ಮಾವನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ: ಗರ್ಭ ಧರಿಸಿದ ನಂತರ ಪ್ರಕರಣ ಬಯಲು

news18
Updated:July 11, 2018, 7:52 PM IST
ಮಾವನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ: ಗರ್ಭ ಧರಿಸಿದ ನಂತರ ಪ್ರಕರಣ ಬಯಲು
news18
Updated: July 11, 2018, 7:52 PM IST
ಶಿವರಾಮ ಅಸುಂಡಿ, ನ್ಯೂಸ್ 18 ಕನ್ನಡ

ಕಲಬುರ್ಗಿ (ಜುಲೈ 11): ಅಪ್ರಾಪ್ತ ಬಾಲಕಿಯ ಮೇಲೆ ಮಾವನೇ ಅತ್ಯಾಚಾರ ಮಾಡಿದ ಘಟನೆ ಕಲಬುರ್ಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಲಕ್ಷ್ಮಿಪುರ ವಾಡಿಯಲ್ಲಿ ಬೆಳಕಿಗೆ ಬಂದಿದೆ.

ಬಾಲಕಿಯ ಮಾವ ಶಿವ ರಾಥೋಡ್​ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಆಗಾಗ ಬಾಲಕಿಯನ್ನು ಚುಡಾಯಿಸುತ್ತಿದ್ದರೂ ಮಾವ ಎಂಬ ಕಾರಣಕ್ಕೆ ಬಾಲಕಿ ಸುಮ್ಮನಾಗಿದ್ದಳು. ಆದರೆ, ಒಂದು ದಿನ ಮನೆಯೊಳಗೆ ನುಗ್ಗಿದ್ದ ಆರೋಪಿ, ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ. ಈ ವಿಷಯವನ್ನು ಪೋಷಕರಿಗೆ ಹೇಳಿದರೆ ಕೊಲೆ ಮಾಡುವುದಾಗಿ ಶಿವ ರಾಥೋಡ್​ ಬೆದರಿಕೆ ಹಾಕಿದ್ದ ಎಂದು ಬಾಲಕಿ ಹೇಳಿಕೆ ನೀಡಿದ್ದಾಳೆ.

ಹೀಗೆ ಬೆದರಿಸಿ ಸತತ ನಾಲ್ಕು ದಿನಗಳ ಕಾಲ ಅತ್ಯಾಚಾರ ಎಸಗಿದ್ದಾನೆ  ಎಂದು ಬಾಲಕಿ ಆರೋಪಿಸಿದ್ದಾಳೆ.  ಬಾಲಕಿ ಗರ್ಭಿಣಿಯಾದ ನಂತರ ಅತ್ಯಾಚಾರ ಪ್ರಕರಣ ಬಹಿರಂಗಗೊಂಡಿದೆ. ಪೋಷಕರು ಶಿವ ರಾಥೋಡ್​ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಕುರಿತು ಕಲಬುರ್ಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
First published:July 11, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...