರಪ್ಪ ತಮ್ಮೆಲ್ಲಾ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ. ಬಿಜೆಪಿ ಹೈಕಮಾಂಡ್​​ ಅಮಿತ್​​ ಶಾ​​ ಹಸಿರು ನಿಶಾನೆ ತೋರುತ್ತಿದ್ದಂತೆಯೇ ಸಂಪುಟ ವಿಸ್ತರಣೆಯಾಗಲಿದೆ. ಹಾಗಾಗಿ ಸಿಎಂ ನಿವಾಸಕ್ಕೆ ಆಕಾಂಕ್ಷಿಗಳು ಭೇಟಿ ನೀಡಿ ತಮ್ಮನ್ನು ಪರಿಗಣಿಸುವಂತೆ ಮನವಿ ಮಾಡತೊಡಗಿದ್ದಾರೆ.


  ಶನಿವಾರ(ನಾಳೆ) ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್​​ವೊಂದರಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಅಮಿತ್​​ ಶಾ ರಾಜ್ಯ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಪ್ರಮುಖವಾಗಿ ಸಿಎಂ ಯಡಿಯೂರಪ್ಪ ಜತೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.

  Published by:Ganesh Nachikethu
  First published: