ಧಾರವಾಡ(ಆ.28): ಬೆಳಗಾವಿ ಪೀರನವಾಡಿ ಪುತ್ಥಳಿ ಗಲಾಟೆ ದುರದೃಷ್ಟಕರ. ಈ ವಿಷಯದಲ್ಲಿ ಸರ್ಕಾರ ಮಧ್ಯಪ್ರವೇಶಿಸಿ ಪರಿಹರಿಸಬೇಕು ಎಂದು ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆಗ್ರಹಿಸಿದರು.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್ ರಾಯಣ್ಣನ ತ್ಯಾಗ ಬಲಿದಾನ ಒಂದಡೆ, ದೇಶ ಒಗ್ಗೂಡಿಸಿದ ಶಿವಾಜಿ ಮಹಾರಾಜ ಮತ್ತೊಂದಡೆ. ಈ ಇಬ್ಬರು ವಿಶ್ವಮಾನವರು. ರಾಜ್ಯದಲ್ಲಿ ಪುತ್ಥಳಿ ರಾಜಕಾರಣಕ್ಕೆ ಅವಕಾಶ ನೀಡಬಾರದೆಂದು ಮನವಿ ಮಾಡಿದರು.
ಇಬ್ಬರು ಮಹನೀಯರು ದೇಶಕ್ಕಾಗಿ ದುಡಿದ ವೀರ ಪುತ್ರರು. ಈ ಮಹನೀಯರ ವಿಷಯದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ಸಂಬಂಧಿಸಿದವರು ಶಾಂತ ರೀತಿಯಲ್ಲಿ ಸಂಧಾನ ಸಭೆ ನಡೆಸಿ ಇತ್ಯರ್ಥಪಡಿಸಿಕೊಳ್ಳಲು ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಬೇಕಿದೆ. ಆದರೆ ಈ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜಕೀಯ ಮಾಡಬಾರದು ಎಂದು ಆಗ್ರಹಿಸಿದರು.
ಎಂಇಎಸ್ ಕೃತ್ಯದ ಬಗ್ಗೆ ಪ್ರತಿಕ್ರಿಸಿದ ಅವರು, ನಾನು ಮೊದಲಿಂದಲೂ ಎಂಇಎಸ್ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದೇನೆ. ನಾವೆಲ್ಲ ಅವರ ಪುಂಡಾಟಿಕೆ ಕಣ್ಣಾರೆ ಖಂಡಿದ್ದೇವೆ. ಅವರ ಕೃತ್ಯಗಳನ್ನು ಉಗ್ರವಾಗಿ ಖಂಡಿಸಿವುದಾಗಿ ಹೇಳಿದರು.
ಇದನ್ನೂ ಓದಿ: ‘ರಾಜ್ಯ ಬಿಜೆಪಿ ಸರ್ಕಾರದ ಮೇಲೆ ಮುನಿಸಿಕೊಂಡ ಕೇಂದ್ರ ಸರ್ಕಾರ‘ - ಮಾಜಿ ಸಚಿವ ಸತೀಶ್ ಜಾರಕಿಹೊಳಿ
ಇತ್ತ ಕನ್ನಡ ಪರ ಸಂಘಟನೆಗಳು, ರಾಯಣ್ಣ ಅಭಿಯಾನಿಗಳು ರಾತ್ರೋ ರಾತ್ರಿ ಮೂರ್ತಿಯನ್ನು ಪೀರನವಾಡಿಯಲ್ಲಿ ಪ್ರತಿಷ್ಠಾಪನೆ ಮಾಡಿದ್ದಾರೆ. ಇದರ ಪರಿಣಾಮ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಈಗ ಪರಿಸ್ಥಿತಿ ನಿಯಂತ್ರಣ ಮಾಡಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ