ಸೋತವರಿಗೂ ಮಂತ್ರಿ ಸ್ಥಾನ ನೀಡಬೇಕು, ಬಿಜೆಪಿ ಮಾತು ಕೊಟ್ಟಂತೆ ನಡೆದುಕೊಳ್ಳುವ ವಿಶ್ವಾಸ ಇದೆ; ನಾರಾಯಣ ಗೌಡ

ಒಂದೆರಡು ದಿನ ವ್ಯಾತ್ಯಾಸವಾದರೂ ಅಡ್ಡಿಯಿಲ್ಲ. ಆದರೆ, ಉಪ ಚುನಾವಣೆಯಲ್ಲಿ ಸೋಲನುಭವಿಸಿರುವ ಶಾಸಕರನ್ನೂ ಸೇರಿ ಎಲ್ಲಾ 17 ಶಾಸಕರಿಗೂ ಸಚಿವ ಸ್ಥಾನ ನೀಡಬೇಕು. ನಾವೆಲ್ಲರೂ ಒಟ್ಟಾಗಿಯೇ ಇದ್ದೇವೆ. ಹೀಗಾಗಿ ಬಿಜೆಪಿ ಮತ್ತು ಸಿಎಂ ಯಡಿಯೂರಪ್ಪ ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ವಿಶ್ವಾಸ ಇದೆ ಎಂದು ಶಾಸಕ ನಾರಾಯಣ ಗೌಡ ತಿಳಿಸಿದ್ದಾರೆ.

ಸಚಿವ ನಾರಾಯಣ ಗೌಡ.

ಸಚಿವ ನಾರಾಯಣ ಗೌಡ.

  • Share this:
ಬೆಂಗಳೂರು (ಜನವರಿ 29); ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ, ಬಿಜೆಪಿ ಹಾಗೂ ಸಿಎಂ ಬಿ.ಎಸ್. ಯಡಿಯೂರಪ್ಪ ಕೊಟ್ಟ ಮಾತಿನಂತೆ ಉಪ ಚುನಾವಣೆಯಲ್ಲಿ ಸೋಲನುಭವಿಸಿದ ಶಾಸಕರೂ ಸೇರಿದಂತೆ ಎಲ್ಲಾ 17 ಜನರಿಗೂ ಸಚಿವ ಸ್ಥಾನ ನೀಡುವ ವಿಶ್ವಾಸ ಇದೆ ಕೆ.ಆರ್. ಪೇಟೆ ಶಾಸಕ ನಾರಾಯಣ್ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ಕುರಿತು ಇಂದು ವಿಧಾನಸೌಧದಲ್ಲಿ ಮಾತನಾಡಿರುವ ಶಾಸಕ ನಾರಾಯಣ ಗೌಡ, “ಸಿಎಂ ಯಡಿಯೂರಪ್ಪ ನಾಳೆ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರ ಜೊತೆ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಲಿದ್ದಾರೆ. ಹೀಗಾಗಿ ಶೀಘ್ರದಲ್ಲೇ ಸಂಪುಟ ವಿಸ್ತರಣೆಯಾಗಲಿದೆ. ಸಚಿವ ಸ್ಥಾನ ನೀಡಲು ವಿಳಂಬವಾಗುತ್ತಿರುವ ಕುರಿತು ಬೇಸರ ಇಲ್ಲ.

ಒಂದೆರಡು ದಿನ ವ್ಯಾತ್ಯಾಸವಾದರೂ ಅಡ್ಡಿಯಿಲ್ಲ. ಆದರೆ, ಉಪ ಚುನಾವಣೆಯಲ್ಲಿ ಸೋಲನುಭವಿಸಿರುವ ಶಾಸಕರನ್ನೂ ಸೇರಿ ಎಲ್ಲಾ 17 ಶಾಸಕರಿಗೂ ಸಚಿವ ಸ್ಥಾನ ನೀಡಬೇಕು. ನಾವೆಲ್ಲರೂ ಒಟ್ಟಾಗಿಯೇ ಇದ್ದೇವೆ. ಹೀಗಾಗಿ ಬಿಜೆಪಿ ಮತ್ತು ಸಿಎಂ ಯಡಿಯೂರಪ್ಪ ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ವಿಶ್ವಾಸ ಇದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಸಚಿವ ಸ್ಥಾನಕ್ಕಾಗಿ ಬ್ಲಾಕ್​ಮೇಲ್ ತಂತ್ರಕ್ಕೆ ಮುಂದಾದರಾ ಹೆಚ್​. ವಿಶ್ವನಾಥ್​?; ಪುಸ್ತಕ ಬರೆಯುವ ನೆಪದಲ್ಲಿ ಮಂತ್ರಿಗಿರಿ ಲಾಬಿ?
First published: