Mysuru Gang Rape Case :ಸಚಿವರ ಹೇಳಿಕೆಯ ಹಿಂದೆ ಯಾವುದೇ ದುರುದ್ದೇಶವಿರಲಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ ಪರ ಸಚಿವೆ ಪೂರ್ಣಿಮಾ ಶ್ರೀನಿವಾಸ್ ಬ್ಯಾಟಿಂಗ್

Home Minister Statement : ನಿನ್ನೆ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರಕರಣ ಸಂಬಂಧ ಮಾತನಾಡುತ್ತಾ, ಸಂಜೆ ವೇಳೆ ಆ ಹುಡುಗಿ ನಿರ್ಜನ ಪ್ರದೇಶಕ್ಕೆ ಏಕೆ ಹೋದಳು ಎಂದು ಪ್ರಶ್ನಿಸಿದ್ದರು. ಇವರ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಶಾಸಕಿ ಪೂರ್ಣಿಮಾ ಶ್ರೀನಿವಾಸ್

ಶಾಸಕಿ ಪೂರ್ಣಿಮಾ ಶ್ರೀನಿವಾಸ್

  • Share this:
ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ  ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆಗೆ ಹಲವು ವಿರೋಧಗಳು ವ್ಯಕ್ತವಾದ ಬೆನ್ನಲ್ಲೇ  ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸಚಿವರ ಪರ ಬ್ಯಾಟಿಂಗ್ ಮಾಡಿದ್ದಾರೆ. ಸಚಿವರ ಹೇಳಿಕೆಯ ಹಿಂದೆ ಯಾವುದೇ ದುರುದ್ದೇಶವಿರಲಿಲ್ಲ, ಅವರು ಹೆಣ್ಣು ಮಕ್ಕಳು ಜಾಗ್ರತೆಯಿಂದ ಇರಬೇಕು ಎನ್ನುವ ಕಾರಣಕ್ಕೆ ಆ ರೀತಿ ಹೇಳಿಕೆ ನೀಡಿದ್ದಾರೆ ಎಂದಿದ್ದಾರೆ.

ಸಚಿವರು ನೆಗೆಟಿವ್ ಆಗಿ ಆ ಹೇಳಿಕೆ ಕೊಟ್ಟಿದ್ದಲ್ಲ, ರಾತ್ರಿ 12 ಆದರೂ ಹೆಣ್ಣು ಮಕ್ಕಳು ಓಡಾಡಬೇಕು, ಅದು ಅವರ ಸ್ವತಂತ್ರ,  ಹೆಣ್ಣು ಮಕ್ಕಳು ಹಾಗೆ ಓಡಾಡ್ತಿದ್ರೇನೇ ಈಥರ ತೊಂದರೆಗೆ ಸಿಲುಕಿಕೊಳ್ಳುವುದಿಲ್ಲ, ಧೈರ್ಯ ಬರುತ್ತದೆ. ಹೆಣ್ಣುಮಕ್ಕಳನ್ನು ಓಡಾಡಬಾರದು ಅಂತ ನಿರ್ಬಂಧಿಸಲು ಆಗಲ್ಲ, ಯಾರಿಗೂ ಅವರನ್ನು ನಿರ್ಬಂಧಿಸುವ ಹಕ್ಕು ಇಲ್ಲ. ಅವರ ಸ್ವತಂತ್ರಕ್ಕೆ ಧಕ್ಕೆಯಾಗಬಾರದು, ಪುರುಷರ ನೋಡುವ ದೃಷ್ಟಿ ಬದಲಾಗಬೇಕು. ಸಚಿವರ ಆ ಸಮಯದಲ್ಲಿ ಮಹಿಳೆಯರು ಅಲ್ಲಿಗೆ ಹೋಗಬಾರದು ಅನ್ನೋ ಹೇಳಿಕೆ ಬೇರೆ ಅರ್ಥದಲ್ಲಿ ಭಾವಿಸಬಾರದು ಎಂದು  ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಆರಗ ಜ್ಞಾನೇಂದ್ರ ಅವರ ಎಡವಟ್ಟು ಹೇಳಿಕೆಗೆ ಸಮಾಜಾಯಿಶಿ ನೀಡಿದ್ದಾರೆ.

ಇನ್ನು ಈ ಪ್ರಕರಣದ ಕುರಿತು ನಮ್ಮ ಸರ್ಕಾರ ಮತ್ತು ಪೊಲೀಸ್ ಇಲಾಖೆ ದಕ್ಷತೆಯಿಂದ ಕೆಲಸ ಮಾಡ್ತಿದ್ದಾರೆ, ಸಧ್ಯದಲ್ಲಿ ಅಪರಾಧಿಗಳನ್ನು ಪತ್ತೆ ಹಚ್ಚಿ ಬಂಧಿಸಲಾಗುತ್ತದೆ, ಖಂಡಿತವಾಗಿಯೂ ಅಪರಾಧಿಗಳು ಸಿಕ್ಕಿಹಾಕಿಕೊಳ್ತಾರೆ. ಯಾವುದೇ ಕಾರಣಕ್ಕೂ ಯುವತಿ ಅನ್ಯಾಯವಾಗುವುದಿಲ್ಲ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

ಹೆಣ್ಣು ಮಕ್ಕಳ ಸುರಕ್ಷತೆ ನಿಜಕ್ಕೂ ಮುಖ್ಯ,  ಆದರೆ ದುರ್ದೈವ ಅಂದ್ರೆ, ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಾಚಾರ ಘಟನೆಗಳು  ಮರುಕಳಿಸುತ್ತಿದೆ. ಕಠಿಣ ಕಾನೂನುಗಳಾಗಿವೆ, ಇನ್ನೂ ಸ್ವಲ್ಪ ಹೆಚ್ಚಿನ ಕಠಿಣ ಕಾನೂನುಗಳು ಬರಬೇಕಿದೆ, ಒಬ್ಬರಿಗೆ ಸರಿಯಾದ ಶಿಕ್ಷೆಯಾದಾಗ  ಮಾತ್ರ ಕಾಮುಕರು ಎಚ್ಚೆತ್ತುಕೊಳ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಚುರುಕುಗೊಂಡ ತನಿಖೆ, ಡಿಜಿಪಿ ಪ್ರವೀಣ್ ಸೂದ್​ ಹಾಗೂ ಸಚಿವ ಹಾಲಪ್ಪ ಆಚಾರ್ ಇಂದು ಮೈಸೂರಿಗೆ ಭೇಟಿ

ನಿನ್ನೆ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರಕರಣ ಸಂಬಂಧ ಮಾತನಾಡುತ್ತಾ, ಸಂಜೆ ವೇಳೆ ಆ ಹುಡುಗಿ ನಿರ್ಜನ ಪ್ರದೇಶಕ್ಕೆ ಏಕೆ ಹೋದಳು ಎಂದು ಪ್ರಶ್ನಿಸಿದ್ದರು. ಇವರ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಬಳಿಕ ಗೃಹ ಸಚಿವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದು, ನಾನು ನನ್ನ ಮಗಳೆಂದು ಭಾವಿಸಿ ಆ ರೀತಿ ಹೇಳಿದ್ದೆ. ಇದರಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮಿಸಿ ಎಂದಿದ್ದರು. ಇನ್ನು ಘಟನೆ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸಿಸಿಟಿವಿ, ಟವರ್ ಲೊಕೇಷನ್ ಮೂಲಕ ಪೊಲೀಸರಿಗೆ ಆರೋಪಿಗಳ ಸುಳಿವು ಸಿಕ್ಕಿದೆ ಎನ್ನಲಾಗುತ್ತಿದೆ. ಇನ್ನು ಈ ಪ್ರಕರಣದ  ತನಿಖೆ ನಡೆಸಲು ಇಂದು ಡಿಜಿಪಿ ಪ್ರವೀಣ್ ಸೂದ್ ಅವರು ಕೂಡ ಮೈಸೂರಿಗೆ ತೆರಳುತ್ತಿದ್ದಾರೆ.

ಈ ಸಾಮೂಹಿಕ ಅತ್ಯಾಚಾರ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದು, ಮೈಸೂರಿನಲ್ಲಿ ಅಪರಾಧಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚುವಂತೆ ಸರಣಿ ಪ್ರತಿಭಟನೆಗಳು ನಡೆಯುತ್ತಿವೆ.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.

 
Published by:Sandhya M
First published: