ಮೈಸೂರು (ಜ. 13): ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಶಾಸಕ ಸಾರಾ ಮಹೇಶ್ ನಡುವಿನ ಜಟಾಪಟಿ ಮುಂದುವರೆದಿದೆ. ಸರಣಿ ಟ್ವೀಟ್ಗಳ ಮೂಲಕ ರೋಹಿಣಿ ಸಿಂಧೂರಿ ವಿರುದ್ಧ ಹರಿಹಾಯ್ದಿರುವ ಸಾರಾ ಮಹೇಶ್, ಜಿಲ್ಲಾಧಿಕಾರಿ ವರ್ತನೆ ಅಕ್ಷಮ್ಯ ಮತ್ತು ಖಂಡನೀಯ. ತಾವೊಬ್ಬ ಅತ್ಯಂತ ಪ್ರಾಮಾಣಿಕ ಅಧಿಕಾರಿ ಎಂದು ಬಿಂಬಿಸಿಕೊಳ್ಳುವ ಮೂಲಕ ಜನರ ಮೇಲೆ ಸವಾರಿ ಮಾಡಲು ಹೊರಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೇ , ತನಗೊಂದು ನ್ಯಾಯ,. ಪರರಿಗೊಂದು ನ್ಯಾಯ ಎಂಬಂತೆ ವರ್ತಿಸುತ್ತಾರೆ. ಎಂದು ಕೆಎಇ ಮೆಟ್ಟಿಲೇತ್ತಿದ್ದ ವಿವಾದವನ್ನು ಕೂಡ ಎಳೆದು ತಂದಿದ್ದಾರೆ. ಅಲ್ಲದೇ ಇಂತಹ ಅಧಿಕಾರಿ, ಸಾಂವಿಧಾನಿಕ ಸಂಸ್ಥೆಗಳು ಅಥವಾ ಸಮಿತಿಗಳಿಗೆ ಯಾವ ರೀತಿ ಅಧಿಕಾರಿಗಳು ಶಿಷ್ಟಾಚಾರ ಪಾಲಿಸಬೇಕೆಂದು ಸರ್ಕಾರ ಹೊರಡಿಸಿರುವ ಸುತ್ತೋಲೆಗಳನ್ನು ಅವರು ಓದಿ ಮೊದಲು ಅರ್ಥಮಾಡಿಕೊಳ್ಳಲಿ ಎಂದಿದ್ದಾರೆ.
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ರ್ವರ್ತನೆ ಅಕ್ಷಮ್ಯ ಮತ್ತು ಖಂಡನೀಯ. ತಾವೊಬ್ಬ ಅತ್ಯಂತ ಪ್ರಾಮಾಣಿಕ ಅಧಿಕಾರಿ ಎಂದು ಬಿಂಬಿಸಿಕೊಳ್ಳುತ್ತಿರುವ ಇವರು ಜನಪ್ರತಿನಿಧಿಗಳ ಮೇಲೆ ಸವಾರಿ ಮಾಡಲು ಹೊರಟಿದ್ದಾರೆ.
1/4
— Sa Ra Mahesh (@SaRa_Mahesh_JDS) January 13, 2021
ಮಾತಿನಲ್ಲಿ ಬ್ರಹ್ಮ ನೀತಿಯಲ್ಲಿ ಕ್ರೋಧಿ, ಈ ಲೋಕದ ಭುಂಜಕರು
ನಾ ಹೆಚ್ಚು ತಾ ಹೆಚ್ಚು ಎಂದು ನಡೆದಾಡುವರಯ್ಯ, ನಾನು ನೀನೆಂಬ ಉಭಯವಳಿದು ತಾನು ತಾನಾದುದ ನಾನಾರನೂ ಕಾಣೆನಯ್ಯ ಝೇಂಕಾರ ನಿಜಲಿಂಗಪ್ರಭುವೆ.
- ಜಕ್ಕಣಯ್ಯ
4/4
— Sa Ra Mahesh (@SaRa_Mahesh_JDS) January 13, 2021
ಇದಾದ ಬಳಿಕ ತಮಗೆ ಸಂಬಂಧಿಸಿದ ವಿಷಯಗಳ ಚರ್ಚೆಯಾಗದ ಹಿನ್ನಲೆ ಸಭೆಯಿಂದ ಹೊರಡುವುದಾಗಿ ಅವರು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ಈ ಸಭೆಗೆ ನಿಮ್ಮನ್ನು ಕರೆದಿರಲಿಲ್ಲ. ಆದರೂ ಸಭೆಗೆ ಬಂದಿದ್ದು ಸಂತೋಷ ಎಂದಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ