G.T.Devegowda: ಶಾಸಕ ಜಿ.ಟಿ.ದೇವೇಗೌಡರ ಮೊಮ್ಮಗಳು ನಿಧನ - ಅನಾರೋಗ್ಯದಿಂದ ಕೊನೆಯುಸಿರೆಳೆದ 3 ವರ್ಷದ ಕಂದಮ್ಮ

G.T. Devegowda: ಇನ್ನು ಮೈಸೂರು ತಾಲೂಕಿನ ಗುಂಗಾಲ್ ಛತ್ರದ ತೋಟದ ಮನೆಯಲ್ಲಿ ಭಾನುವಾರ ಮಧ್ಯಾಹ್ನ 12ಕ್ಕೆ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿದ್ದು,

ಶಾಸಕ ಜಿ.ಟಿ.ದೇವೇಗೌಡ

ಶಾಸಕ ಜಿ.ಟಿ.ದೇವೇಗೌಡ

  • Share this:
ಮೈಸೂರಿನ (Mysuru) ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಟಿ ದೇವೇಗೌಡ (G.T. Devegowda)  ಮನೆಯಲ್ಲಿ ನೋವಿನ ಘಟನೆ ನಡೆದಿದ್ದು, ಶಾಸಕರ ಮಗ ಹಾಗೂ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ. ಹರೀಶ್ ಗೌಡ (Harish Gowda) ಅವರ 3 ವರ್ಷ ಕಂದಮ್ಮ ಅನಾರೋಗ್ಯದಿಂದ (Health Problem) ನಿಧನ ಹೊಂದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪಿದ್ದಾಳೆ ಎಂದು ತಿಳಿದುಬಂದಿದೆ. ಗೌರಿ (Gowri) ಮೃತ ದುರ್ದೈವಿಯಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಮಗುವನ್ನು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮಧ್ಯರಾತ್ರಿ ಮಗು ಸಾವನ್ನಪ್ಪಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಇನ್ನು ಮೈಸೂರು ತಾಲೂಕಿನ ಗುಂಗಾಲ್ ಛತ್ರದ ತೋಟದ ಮನೆಯಲ್ಲಿ ಭಾನುವಾರ ಮಧ್ಯಾಹ್ನ 12ಕ್ಕೆ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿದ್ದು, ನಾಯಕರ ಮೊಮ್ಮಗಳ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಭಾರೀ ಮಳೆಯಿಂದ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು! ಇನ್ನೂ 3 ದಿನ ಇದೆ ವರುಣನ ಅಬ್ಬರಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಅವರು, ಮಾಜಿ ಮಂತ್ರಿಗಳಾದ ಶ್ರೀ ಜಿ.ಟಿ.ದೇವೇಗೌಡರ ಮೊಮ್ಮಗಳು, ಮೂರು ವರ್ಷದ ಹಸುಗೂಸು ಗೌರಿ ಅನಾರೋಗ್ಯದಿಂದ ಅಸುನೀಗಿರುವ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ಮುದ್ದು ಕಂದಳ ಅಗಲಿಕೆ ನನಗೆ ಬಹಳ ದುಃಖ ಉಂಟು ಮಾಡಿದೆ. ಕುಟುಂಬಸ್ಥರಿಗೆ ದೇವರು ನೋವು ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದಿಂದ ರಾಜ್ಯಸಭೆ ಪ್ರವೇಶಿಸುತ್ತಾರಾ ಪ್ರಿಯಾಂಕಾ ಗಾಂಧಿ? ಕಾಂಗ್ರೆಸ್ ನಾಯಕಿಗೆ ಡಿಕೆಶಿ ಆಹ್ವಾನ

ಮಾಜಿ ಶಾಸಕ ಜಿಟಿ ದೇವೇಗೌಡರು ಮೈಸೂರಿನ ಪ್ರಭಾವಿ ಶಾಸಕರು ಮಾತ್ರವಲ್ಲದೇ ಜನರ ಸೇವೆಗೆ ಹೆಸರುವಾಸಿಯಾಗಿದ್ದವರು. ಮೊಮ್ಮಗಳ ಸಾವಿನಿಂದ ಅವರ ಕುಟುಂಬ ಈಗ ನೋವಿನಲ್ಲಿದ್ದು, ಮೈಸೂರಿನ ಜನರು ಸಹ ಸಂತಾಪ ಸೂಚಿಸಿದ್ದಾರೆ.
Published by:Sandhya M
First published: