• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Congress: ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕರ ಬಲ 135 ಅಲ್ಲ 136; ಪ್ಲಸ್ 1 ಆಗಿದ್ದೇಗೆ?

Congress: ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕರ ಬಲ 135 ಅಲ್ಲ 136; ಪ್ಲಸ್ 1 ಆಗಿದ್ದೇಗೆ?

ಕರ್ನಾಟಕ ವಿಧಾನಸಭೆ

ಕರ್ನಾಟಕ ವಿಧಾನಸಭೆ

Latha Mallikarjun: ಬಿಜೆಪಿ ಅಭ್ಯರ್ಥಿ ಕರುಣಾಕರ ರೆಡ್ಡಿ ಅವರ ವಿರುದ್ಧ 13,845 ಮತಗಳಿಂದ ಗೆದ್ದು, ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಲತಾ ಮಲ್ಲಿಕಾರ್ಜುನ್ ದಿವಂಗತ ಉಪ ಮುಖ್ಯಮಂತ್ರಿ ಎಂಪಿ ಪ್ರಕಾಶ್ ಅವರ ಪುತ್ರಿಯಾಗಿದ್ದಾರೆ.

  • News18 Kannada
  • 3-MIN READ
  • Last Updated :
  • Karnataka, India
  • Share this:

ಬೆಂಗಳೂರು: 224ರಲ್ಲಿ 135 ವಿಧಾನಸಭಾ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಕಾಂಗ್ರೆಸ್ ಸರ್ಕಾರ (Congress Government) ರಚನೆ ಮಾಡಿದೆ. ಈಗ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ದಾಖಲಿಸಿರುವ ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ್ (MLA Lata Mallikarjun) ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರಿದರು.  ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ (CLP Meeting) ಲತಾ ಮಲ್ಲಿಕಾರ್ಜುನ್ ಪಕ್ಷದ ಸದಸ್ಯತ್ವವನ್ನು ಪಡೆದುಕೊಂಡರು. ಲತಾ ಅವರ ಸೇರ್ಪಡೆಯನ್ನು ಕಾಂಗ್ರೆಸ್ ಶಾಸಕಾಂಗ ನಾಯಕ, ಸಿಎಂ ಸಿದ್ದರಾಮಯ್ಯ ಅವರು ಇದನ್ನು ಅನುಮೋದಿಸಿದರು. ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆ ಲತಾ ಮಲ್ಲಿಕಾರ್ಜುನ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ರು.


ಬಿಜೆಪಿ ಅಭ್ಯರ್ಥಿ ಕರುಣಾಕರ ರೆಡ್ಡಿ ಅವರ ವಿರುದ್ಧ 13,845 ಮತಗಳಿಂದ ಗೆದ್ದು, ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಲತಾ ಮಲ್ಲಿಕಾರ್ಜುನ್ ದಿವಂಗತ ಉಪ ಮುಖ್ಯಮಂತ್ರಿ ಎಂಪಿ ಪ್ರಕಾಶ್ ಅವರ ಪುತ್ರಿಯಾಗಿದ್ದಾರೆ. ಲತಾ ಮಲ್ಲಿಕಾರ್ಜುನ್ ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ.


ಶಾಸಕ ಡಾ.ರಂಗನಾಥ್ ಗ್ರಾಮ ವಾಸ್ತವ್ಯ


ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಭರ್ಜರಿ ಬಹುಮತ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಾಳಯದಲ್ಲಿ ಉತ್ಸಾಹ ಹೆಚ್ಚಾಗಿದೆ.




ಮುಂಬರುವ ಚುನಾವಣೆಗಳಿಗೆ ಈಗಲೇ ತಯಾರಿ ಶುರು ಮಾಡಿರುವ ಕುಣಿಗಲ್ ಶಾಸಕ ಡಾ.ರಂಗನಾಥ್, ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ಕುಣಿಗಲ್ ತಾಲೂಕಿನ ಹೇರೂರು ಗ್ರಾಮದಲ್ಲಿ ವಾಸ್ತವ್ಯ ಮಾಡಿದ್ದಾರೆ.


ಆರತಕ್ಷತೆ ಊಟ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ


ಆರಕ್ಷತೆಯ ಕಾರ್ಯಕ್ರಮದ ಊಟ ಸೇವಿಸಿ 50ಕ್ಕೂ ಅಧಿಕ ಜನರು ಅಸ್ವಸ್ಥರಾಗಿರುವ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲ್ಲೂಕಿನ ಚಪ್ಪರದಹಳ್ಳಿ ಗ್ರಾಮದಲ್ಲಿ ನಡೆದಿದೆ.


ಇದನ್ನೂ ಓದಿ:  Karnataka Politics: ಬಿಜೆಪಿ ನಿದ್ದೆಗೆಡಿಸಿದ ಕಾಂಗ್ರೆಸ್​; ತನಿಖಾಸ್ತ್ರದ ಮೊದಲ ಹೆಜ್ಜೆ ಇರಿಸಿದ ಸಿದ್ದು ಸರ್ಕಾರ


ಶಂಕ್ರಪ್ಪ ಹಿತ್ತಲಮನಿ ಎಂಬುವರ ಮಗಳ ಆರಕ್ಷತೆಯಲ್ಲಿ ಊಟ ಮಾಡಿದ ಹಲವರಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ಇನ್ನು ಕೆಲವರು ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಅವರನ್ನು ರಟ್ಟಿಹಳ್ಳಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ

top videos
    First published: