• ಹೋಂ
 • »
 • ನ್ಯೂಸ್
 • »
 • ರಾಜ್ಯ
 • »
 • Hubballi: ಮಾಜಿ ಸ್ಪೀಕರ್​ ಬಸವರಾಜ ಹೊರಟ್ಟಿ ಕಾರು ಅಪಘಾತ; ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನಿಗೆ ಚಾಕು ಇರಿತ

Hubballi: ಮಾಜಿ ಸ್ಪೀಕರ್​ ಬಸವರಾಜ ಹೊರಟ್ಟಿ ಕಾರು ಅಪಘಾತ; ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನಿಗೆ ಚಾಕು ಇರಿತ

ಹೊರಟ್ಟಿ ಕಾರು ಅಪಘಾತ; ಬೈಕ್​ ಸವಾರನಿಗೆ ಗಾಯ

ಹೊರಟ್ಟಿ ಕಾರು ಅಪಘಾತ; ಬೈಕ್​ ಸವಾರನಿಗೆ ಗಾಯ

ಬಸವರಾಜ ಹೊರಟ್ಟಿ ಅವರ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.

 • News18 Kannada
 • 2-MIN READ
 • Last Updated :
 • Carapur
 • Share this:

ಹುಬ್ಬಳ್ಳಿ (ಆ.07:  ಮಾಜಿ ಸಭಾಪತಿ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ (Basavaraj Horatti) ಅವರು ಕಾರು ಅಪಘಾತವಾಗಿದೆ. ಬೈಕ್ ಗೆ (Bike) ಹೊರಟ್ಟಿ ಅವರ ಕಾರು ಡಿಕ್ಕಿ ಹೊಡೆದು, ಬೈಕ್ ಸವಾರನಿಗೆ (Bike Rider) ಗಾಯಗಳಾದ (Injury) ಘಟನೆ ಹುಬ್ಬಳ್ಳಿಯ (Hubballi) ಬಿ ವಿ ಬಿ ಕಾಲೇಜು ಆವರಣದಲ್ಲಿ (BVB College Campus) ನಡೆದಿದೆ.  ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಿದ್ದ ಪತ್ರಕರ್ತರ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ಮುಗಿಸಿಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿದೆ.


ಬೈಕ್​ ಸವಾರನಿಗೆ ಗಂಭೀರ ಗಾಯ


ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಯವರ ಕಾರಿಗೆ ಏಕಾಏಕಿ ಬಂದು ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಅಪಘಾತದಲ್ಲಿ ವಾಹನ ಸವಾರನಿಗೆ ಗಂಭೀರ ಗಾಯವಾಗಿದ್ದು, ಗಾಯಾಳುವನ್ನು ಸವದತ್ತಿ ‌ಮೂಲದ ಕೆಂಚಪ್ಪ ಎಂದು ಗುರುತಿಸಲಾಗಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಸ್ವಲ್ಪ ಹೊತ್ತು ಪ್ರಜ್ಞೆ ತಪ್ಪಿದ್ದ. ತಕ್ಷಣ ಆತನಿಗೆ ನೀರು ಕೊಟ್ಟು ಸ್ಥಳೀಯರು ಸುಧಾರಿಸಿಕೊಳ್ಳಲು ನೆರವಾದರು. ಬೈಕ್ ಡಿಕ್ಕಿ ಹೊಡೆದು ಕಾರಿನ ಮುಂಭಾಗ ಡ್ಯಾಮೇಜ್ ಆಗಿದೆ.
ಕರೆ ಮಾಡಿದ್ರು ಬರಲಿಲ್ಲ ಆ್ಯಂಬುಲೆನ್ಸ್​


ತಕ್ಷಣ ಆ್ಯಂಬುಲೆನ್ಸ್ ಗೆ ಫೋನ್ ಮಾಡಿದ್ದರೂ ಅರ್ಧ ಗಂಟೆಯಾದರೂ ಘಟನಾ ಸ್ಥಳಕ್ಕೆ ಆ್ಯಂಬ್ಯುಲೆನ್ಸ್ ಬರಲಿಲ್ಲ. 10 ನಿಮಿಷ ಕಾದು ನಿಂತ ಬಸವರಾಜ ಹೊರಟ್ಟಿ, ನಂತರ ಅಲ್ಲಿಂದ ಬೇರೆ ವಾಹನ ತರಿಸಿಕೊಂಡು ಹೊರಟು ಹೋಗಿದ್ದಾರೆ. ನಂತರ ಗಾಯಾಳುವನ್ನು ಆಟೋ ಮೂಲಕ ಕಿಮ್ಸ್ ಆಸ್ಪತ್ರೆಗೆ ಕಳುಹಿಸಿಕೊಡಲಾಯಿತು. ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದ್ದು, ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ.


ಇದನ್ನೂ ಓದಿ: ವಕ್ಫ್ ಬೋರ್ಡ್ ಅರ್ಜಿ ವಜಾ; ಈದ್ಗಾ ಮೈದಾನ ಸರ್ಕಾರದ ಆಸ್ತಿ ಎಂದು ಆದೇಶ


ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನಿಗೆ ಚಾಕು ಇರಿತ


ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕರ ನಡುವೆ ಜಗಳವಾಗಿ ಒಬ್ಬ ಚಾಲಕ ಮತ್ತೊಬ್ಬ ಚಾಲಕನಿಗೆ ಚಾಕುವಿನಿಂದ ಇರಿದ ಘಟನೆ ಹಳೆ ಹುಬ್ಬಳ್ಳಿಯ ಸದಾಶಿವನಗರದ 2 ನೇ ಕ್ರಾಸ್ ನಲ್ಲಿ ನಡೆದಿದೆ. ಆಟೋ ನಿಲ್ಲಿಸುವ ಸಂಬಂಧ ಆರಂಭಗೊಂಡ ಜಗಳ ವಿಕೋಪಕ್ಕೆ ಹೋಗಿ ದುರ್ಘಟನೆ ಸಂಭವಿಸಿದೆ. ಚಾಕುವಿಗೆ ಇರಿತಕ್ಕೊಳಗಾದ ಆಟೋ ಚಾಲಕನನ್ನು ಜಾಕೀರ್ ಎಂದು ಗುರುತಿಸಲಾಗಿದೆ. ಜಾಕೀರ ಸದಾಶಿವನಗರದ ತಮ್ಮ ಮನೆ ಬಳಿ ಆಟೊ ನಿಲ್ಲಿಸಲು ಹೋಗಿದ್ದಾನೆ.


ಇದನ್ನೂ ಓದಿ: ದಯಮಾಡಿ ಬಿಜೆಪಿ, ಜೆಡಿಎಸ್​ಗೆ ಮತ ಹಾಕಬೇಡಿ ಎಂದ ಮಾಜಿ ಸಿಎಂ ಸಿದ್ದರಾಮಯ್ಯ


ಇಬ್ಬರ ನಡುವೆ ಮಾತಿನ ಚಕಮಕಿ


ಈ ವೇಳೆ ವೇಗವಾಗಿ ಆಟೊ ಚಾಲನೆ ಮಾಡಿಕೊಂಡು ಬಂದಿದ್ದ ಆರೋಪಿ ನದೀಮ ಖವಾಸ, ಜಾಕೀರ್​ ಕಾಲಿನ ಮೇಲೆ ಆಟೋ ಹಾಯಿಸಿದ್ದಾನೆ. ಇದನ್ನು ಪ್ರಶ್ನಿಸಿದ್ದಕ್ಕೆ ಜಾಕೀರ್ ಮತ್ತು ಆತನ ಪತ್ನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಜಗಳ ತಾರಕಕ್ಕೇರಿದಾಗ ನದೀಮ್ ಖವಾಸ್, ಜಾಕೀರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಗಾಯಾಳು ಜಾಕೀರ್ ನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

top videos
  First published: