• Home
  • »
  • News
  • »
  • state
  • »
  • Belagavi: ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಂದ ಚಾಕು ಇರಿತ, ನಾಲ್ವರಿಗೆ ಗಂಭೀರ ಗಾಯ

Belagavi: ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಂದ ಚಾಕು ಇರಿತ, ನಾಲ್ವರಿಗೆ ಗಂಭೀರ ಗಾಯ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಆರೋಪಿ ಬಾಲಕ ಬೈಲಹೊಂಗಲ ಪಟ್ಟಣದ ಮೌನೇಶ್ವರ ನಗರದ ನಿವಾಸಿ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.

  • Share this:

ಹುಡುಗಿಯ ವಿಚಾರಕ್ಕೆ ಅಪ್ರಾಪ್ತ ಬಾಲಕನೋರ್ವ (Minor Boy) ಬುದ್ಧಿ ಹೇಳಿದ್ದ ನಾಲ್ವರಿಗೆ ಚಾಕುವಿನಿಂದ ಇರಿದಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ (Bylahongala, Belagavi) ಪಟ್ಟಣದ ಬಸವೇಶ್ವರ ಕಾಲೋನಿಯಲ್ಲಿ ನಡೆದಿದೆ. ಬಾಲಕಿಯನ್ನು ಚುಡಾಯಿಸಿದ್ದಕ್ಕೆ ಕಾಲೋನಿಯ ಹಿರಿಯರು ಬುದ್ಧಿವಾದ ಹೇಳಿದ್ದರು. ಇದರಿಂದ ಕೋಪಗೊಂಡ 17 ವರ್ಷದ ಬಾಲಕ ಚಾಕುವಿನಿಂದ ಇರಿದಿದ್ದಾನೆ. ಅತಾವುಲ್ಲ ಹುಬ್ಬಳ್ಳಿ, ಮುನೀರ್ ಬೇಪಾರಿ, ರಫೀಕ್ ಕೊರವಿನಕೊಪ್ಪ, ಮೆಹಬೂಬ್ ಹುಬ್ಬಳ್ಳಿ ಗಾಯಗೊಂಡವರು. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಜಿಲ್ಲಾಸ್ಪತ್ರೆಗೆ (Belagavi District Hospital) ರವಾನಿಸಲಾಗಿದೆ. 17 ವರ್ಷದ ಬಾಲಕ, ಬಾಲಕಿ ಮತ್ತು ಗಾಯಾಳುಗಳು ಒಂದೇ ಸಮುದಾಯದವರಾಗಿದ್ದಾರೆ.


ಆರೋಪಿ ಬಾಲಕ ಬೈಲಹೊಂಗಲ ಪಟ್ಟಣದ ಮೌನೇಶ್ವರ ನಗರದ ನಿವಾಸಿ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.


ಶಿವಮೊಗ್ಗ, ಬೈಕ್ ನೀಡಿದ್ದ ಪೋಷಕರಿಗೆ 25 ಸಾವಿರ ದಂಡ


ಅಪ್ರಾಪ್ತ ಬಾಲಕನಿಗೆ ಬೈಕ್ ನೀಡಿದ್ದ ಪೋಷಕರಿಗೆ ನ್ಯಾಯಾಲಯ 25 ಸಾವಿರ ರೂಪಾಯಿ ದಂಡ ವಿಧಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಜೆಎಂಎಫ್​​​ಸಿ ನ್ಯಾಯಾಲಯ ಈ ಆದೇಶ ನೀಡಿದೆ.


16 ವರ್ಷದ ಬಾಲಕನೊಬ್ಬ ಹೆಲೈಟ್ ಧರಿಸದೆ ಬೈಕ್ ಚಲಾಯಿಸುತ್ತಿದ್ದ ಹಿನ್ನೆಲೆ ಸೆಪ್ಟೆಂಬರ್ 18 ರಂದು ಪ್ರಕರಣ ದಾಖಲಾಗಿತ್ತು. ತೀರ್ಥಹಳ್ಳಿಯ ವಿನಾಯಕ ಟಾಕೀಸ್ ಬಳಿ ಆತನನ್ನು ಪೊಲೀಸರು ತಡೆದು ಪ್ರಶ್ನಿಸಿದ್ದರು. ಈ ಸಂಬಂಧ ವಾಹನ ಮಾಲೀಕರ ವಿರುದ್ಧ ಪ್ರಕರಣ ದಾಖಲು ಮಾಡಿದ್ದರು.


ಅಪ್ರಾಪ್ತನಿಗೆ ಬೈಕ್ ಕೊಟ್ಟಿದ್ದಕ್ಕೆ ಆತನ ತಂದೆ ತೀರ್ಥಹಳ್ಳಿಯ ಆಸಿಫ್ ಬಾಷಾ ವಿರುದ್ಧ ಪ್ರಕರಣ ದಾಖಲಾಗಿತ್ತು.  ವಿಚಾರಣೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.  ವಿಚಾರಣೆ ನಡೆಸಿದ ತೀರ್ಥಹಳ್ಳಿ ನ್ಯಾಯಾಲಯದ ನ್ಯಾಯಾಧೀಶರು, ಆಸಿಫ್ ಬಾಷಾಗೆ 25 ಸಾವಿರ ದಂಡ ವಿಧಿಸಿದ್ದಾರೆ.


ಇದನ್ನೂ ಓದಿ: Viral Story: ಪ್ರೇಮಿಗಾಗಿ ಗಡಿ ದಾಟಿ ಬಂದ 83ರ ಅಜ್ಜಿ! ಆಕೆಯನ್ನು ಮದ್ವೆಯಾದ ಹುಡುಗನ ವಯಸ್ಸು 28!


ವಿದ್ಯುತ್ ತಂತಿ ತಗುಲಿ ಓರ್ವ ಸಾವು


ಬ್ಯಾನರ್ ಕಟ್ಟುವ ವೇಳೆ ವಿದ್ಯುತ್ ತಂತಿ ತಗುಲಿ ಓರ್ವ ಸಾವು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿಯ (Beltangay, Dakshina Kannada) ಬಸ್​ ನಿಲ್ದಾಣದ  ಬಳಿ ನಡೆದಿದೆ.  ಪ್ರಶಾಂತ್ ಆಚಾರ್ಯ (32)  ಸಾವಿಗೀಡಾದ ಯುವಕ. ಬಿಎಂಎಸ್ ಸಂಘಟನೆಗೆ ಸೇರಿದ ಬ್ಯಾನರ್ ಕಟ್ಟುತ್ತಿದ್ದ ವೇಳೆ ವಿದ್ಯುತ್ ತಗುಲಿ ಪ್ರಶಾಂತ್ ಸಾವನ್ನಪ್ಪಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಸತೀಶ್ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.


ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ


ಪರೀಕ್ಷೆಯಲ್ಲಿ (Exams) ನಕಲು ಮಾಡ್ತಿದ್ದಕ್ಕೆ ಕ್ಲಾಸ್​ ರೂಮಿನಿಂದ (Class room) ಶಿಕ್ಷಕರು (Teacher) ಹೊರಗೆ ಹಾಕಿದ್ದಕ್ಕೆ 10ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ (SSLC Student) 13ನೇ ಮಹಡಿಯಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ. ಮೋಹಿನ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.


ಮೋಹಿನ್ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಸ್​ಎಸ್​ಎಲ್​ಸಿ ಓದುತ್ತಿದ್ದನು. ಬೆಂಗಳೂರಿನ ನಾಗವಾರ ಬಳಿಯ ಆರ್ ಆರ್ ಸಿಗ್ನೇಚರ್ ಅಪಾರ್ಟ್ಮೆಂಟ್​​​ನ (RR Signature Apartment) 13ನೇ ಮಹಡಿಯಿಂದ ಮೋಹಿನ್ ಹಾರಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾನೆ. ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ.


ಇದನ್ನೂ ಓದಿ:  Instagram Reels: 24 ಗಂಟೆ ರೀಲ್ಸ್‌ನಲ್ಲೇ ಕಾಲ ಕಳಿತಾಳೆ ಅಂತ ಹೆಂಡ್ತಿಗೆ ಹೊಡೆದ ಗಂಡ! ರೀಲ್ ಅಲ್ಲ ರಿಯಲ್ ಆಗೇ ನಡೀತು ಮರ್ಡರ್!


ಮಂಗಳವಾರ ಶಾಲೆಯಲ್ಲಿ ಮಧ್ಯಂತರ ಪರೀಕ್ಷೆಗಳು ನಡೆಯುತ್ತಿದ್ದವು. ಈ ವೇಳೆ ಮೋಹಿನ್ ನಕಲು ಮಾಡುತ್ತಿರುವಾಗ ಸಿಕ್ಕಿದ್ದಾನೆ. ಶಿಕ್ಷಕರು ಮೋಹಿನ್​ನನ್ನು ಕ್ಲಾಸ್​​ ರೂಮ್​ನಿಂದ ಹೊರಗೆ ಕಳುಹಿಸಿದ್ದಾರೆ. ಇದರಿಂದ ನೊಂದ ಮೋಹಿನ್ ಬೆಳಗ್ಗೆ 11 ಗಂಟೆಗೆ ಶಾಲೆಯಿಂದ ಹೊರಗೆ ಬಂದಿದ್ದಾನೆ. ತನ್ನ ಮನೆ ಎದುರಿನ ಅಪಾರ್ಟ್​ಮೆಂಟ್ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.

Published by:Mahmadrafik K
First published: