ನೂತನ ಸಚಿವರಿಗೆ ನಾಳೆ ಖಾತೆ ಹಂಚಿಕೆ; ಉಮೇಶ್​ ಕತ್ತಿಗೆ ನಿರಾಸೆ ಮಾಡಲ್ಲ; ಸಿಎಂ ಯಡಿಯೂರಪ್ಪ

ಮಾರ್ಚ್​​​ 5 ರಂದು ಬಜೆಟ್ ಮಂಡನೆ ಮಾಡಲಾಗುತ್ತದೆ. ಬಜೆಟ್ ನಲ್ಲಿ ಕೃಷಿ ಹಾಗೂ ನೀರಾವರಿಯ ಯೋಜನೆಗಳಿಗೆ ಹೆಚ್ಚು ಒತ್ತು ಕೊಡಲಾಗುತ್ತದೆ ಎಂದರು. ಬಜೆಟ್ ನಂತರ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ ನೇಮಕ ಮಾಡಲಾಗುತ್ತದೆ ಎಂದು ಬಿಎಸ್​ವೈ ತಿಳಿಸಿದರು.

news18-kannada
Updated:February 9, 2020, 1:02 PM IST
ನೂತನ ಸಚಿವರಿಗೆ ನಾಳೆ ಖಾತೆ ಹಂಚಿಕೆ; ಉಮೇಶ್​ ಕತ್ತಿಗೆ ನಿರಾಸೆ ಮಾಡಲ್ಲ; ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ
  • Share this:
ಶಿವಮೊಗ್ಗ(ಫೆ.09): ನೂತನ ಸಚಿವರಿಗೆ ನಾಳೆ ಬೆಳಗ್ಗೆ ಖಾತೆ ಹಂಚಿಕೆ ಮಾಡುವುದಾಗಿ ಸಿಎಂ ಬಿಎಸ್​ ಯಡಿಯೂರಪ್ಪ ತಿಳಿಸಿದ್ದಾರೆ. ಶಿಕಾರಿಪುರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲ. ನಾಳೆ ಬೆಳಗ್ಗೆ ನೂತನ 10 ಸಚಿವರಿಗೆ ಖಾತೆ ಹಂಚಿಕೆ ಮಾಡುತ್ತೇನೆ ಎಂದರು.

ಉಮೇಶ್ ಕತ್ತಿಗೆ ಸಚಿವ ಸ್ಥಾನ ನೀಡಬೇಕಿತ್ತು. ಮೊದಲ ಪಟ್ಟಿಯಲ್ಲಿಯೇ ಅವರಿಗೆ ಸ್ಥಾನ ನೀಡಬೇಕಿತ್ತು. ಕತ್ತಿ ದೆಹಲಿಯಲ್ಲಿ ಹೈಕಮಾಂಡ್ ಭೇಟಿ ಮಾಡಿ, ಬಳಿಕ ನಮ್ಮ ಮನೆಗೆ ಆಗಮಿಸಿ ನನ್ನ ಬಳಿ ಮಾತನಾಡಿದ್ದಾರೆ. ಅನಿರ್ವಾಯ ಕಾರಣದಿಂದ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಆದರೆ ಮುಂದಿನ ದಿನಗಳಲ್ಲಿ ಉಮೇಶ್​ ಕತ್ತಿಗೆ ಸಚಿವ ಸ್ಥಾನ ನೀಡಲಾಗುತ್ತದೆ.  ಕೊಟ್ಟ ಮಾತಿನಂತೆ ಕತ್ತಿ ಅವರನ್ನು ಮಂತ್ರಿ ಮಾಡಿಯೇ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಕೊರೊನಾ ವೈರಸ್​ ಭೀತಿ; ಬೆಂಗಳೂರಿನಲ್ಲಿ ಡ್ರಂಕ್​ ಆ್ಯಂಡ್ ಡ್ರೈವ್ ತಪಾಸಣೆ ಸ್ಥಗಿತ​​

ಮುಂದುವರೆದ ಅವರು ಶಾಸಕ ಅರಗ ಜ್ಞಾನೇಂದ್ರಗೆ ಮಂತ್ರಿಗಿರಿ ಇಲ್ಲ ಎಂದು ಸ್ಪಷ್ಟಪಡಿಸಿದರು.  "ಶಾಸಕ ಅರಗ ಜ್ಞಾನೇಂದ್ರಗೆ ಅನುಭವವಿದೆ. ಆದರೆ ಅವಕಾಶ ಇಲ್ಲ. ಹೊರಗಿನಿಂದ ಬಂದವರಿಗೆ ಅವಕಾಶ ಕೊಡಬೇಕು. ಹೀಗಾಗಿ ಈ ಬಾರಿ ಅರಗ ಜ್ಞಾನೇಂದ್ರಗೆ ಅವಕಾಶವಿಲ್ಲ. ಆದರೆ ಬೇರೆ ಬೇರೆ ಅಧಿಕಾರ ನೀಡಲಾಗಿದೆ. ಅರಗ ಜ್ಞಾನೇಂದ್ರ ಸೇರಿದಂತೆ ಹಲವರು ಸಚಿವ ಸ್ಥಾನದ ಅಪೇಕ್ಷಿತರಿದ್ದಾರೆ. ಅನಿರ್ವಾಯ ಸ್ಥಿತಿ ಇದೆ ಎಂದು ಎಲ್ಲರಿಗೂ ಮನವರಿಕೆ ಮಾಡಿದ್ದೇನೆ. ಮೂಲ ಬಿಜೆಪಿಗರಿಗೆ ಹಾಗೂ ವಲಸೆ ಬಿಜೆಪಿಗರ ನಡುವೆ ಸಚಿವ ಸ್ಥಾನದ ಬಗ್ಗೆ ಗೊಂದಲವಿಲ್ಲ. ಇದು ಮಾಧ್ಯಮ ಸೃಷ್ಟಿ," ಎಂದು ಹೇಳಿದರು.

ಮಾರ್ಚ್​​​ 5 ರಂದು ಬಜೆಟ್ ಮಂಡನೆ ಮಾಡಲಾಗುತ್ತದೆ. ಬಜೆಟ್ ನಲ್ಲಿ ಕೃಷಿ ಹಾಗೂ ನೀರಾವರಿಯ ಯೋಜನೆಗಳಿಗೆ ಹೆಚ್ಚು ಒತ್ತು ಕೊಡಲಾಗುತ್ತದೆ ಎಂದರು. ಬಜೆಟ್ ನಂತರ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ ನೇಮಕ  ಮಾಡಲಾಗುತ್ತದೆ ಎಂದು ಬಿಎಸ್​ವೈ ತಿಳಿಸಿದರು.

ಕಾವೇರಿ ನದಿಯಲ್ಲಿ ಮಿಂದೆದ್ದು ನಿಮಿಷಾಂಬ ದೇವಿಯ ದರ್ಶನ ಪಡೆದ ಸಾವಿರಾರು ಭಕ್ತರು

ದೇಶದಲ್ಲಿ ಪೌರತ್ವ ಕಾಯ್ದೆ ಯಾವಾಗ ಜಾರಿ ಬರುತ್ತೆ. ಅವಾಗಲೇ ರಾಜ್ಯದಲ್ಲೂ ಜಾರಿಯಾಗಲಿದೆ ಎಂದು ಹೇಳಿದರು. ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿಗೆ ಈಗಾಗಲೇ ಸಂಪುಟದಲ್ಲಿ ತೀರ್ಮಾನ ಕೈಗೊಂಡು ಹೆಚ್ಚುವರಿ 220 ಕೋಟಿ ರೂಪಾಯಿಯನ್ನು ಘೋಷಣೆ ಮಾಡಲಾಗಿದೆ. ಸಾಗರದಲ್ಲಿ ಕೆಎಫ್ ಡಿ ಲ್ಯಾಬ್ ತೆರೆಯುವ ಯೋಜನೆ ಇದೆ ಎಂದರು.
First published: February 9, 2020, 12:59 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading