HOME » NEWS » State » MM KALBURGI MURDER CASE SUPREME COURT WAS CLEARED KALBURGI WIFE PETITION RH

ಎಂ.ಎಂ.ಕಲ್ಬುರ್ಗಿ ಕೊಲೆ ಪ್ರಕರಣ; ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಇತ್ಯರ್ಥಪಡಿಸಿದ ಸುಪ್ರೀಂಕೋರ್ಟ್

ಸುಪ್ರೀಂಕೋರ್ಟ್ ಈಗ ತನಿಖೆಯ ಮೇಲ್ವಿಚಾರಣೆ ಮಾಡುವ ಅಗತ್ಯ ಇಲ್ಲ.  ತನಿಖೆಯ ಪ್ರಗತಿ ವರದಿ ಪ್ರಕಾರ ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಸೆಷನ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ ಎಂದು ಹೇಳಿ, ಅರ್ಜಿ ಇತ್ಯರ್ಥಪಡಿಸಿತು. 

news18-kannada
Updated:January 17, 2020, 2:55 PM IST
ಎಂ.ಎಂ.ಕಲ್ಬುರ್ಗಿ ಕೊಲೆ ಪ್ರಕರಣ; ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಇತ್ಯರ್ಥಪಡಿಸಿದ ಸುಪ್ರೀಂಕೋರ್ಟ್
ಪ್ರೊ.ಎಂ.ಎಂ.ಕಲ್ಬುರ್ಗಿ.
  • Share this:
ನವದೆಹಲಿ: ವಿಚಾರವಾದಿ ಪ್ರೊ. ಎಂ.ಎಂ. ಕಲ್ಬುರ್ಗಿ ಕೊಲೆ ಪ್ರಕರಣವನ್ನು  ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇತ್ಯರ್ಥಪಡಿಸಿದೆ. 

ವಿಚಾರವಾದಿ ಪ್ರೊ. ಎಂ.ಎಂ. ಕಲ್ಬುರ್ಗಿ ಕೊಲೆ ಪ್ರಕರಣವನ್ನು ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಕೋರಿ ಕಲ್ಬುರ್ಗಿ ಹೆಂಡತಿ ಉಮಾದೇವಿ ಅವರು ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ  ನ್ಯಾ. ರೋಹಿಂಟನ್ ನಾರಿಮನ್ ಪೀಠ, ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ  ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಈಗಾಗಲೇ ಪ್ರಕರಣ ತನಿಖೆ ಪೂರ್ಣ ಮುಗಿದಿದೆ. ಸುಪ್ರೀಂಕೋರ್ಟ್ ಈಗ ತನಿಖೆಯ ಮೇಲ್ವಿಚಾರಣೆ ಮಾಡುವ ಅಗತ್ಯ ಇಲ್ಲ.  ತನಿಖೆಯ ಪ್ರಗತಿ ವರದಿ ಪ್ರಕಾರ ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಸೆಷನ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ ಎಂದು ಹೇಳಿ, ಅರ್ಜಿ ಇತ್ಯರ್ಥಪಡಿಸಿತು.

ಇದನ್ನು ಓದಿ: ದೇವರ ಮೂರ್ತಿ ಮೇಲೆ ಮೂತ್ರ ಮಾಡುವ ಹೇಳಿಕೆಗೆ ಕಲ್ಬುರ್ಗಿ ಹತ್ಯೆ; ಎಸ್​ಐಟಿ ಚಾರ್ಜ್​ಶೀಟ್​ನಲ್ಲಿ ಕೊಲೆ ರಹಸ್ಯ ಬಯಲು
First published: January 17, 2020, 2:55 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories