ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಲ್ಲಿ ರಾಜ್ಯದ ಸಂಸದರು ವಿಫಲ: ಸತೀಶ್ ಜಾರಕಿಹೊಳಿ

ಗೋಕಾಕ್ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನಕಲಿ ಕೇಸ್​ ಹಾಕಲಾಗಿದ್ದು, ಕಾಂಗ್ರೆಸ್ ಬೆಂಬಲಿಸುವರ ವಿರುದ್ದ ದಬ್ಬಾಳಿಕೆ ಮಾಡಲಾಗುತ್ತಿದೆ. ಇದರ ಬಗ್ಗೆ ಈಗಾಗಲೇ ಎಸ್​ಪಿ ಯವರ ಗಮನಕ್ಕೆ ತಂದಿದ್ದೇವೆ. ನಮ್ಮ ಕಾರ್ಯಕರ್ತರ ರಕ್ಷಣೆಗೆ ನಾವು ಸದಾ ಬದ್ಧವಾಗಿದ್ದೇವೆ

G Hareeshkumar | news18-kannada
Updated:September 14, 2019, 3:30 PM IST
ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಲ್ಲಿ ರಾಜ್ಯದ ಸಂಸದರು ವಿಫಲ: ಸತೀಶ್ ಜಾರಕಿಹೊಳಿ
ಮಾಜಿ ಸಚಿವ ಸತೀಶ್ ಜಾರಕಿಹೊಳಿ
  • Share this:
ಬೆಳಗಾವಿ(ಸೆ. 14) : ಪ್ರವಾಹ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಕೇಂದ್ರ ಸರ್ಕಾರ ಮೇಲೆ ಒತ್ತಡ ಹೇರುವಲ್ಲಿ ಸಂಸದರು ವಿಫಲವಾಗಿದೆ. ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಒಂದೇ ಸರ್ಕಾರವಿದ್ರೆ ಅಭಿವೃದ್ಧಿ ಆಗಬಹುದೆಂದು ಎಲ್ಲರೂ ನಿರೀಕ್ಷಿಸಿದ್ದರು. ಇದೀಗ ಅದು ಹುಸಿಯಾಗಿದೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಟೀಕಿಸಿದರು.

ಸಂತ್ರಸ್ತರಿಗೆ ಕೇವಲ 10 ಸಾವಿರ ಕೊಟ್ಟು ಸುಮ್ಮನಾಗಿದ್ದಾರೆ. ಬಾಡಿಗೆ, ಶೆಡ್ ನಿರ್ಮಾಣದ ಭರವಸೆ ಹುಸಿಯಾಗಿದೆ. ಬೆಳೆ ಹಾನಿ ಸಮೀಕ್ಷೆಯೂ ನಡೆದಿಲ್ಲ ಎಂದು ಆರೋಪಿಸಿದ ಅವರು, ಸರ್ಕಾರದ ಗಮನ ಸೆಳೆಯಲು ಬೆಳಗಾವಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ನಿರಾಶ್ರಿತರ ಜತೆಗೂಡಿ ಬೃಹತ್ ಪ್ರತಿಭಟನೆ ನಡೆಸಲು ದಿನಾಂಕವನ್ನು ನಿಗದಿ ಮಾಡಲಾಗುವುದು ಎಂದು ತಿಳಿಸಿದರು.

ಗೋಕಾಕ್ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನಕಲಿ ಕೇಸ್​ ಹಾಕಲಾಗಿದ್ದು, ಕಾಂಗ್ರೆಸ್ ಬೆಂಬಲಿಸುವರ ವಿರುದ್ದ ದಬ್ಬಾಳಿಕೆ ಮಾಡಲಾಗುತ್ತಿದೆ. ಇದರ ಬಗ್ಗೆ ಈಗಾಗಲೇ ಎಸ್​ಪಿ ಯವರ ಗಮನಕ್ಕೆ ತಂದಿದ್ದೇವೆ. ನಮ್ಮ ಕಾರ್ಯಕರ್ತರ ರಕ್ಷಣೆಗೆ ನಾವು ಸದಾ ಬದ್ಧವಾಗಿದ್ದೇವೆ ಎಂದು ರಮೇಶ ಜಾರಕಿಹೊಳಿ ಅಳಿಯ ಅಂಬಿರಾಯ್ ವಿರುದ್ಧ ಶಾಸಕ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ :  ರಮೇಶ ಸೀರಿಯಸ್ ರಾಜಕಾರಣಿ ಅಲ್ಲ, ಅವರನ್ನು ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ: ಸತೀಶ್ ಜಾರಕಿಹೊಳಿ

ಕ್ಷೇತ್ರದಲ್ಲಿ ಗ್ರಾಮಗಳಿಗೆ ಕಾರ್ಯಕರ್ತರ ವಿಶ್ವಾಸಕ್ಕೆ ತೆಗೆದುಕೊಳ್ಳುವ ಯತ್ನ ನಡೆಸಲಾಗಿದೆ. ಕ್ಷೇತ್ರವನ್ನು ಗೆಲ್ಲಲ್ಲು ಶಕ್ತಿ ಮೀರಿ ಪ್ರಯತ್ನ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಗೋಕಾಕ್ ಬ್ಲಾಕ್​, ವಿವಿಧ ಕಾಂಗ್ರೆಸ್ ಅಧ್ಯಕ್ಷರು ಪದಾಧಿಕಾರಿಗಳ ಬದಲಾವಣೆ ಮಾಡಲಾಗುವುದು ಎಂದು ಶಾಸಕ ಸತೀಶ್ ಜಾರಕಿಹಳಿ ಹೇಳಿದರು.

ಗೋಕಾಕ್ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಉಪಚುನಾವಣೆ ತಯಾರಿ ಆರಂಭವಾಗಿದ್ದು, ಮೊದಲ ಸುತ್ತಿನಲ್ಲಿ 30 ಗ್ರಾಮಗಳ ಪ್ರವಾಸವನ್ನು ನಡೆಸಲು ತೀರ್ಮಾನಿಸಲಾಗಿದೆ.  ಎರಡನೇ ಸುತ್ತಿನಲ್ಲಿ ಇನ್ನುಳಿದ 30 ಗ್ರಾಮಗಳ ಪ್ರವಾಸಕ್ಕೆ ತಯಾರಿ ಮಾಡಿ ಕ್ಷೇತ್ರದ ಕಾರ್ಯಕರ್ತರು, ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ  ಯೋಜನೆಯನ್ನು ಮಾಡಲಾಗಿದೆ. ಕಳೆದ 30 ವರ್ಷಗಳಿಂದ ರಮೇಶ ಜಾರಕಿಹೊಳಿ ಹಿಡಿತದಲ್ಲಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಿಗೆ ಆತ್ಮಸ್ಥೈರ್ಯ ತುಂಬಲು ಗೋಕಾಕ್​ನಲ್ಲಿ ಬೃಹತ್ ಸಮಾವೇಶ ನಡೆಸಲು ಕಾಂಗ್ರೆಸ್ ತಯಾರಿ ನಡೆಸಿದೆ ಎನ್ನಲಾಗಿದೆ.

First published:September 14, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading