ಹಾಸನ: ನಗರದ ಕೆ.ಆರ್ ಪುರಂ ಬಡಾವಣೆಯ (KR Puram Badavane) ಡಿಟಿಡಿಸಿ ಕೊರಿಯರ್ ಶಾಪ್ನಲ್ಲಿ (Courier Shop) ಪಾರ್ಸಲ್ ಬಂದಿದ್ದ ಮಿಕ್ಸಿ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಕೊರಿಯರ್ ಶಾಪ್ ಮಾಲೀಕ ಶಶಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಗೊಂಡಿರುವ ಮಾಲೀಕರನ್ನು ಹಾಸನದ (Hassan) ಖಾಸಗಿ ಆಸ್ಪತ್ರೆಗೆ (Private Hospital) ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಫೋರೆನ್ಸಿಕ್ ತಂಡ ಕೂಡ ಸ್ಥಳಕ್ಕೆ ಆಗಮಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಎರಡು ದಿನಗಳ ಹಿಂದೆ ಡಿಟಿಡಿಸಿ ಕೊರಿಯರ್ ಗೆ ಮಿಕ್ಸಿ ಪಾರ್ಸಲ್ ಬಂದಿತ್ತು ಎನ್ನಲಾಗಿದೆ. ಅದನ್ನು ನಗರದ ವ್ಯಕ್ತಿಯೊಬ್ಬರಿಗೆ ಮಿಕ್ಸಿ ಡೆಲಿವರಿ ಮಾಡಿದ್ದರಂತೆ. ಎರಡು ದಿನಗಳ ಬಳಿಕ ಮಿಕ್ಸಿ ಸೂಕ್ತ ವಿಳಾಸದಿಂದ ಬಂದಿಲ್ಲ ಎಂದು ವ್ಯಕ್ತಿ ಕೊರಿಯರ್ ಗೆ ವಾಪಸ್ ನೀಡಿದ್ದರಂತೆ. ವಾಪಸ್ ಪಡೆಯೋ ವೇಳೆ ಮಿಕ್ಸಿ ಆನ್ ಮಾಡಿ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದೆಯಂತೆ. ಸ್ಫೋಟದ ತೀವೃತೆಗೆ ಕೊರಿಯರ್ ಕಚೇರಿಯ ಗ್ಲಾಸ್ ಪುಡಿಪುಡಿಯಾಗಿದ್ದು, ಗೋಡೆಗಳಿಗೂ ಹಾನಿಯಾಗಿದೆ. ಇನ್ನು, ಮಾಲೀಕರಾದ ಶಶಿ ಅವರ ಬಲಗೈಗೆ ಗಂಭೀರ ಗಾಯವಾಗಿದ್ದು, ಹೊಟ್ಟೆ, ತಲೆಯ ಭಾಗಕ್ಕೂ ಪೆಟ್ಟು ಬಿದ್ದಿದೆ. ಸದ್ಯ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಂಜೆ 7:30 ಸುಮಾರಿಗೆ ನಡೆದಿರೋ ಘಟನೆ
ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಎಸ್ಪಿ ಹರಿರಾಮ್ ಶಂಕರ್, ಕೆಆರ್ ಪುರಂನ ಡಿಟಿಡಿಸಿ ಕೊರಿಯರ್ ಶಾಪ್ನಲ್ಲಿ ಮಿಕ್ಸಿ ಬ್ಲಾಸ್ಟ್ ಆಗಿದೆ. ಸಂಜೆ 7:30ರ ವೇಳೆಗೆ ಘಟನೆ ನಡೆದಿದ್ದು, ಕೊರಿಯರ್ ಬಂದಿದ್ದ ಮಿಕ್ಸಿ ಬ್ಲಾಸ್ಟ್ ಆಗಿದೆ ಎನ್ನುವ ಮಾಹಿತಿ ಇದೆ. ಮಿಕ್ಸಿಯನ್ನು ಆನ್ ಮಾಡಿದಾಗ ಬ್ಲಾಸ್ಟ್ ಆಗಿದೆ ಎಂದು ಹೇಳಲಾಗುತ್ತಿದೆ, ಆನ್ ಮಾಡದೆಯೇ ಬ್ಲಾಸ್ಟ್ ಆಗಿದೆ ಎಂದೂ ಹೇಳಲಾಗುತ್ತಿದೆ. ಈ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೇವೆ.
ಕೊರಿಯರ್ ಆಫೀಸ್ ನಲ್ಲಿ ಕೆಲಸ ಮಾಡೋ ವ್ಯಕ್ತಿಗೆ ದೇಹದ ನಾಲ್ಕು ಭಾಗದಲ್ಲಿ ಪೆಟ್ಟಾಗಿದೆ. ಗಾಯಾಳುವಿಗೆ ಯಾವುದೇ ಪ್ರಾಣಾಪಾಯ ಇಲ್ಲ. ಬ್ಲಾಸ್ಟ್ ಅದ ಮಿಕ್ಸಿಯ ಬ್ಲೇಡ್ ಹಾಗೂ ಭಾಗಗಳೇ ತಾಗಿ ಪೆಟ್ಟಾಗಿದ್ದು, ಬ್ಲಾಸ್ಟ್ಗೆ ಬೇರೆ ಏನೂ ಕಾರಣವಿದೆ ಎಂದು ಕಂಡು ಬಂದಿಲ್ಲ. ಮೈಸೂರಿನಿಂದ ಎಫ್.ಎಸ್.ಎಲ್ ತಂಡದವರು ಆಗಮಿಸುತ್ತಿದ್ದಾರೆ. ಮಿಕ್ಸಿ ಯಾಕೆ ಮತ್ತು ಹೇಗೆ ಬ್ಲಾಸ್ಟ್ ಆಗಿದೆ ಎಂದು ಪರಿಶೀಲನೆ ನಡೆಯುತ್ತೆ.
ಊಹಾಪೋಹಗಳಿಗೆ ಒಳಗಾಗಿ ಗೊಂದಲ ಆಗೋದು ಬೇಡ
ಕೊರಿಯರ್ ಎಲ್ಲಿಂದ ಬಂತು ಎನ್ನೋ ಮಾಹಿತಿ ಇದೆ. ಎಲ್ಲವನ್ನೂ ನಾವು ಪರಿಶೀಲನೆ ನಡೆಸುತ್ತಿದ್ದೇವೆ. ಯಾರೂ ಊಹಾಪೋಹಗಳಿಗೆ ಒಳಗಾಗಿ ಗೊಂದಲ ಆಗೋದು ಬೇಡ. ಶಾರ್ಟ್ ಸರ್ಕ್ಯೂಟ್ ಆಗಿದೆಯೋ, ಬೇರೆ ಏನಾದ್ರು ಇದೆಯೋ ಪರಿಶೀಲನೆ ನಡೆಸುತ್ತೇವೆ. ಎಲ್ಲಿಂದ ಯಾರಿಗೆ ಕೊರಿಯರ್ ಬಂದಿತ್ತು ಎಂದು ತನಿಖೆ ಬಳಿಕ ಗೊತ್ತಾಗಲಿದೆ. ಯಾವುದೇ ಆತಂಕ ಸದ್ಯಕ್ಕೆ ಇಲ್ಲ. ಎಫ್.ಎಸ್.ಎಲ್ ನವರು ಬಂದು ವೈಜ್ಞಾನಿಕ ಸಾಕ್ಷ್ಯ ಪಡೆದ ಬಳಿಕ ಎಲ್ಲವೂ ಗೊತ್ತಾಗುತ್ತೆ ಎಂದು ತಿಳಿಸಿದರು.
ಅಪ್ರಾಪ್ತ ಬಾಲಕಿ ಅತ್ಯಾಚಾರ; ಅಪರಾಧಿಗೆ 30 ವರ್ಷ ಜೈಲು
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಕಲಬುರಗಿ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯ (Kalaburagi District Special POCSO Court) 30 ವರ್ಷ ಜೈಲು ಶಿಕ್ಷೆ ಮತ್ತು 20 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ. ಅಪರಾಧಿ ಪೀರಪ್ಪ ಕಡಗಂಚಿಗೆ ಪೋಕ್ಸೊ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ. 2020ರ ಜೂನ್ 17ರಂದು ಕಲಬುರಗಿ ನಗರ ಮಹಿಳಾ ಪೊಲೀಸ್ ಠಾಣಾ (Kalaburagi Nagar Women Police Station) ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಮನೆಯಲ್ಲಿ ಯಾರು ಇಲ್ಲದಿದ್ದಾಗ ಒಳನುಗ್ಗಿದ್ದ ಅಪರಾಧಿ, ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಪ್ರಕರಣದ ತನಿಖಾಧಿಕಾರಿ ಸಂಗಮೇಶ ಪಾಟೀಲ್ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ